ಮಡಿಕೇರಿ, ಫೆ. ೧೯: ಬಾಳೆಲೆ ಗ್ರಾಮ ಪಂಚಾಯಿತಿ ವತಿಯಿಂದ ಸಂವಿಧಾನ ಜಾಗೃತಿ ಜಾಥಾವನ್ನು ಶಾಲಾ ಕಾಲೇಜು ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಸೇರಿ ಬರಮಾಡಿಕೊಂಡರು. ಬಾಳೆಲೆ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ಮೂಲಕ ಸಂವಿಧಾನ ಜಾಗೃತಿ ಜಾಥಾ ರಥವು ಸಾಗಿ ಬಂತು, ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಪ್ರೀತಿ ಚಿಕ್ಕ ಮಾದಯ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯ ಭಾಷಣಕಾರರಾಗಿ ಮಾತನಾಡಿದ ವಿಜಯಲಕ್ಷಿö್ಮ ಪ್ರೌಢಶಾಲೆಯ ಸಮಾಜ ವಿಜ್ಞಾನ ಶಿಕ್ಷಕರಾದ ಸುಬ್ಬಯ್ಯ ಡಿ.ಯನ್. ನಮ್ಮ ದೇಶದ ಎಲ್ಲಾ ಪ್ರಜೆಗಳಿಗೂ ಸಮಾನವಾದ ಹಕ್ಕುಗಳಿದ್ದು ಡಾ ಬಿ.ಅರ್. ಅಂಬೇಡ್ಕರ್ ಅವರ ಶ್ರಮ ಮತ್ತು ಮುಂದಾಲೋಚನೆಯೆ ಕಾರಣ ಎಂದರು.

ಬಾಳೆಲೆ ಸೆಂಟರ್ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷರಾದ ಅಳಮೇಂಗಡ ಬೋಸ್ ಮಂದಣ್ಣ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾಮಾಜಿಕವಾಗಿ ಮುಂದೆ ಬರಲು ವಿದ್ಯಾಬ್ಯಾಸವೊಂದೆ ಮಾನದಂಡವೆAದು ಹೇಳಿದರು. ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಬಾಳೆಲೆ ಪ್ರತಿಭಾ ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳು ಸಂವಿಧಾನದ ಶ್ರೇಯಸ್ಸನ್ನು ಸಾರುವ ನೃತ್ಯ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮುಕ್ಕಾಟಿರ ಜಾನಕಿ ಕಾವೇರಪ್ಪ ಮಾತನಾಡಿದರು. ಸಂವಿಧಾನ ಜಾಥಾದ ನೋಡಲ್ ಅಧಿಕಾರಿ ಪಶುಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕರಾದ ನವೀನ್ ಕುಮಾರ್, ಬಾಳೆಲೆ ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಆದೇಂಗಡ ವಿನು ಉತ್ತಪ್ಪ, ಪೋಡಮಾಡ ಸುಖೇಶ್ ಭೀಮಯ್ಯ, ಅಡ್ಡೇಂಗಡ ನವೀನ್ ಪುಷ್ಪಾವತಿ ಚಂದ್ರ, ಪ್ರಮುಖರಾದ ಪೋಡಮಾಡ ಮೋಹನ್, ರಘು, ಗಣೇಶ್ ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಪ್ರಮುಖರು ವಿದ್ಯಾರ್ಥಿಗಳು, ಶಾಲಾ ಶಿಕ್ಷಕರು ಸಿಬ್ಬಂದಿ ಹಾಜರಿದ್ದರು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪರಮೇಶ್ ಸ್ವಾಗತಿಸಿ ನಿರೂಪಿಸಿದರು.