ಕುಶಾಲನಗರ, ಫೆ. ೧೮: ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ವತಿಯಿಂದ ಕುಶಾಲನಗರ ತಾಲೂಕು ಕೇಂದ್ರದಲ್ಲಿ ಕಾರ್ಮಿಕ ಸಂಘಟನೆಗಳ ಪ್ರಮುಖರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಸಿಐಟಿಯು ಜಿಲ್ಲಾ ಸಂಘಟನೆಯ ಅಧ್ಯಕ್ಷÀ ಪಿ.ಆರ್. ಭರತ್ ನೇತೃತ್ವದಲ್ಲಿ ಕುಶಾಲನಗರ ತಾಲೂಕು ಕಚೇರಿ ಮುಂಭಾಗ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊAಡು ಪ್ರತಿಭಟನೆ ನಡೆಸಲಾಯಿತು.

ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು, ಡಾ. ಸ್ವಾಮಿನಾಥನ್ ಶಿಫಾರಸ್ಸಿನಂತೆ ಕನಿಷ್ಟ ಬೆಂಬಲ ಬೆಲೆಗೆ ಕಾನೂನು ರಚಿಸಬೇಕು, ಕೃಷಿ ಕಾರ್ಮಿಕರಿಗೆ ಸಮಗ್ರವಾದ ಕಲ್ಯಾಣ ಯೋಜನೆಗಳನ್ನು ರೂಪಿಸಬೇಕು, ಕಾರ್ಮಿಕ ಪರವಾದ ನೀತಿಗಳನ್ನು ಜಾರಿಗೊಳಿಸಬೇಕು.

ಬರಪೀಡಿತ ಕರ್ನಾಟಕ ರೈತರ ನೆರವಿಗೆ ಕೇಂದ್ರ ಸರ್ಕಾರ ಸ್ಪಂದಿಸಬೇಕು. ಮತ್ತಿತರ ಬೇಡಿಕೆಗಳನ್ನು ಮುಂದಿಟ್ಟುಕೊAಡು ಹೋರಾಟಗಾರರು ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಈ ಸಂದರ್ಭ ಅಂಗನವಾಡಿ ಕಾರ್ಮಿಕರ ಸಂಘಟನೆಯ ಜಮುನ, ಸಾವಿತ್ರಿ, ಚಂದ್ರಿಕಾ ಬಿಸಿಯೂಟ ನೌಕರರ ಸಂಘಟನೆಯ ಮುಖಂಡರಾದ ಚಾಮುಂಡಿ, ಗ್ರಾಮ ಪಂಚಾಯಿತಿ ನೌಕರರ ಸಂಘದ ದಿನೇಶ್, ಅನಿಲ್, ತೋಟ ಕಾರ್ಮಿಕರ ಸಂಘಟನೆಯ ಪ್ರಮುಖರಾದ ಪಟ್ಟು ಮತ್ತಿತರರು ಇದ್ದರು.

ಹಲವು ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ಕುಶಾಲನಗರ ತಾಲೂಕು ತಹಶೀಲ್ದಾರ್ ಕಚೇರಿ ಮೂಲಕ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದರು.