ಮಡಿಕೇರಿ, ಫೆ. ೧೮: ಕೊಡವ ಭಾಷೆಯನ್ನು ಸಂವಿಧಾನದ ೮ ನೇ ಶೆಡ್ಯೂಲ್‌ಗೆ ಸೇರಿಸಬೇಕು ಎಂದು ಒತ್ತಾಯಿಸಿ ವಿಶ್ವ ರಾಷ್ಟç ಸಂಸ್ಥೆಯ ಅಂತರರಾಷ್ಟಿçÃಯ ಮಾತೃಭಾಷಾ ದಿನವಾದ ಫೆ.೨೧ ರಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಬೆಳಗ್ಗೆ ೧೦.೩೦ ಗಂಟೆಗೆ ಶಾಂತಿಯುತ ಧರಣಿ ಸತ್ಯಾಗ್ರಹ ನಡೆಸಿ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.

ಯುನೇಸ್ಕೋದ ೨೦೨೪ ರ ಘೋಷವಾಕ್ಯದಂತೆ ಅಂತರ ಜನಾಂಗದ ತಿಳುವಳಿಕೆಗೆ ವಿಶ್ವದಾದ್ಯಂತ ಎಲ್ಲಾ ಮಾತೃಭಾಷೆಗಳನ್ನು ಶಿಕ್ಷಣ ಸಂಸ್ಥೆಗಳಲ್ಲಿ ಪ್ರಚುರ ಪಡಿಸುವುದು ಈ ಬಾರಿಯ ಮಹತ್ವವಾಗಿದೆ. ಕೊಡವ ಭಾಷೆ, ಪ್ರಕೃತಿಯ ಆರಾಧಕರಾಗಿರುವ ಆದಿಮ ಸಂಜಾತ ಕೊಡವರ ಮಾತೃಭಾಷೆಯಾಗಿದ್ದು, ಜೀವನದ ಆತ್ಮವಾಗಿದೆ. ಜನ್ಮ ನೀಡಿದ ತಾಯಿ, ಮಾತೃಭಾಷೆ ಕೊಡವ, ಮಾತೃಭೂಮಿ ಕೊಡವ ಲ್ಯಾಂಡ್, ಮಾತೆ ಕಾವೇರಿ ಮತ್ತು ಪ್ರಕೃತಿ ಮಾತೆಯಿಂದ ಕೊಡವ ಜನಜೀವನವನ್ನು ಬೇರ್ಪಡಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.