ಗೋಣಿಕೊಪ್ಪಲು ಫೆ. ೧೮: ಇತ್ತೀಚೆಗೆ ಲಯನ್ಸ್ ಪದವಿಪೂರ್ವ ಕಾಲೇಜು ಮತ್ತು ಪ್ರೌಢಶಾಲೆಯ ಆವರಣದಲ್ಲಿ ಕ್ರೀಡಾ ದಿನವನ್ನು ಆಚರಿಸಲಾಯಿತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಪದ್ಮಶ್ರೀ ಪುರಸ್ಕೃತ, ಸ್ಕಾ÷್ವಶ್ ಆಟಗಾರ್ತಿ ಜೋಶ್ನಾ ಚಿಣ್ಣಪ್ಪ ಆಗಮಿಸಿದ್ದರು. ಕ್ರೀಡಾ ಜ್ಯೋತಿಯನ್ನು ಬೆಳಗಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಇವರು, ಜೀವನದಲ್ಲಿ ಸಾಧನೆ ಮಾಡಬೇಕಾದರೆ ಕ್ರೀಡೆಯ ಜೊತೆಗೆ ಶಿಕ್ಷಣವು ಬಹಳ ಮುಖ್ಯ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ವಿದ್ಯಾರ್ಥಿಗಳಿಗೆ ತನ್ನದೇ ಉದಾಹರಣೆ ನೀಡುತ್ತಾ, ಪೋಷಕರು ಮತ್ತು ಕುಟುಂಬದ ಬೆಂಬಲವು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಉಲ್ಲೇಖಿಸಿದರು. ಕಾರ್ಯಕ್ರಮದಲ್ಲಿ ಲಯನ್ಸ್ ವಿದ್ಯಾಸಂಸ್ಥೆ ಮತ್ತು ಲಯನ್ಸ್ ಕ್ಲಬ್‌ನ ಅಧ್ಯಕ್ಷರುಗಳಾದ ಪಿ. ಎನ್. ಪೆಮ್ಮಯ್ಯ ಹಾಗೂ ಪಿ. ಲೋಕೇಶ್ ಕಾರ್ಯಪ್ಪ ರವರು ಅತಿಥಿಗಳನ್ನು ಸನ್ಮಾನಿಸಿ ಗೌರವಿಸಿದರು. ಕ್ರೀಡಾ ದಿನದ ಅಂಗವಾಗಿ ವಿವಿಧ ಆಟೋಟದ ಸ್ಪರ್ಧೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು. ರಾಜ್ಯ ಮತ್ತು ರಾಷ್ಟçಮಟ್ಟದಲ್ಲಿ ಶಾಲಾ-ಕಾಲೇಜುಗಳನ್ನು ಪ್ರತಿನಿಧಿಸಿದ್ದ ವಿದ್ಯಾರ್ಥಿಗಳನ್ನು ಈ ವೇಳೆ ಸನ್ಮಾನಿಸಿ ಗೌರವಿಸಲಾಯಿತು. ಎನ್‌ಸಿಸಿ, ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಇತರ ವಿದ್ಯಾರ್ಥಿಗಳು ಪಥಸಂಚಲನ ಕಾರ್ಯಕ್ರಮ ನಡೆಸಿಕೊಟ್ಟರು. ಜೋಶ್ನಾ ಚಿಣ್ಣಪ್ಪ ಅವರ ತಂದೆ ಅಂಜನ್ ಚಿಣ್ಣಪ್ಪ, ಲಯನ್ಸ್ ಕ್ಲಬ್‌ನ ಸದಸ್ಯರು, ಲಯನ್ಸ್ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ಪದಾಧಿಕಾರಿಗಳು, ಸೇರಿದಂತೆ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಕಾಲೇಜಿನ ಪ್ರಾಂಶುಪಾಲರು ಹಾಗೂ ಪೋಷಕರು ಹಾಜರಿದ್ದರು. ವಿದ್ಯಾರ್ಥಿ ಅದ್ವಿಕ ನಿರೂಪಿಸಿ, ಭಾಷಿತ ಸ್ವಾಗತಿಸಿ, ದೃಶ್ಯ ಅತಿಥಿಗಳನ್ನು ಪರಿಚಯಿಸಿ, ದೇಚಕ್ಕ ವಂದಿಸಿದರು.