x

ರೂ. ೨,೩೦೦ ಕೋಟಿ ಹೂಡಿಕೆಗೆ ಒಪ್ಪಂದ

ಬೆAಗಳೂರು, ಫೆ. ೧೯: ಟಾಟಾ ಸಮೂಹದ ಭಾಗವಾಗಿರುವ ಏರ್ ಇಂಡಿಯಾ ಮತ್ತು ಟಾಟಾ ಅಡ್ವಾನ್ಸಡ್ ಸಿಸ್ಟಮ್ಸ್ ಲಿಮಿಟೆಡ್ ರಾಜ್ಯದಲ್ಲಿ ವಿವಿಧ ಯೋಜನೆಗಳಿಗೆ ೨,೩೦೦ ಕೋಟಿ ರೂ. ಹೂಡಿಕೆ ಮಾಡಲು ಮುಂದಾಗಿವೆ. ಈ ಸಂಬAಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ರಾಜ್ಯ ಸರ್ಕಾರದ ಜೊತೆ ಒಡಂಬಡಿಕೆಗೆ ಸಹಿ ಹಾಕಿದರು. ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಮುಂದಾಳತ್ವದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ಏರ್ ಇಂಡಿಯಾದ ಮುಖ್ಯ ವಾಣಿಜ್ಯ ವ್ಯವಹಾರ ಅಧಿಕಾರಿ ನಿಪುಣ್ ಅಗರವಾಲ್ ಹಾಗೂ ಟಿಎಸ್‌ಎಸ್‌ಎಲ್ ಸಿಇಒ ಸುಕರಣ್ ಸಿಂಗ್ ಒಡಂಬಡಿಕೆ ಪತ್ರಗಳನ್ನು ಪರಸ್ಪರ ವಿನಿಮಯ ಮಾಡಿಕೊಂಡರು.

ಘೋಷವಾಕ್ಯ ಬದಲಾವಣೆ ವಿವಾದ - ಸಮರ್ಥನೆ

ಬೆಂಗಳೂರು, ಫೆ. ೧೯: ವಸತಿ ಶಾಲೆಗಳಲ್ಲಿ ಘೋಷವಾಕ್ಯ ಬದಲಾವಣೆ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಸರ್ಕಾರ ಈ ಬಗ್ಗೆ ಸಮರ್ಥನೆ ನೀಡಿದೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು, ಸಾಮಾಜಿಕ ಸ್ಥಿತಿಗಳ ತಕ್ಕಂತೆ ಬದಲಾವಣೆ ಆಗಬೇಕು. ಧೈರ್ಯವಾಗಿ ಪ್ರಶ್ನಿಸಿ ಎಂದಿದ್ದರಲ್ಲಿ ತಪ್ಪಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ. ಕುತೂಹಲ ಇಲ್ಲ ಅಂದರೆ ಕಲಿಕೆ ಬರಲ್ಲ. ಕಲಿಕೆಯೇ ಬರಲಿಲ್ಲ ಎಂದರೆ ಜ್ಞಾನ ಬರಲ್ಲ. ಸಮಾಜದಲ್ಲಿ ಪ್ರಬುದ್ಧತೆ ಇರಲ್ಲ. ಪ್ರಬುದ್ಧ ಭಾರತ, ಪ್ರಬುದ್ಧ ಸಮಾಜ ಕಟ್ಟಬೇಕು ಎಂದು ಅಂಬೇಡ್ಕರ್ ಹೇಳಿದ್ದಾರೆ. ಅದು ಬೆಳೆಯಬೇಕು ಎಂದರೆ ಪ್ರಶ್ನೆ ಮಾಡಲೇಬೇಕು ಅಲ್ಲವೇ ಎಂದು ಪ್ರಶ್ನಿಸಿದರು. ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಯಬೇಕು. ಅದಕ್ಕೆ ಪ್ರಶ್ನೆ ಕೇಳುವುದು ಮುಖ್ಯ. ಎಲ್ಲದಕ್ಕೂ ಉತ್ತರ ಸಿಗುವುದಿಲ್ಲ. ಪ್ರಶ್ನೆ ಮಾಡಿದರೆ ವೈಜ್ಞಾನಿಕ ಮನೋಭಾವ ಬೆಳೆಯುತ್ತೆ. ಶಿಕ್ಷಕರಿಗೆ ಹೊಸ ರೂಪದಲ್ಲಿ ಕಲಿಕೆ ಆಗುತ್ತದೆ ಎಂದು ಹೇಳಿದರು.

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಯುವಕನಿಗೆ ಶಿಕ್ಷೆ

ಬೆಂಗಳೂರು, ಫೆ. ೧೯: ಅಪ್ರಾಪ್ತ ಶಾಲಾ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಯುವಕನಿಗೆ ಹೈಕೋರ್ಟ್ ಮೂರು ವರ್ಷ ಜೈಲು ಶಿಕ್ಷೆ ಮತ್ತು ೧೦,೦೦೦ ರೂಪಾಯಿ ದಂಡ ವಿಧಿಸಿದೆ. ಆರೋಪಿಗಳನ್ನು ಖುಲಾಸೆಗೊಳಿಸಿದ ಕೆಳ ನ್ಯಾಯಾಲಯದ ತೀರ್ಪನ್ನೂ ಉನ್ನತ ನ್ಯಾಯಾಲಯ ರದ್ದುಗೊಳಿಸಿದೆ. ಪ್ರಾಸಿಕ್ಯೂಷನ್‌ನ ಕ್ರಿಮಿನಲ್ ಮೇಲ್ಮನವಿ ಅರ್ಜಿಯನ್ನು ಪರಿಗಣಿಸಿದ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್‌ಕುಮಾರ್ ಅವರಿದ್ದ ವಿಭಾಗೀಯ ಪೀಠ ಇತ್ತೀಚೆಗೆ ಈ ಆದೇಶ ನೀಡಿದೆ. ಚಿಕ್ಕಮಗಳೂರು ಜಿಲ್ಲೆಯ ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ೨೦೧೪ರ ಅಕ್ಟೋಬರ್ ೨೬ರಂದು ಈ ಘಟನೆ ನಡೆದಿತ್ತು. ಅಪರಾಧ ಎಸಗಿದಾಗ ಆರೋಪಿಗೆ ೧೮ ವರ್ಷ ವಯಸ್ಸಾಗಿತ್ತು ಮತ್ತು ಪ್ರಸ್ತುತ ಆತನಿಗೆ ೨೮ ವರ್ಷ. ಅಪರಾಧಿಗಳ ಪರಿವೀಕ್ಷಣಾ ಕಾಯ್ದೆಯಡಿ ಪ್ರಯೋಜನ ನೀಡಿ ಅವರನ್ನು ಬಿಡುಗಡೆ ಮಾಡಬೇಕೆಂಬ ಮನವಿಯನ್ನು ನ್ಯಾಯಾಲಯ ನಿರಾಕರಿಸಿತು. ಜೂನ್ ೨೦, ೨೦೧೨ ರಂದು ಪೋಕ್ಸೋ ಕಾಯ್ದೆ ಜಾರಿಯಾಗಿರುವುದಾಗಿ ಹೇಳಿದ ನ್ಯಾಯಾಲಯ, ಅಪರಾಧಿಗಳ ಪರಿವೀಕ್ಷಣಾ ಕಾಯ್ದೆಯ ಪ್ರಯೋಜನವನ್ನು ಆರೋಪಿಗಳಿಗೆ ವಿಸ್ತರಿಸಲಾಗುವುದಿಲ್ಲ ಎಂದು ಹೇಳಿತು.

ಎಲ್ಲಾ ಗ್ರಾ.ಪಂ.ಗಳಲ್ಲಿ ಬಜೆಟ್ ಮಂಡನೆ, ಅಂಗೀಕಾರ ಕಡ್ಡಾಯ

ಕಲಬುರಗಿ, ಫೆ. ೧೯: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಸಚಿವ ಪ್ರಿಯಾಂಕ್ ಖರ್ಗೆ ಅವರು ಇತಿಹಾಸದಲ್ಲೇ ಪ್ರಥಮ ಬಾರಿಗೆ ಎಲ್ಲಾ ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ಪತ್ರ ಬರೆದು ಬಜೆಟ್ ಸಿದ್ಧಪಡಿಸಿ ಗ್ರಾಮ ಪಂಚಾಯಿತಿ ಸಭೆಗಳಲ್ಲಿ ಮಂಡಿಸಿ ಅನುಮೋದನೆ ಪಡೆಯುವಂತೆ ಸೂಚಿಸಿದ್ದಾರೆ. ಗ್ರಾ.ಪಂ. ಅಧ್ಯಕ್ಷರುಗಳಿಗೆ ಪತ್ರ ಬರೆದಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು, ತಮ್ಮ ಕರ್ತವ್ಯ ಮತ್ತು ಜವಾಬ್ದಾರಿಗಳನ್ನು ನಿಭಾಯಿಸುವಂತೆ ಸೂಚಿಸಿದ್ದಾರೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ಕಾಯಿದೆ ೧೯೯೩ರ ಪ್ರಕಾರ, ಗ್ರಾ.ಪಂ.ಗಳು ಅವರು ಪಡೆಯುವ ಅನುದಾನ ಮತ್ತು ಗ್ರಾ.ಪಂ.ಗಳಲ್ಲಿ ಸಾರ್ವಜನಿಕರಿಂದ ವಿವಿಧ ತೆರಿಗೆಗಳನ್ನು ಸಂಗ್ರಹಿಸುವ ಆಧಾರದ ಮೇಲೆ ಪ್ರತಿ ವರ್ಷ ತಮ್ಮ ಬಜೆಟ್ ಅನ್ನು ಸಿದ್ಧಪಡಿಸಬೇಕು ಎಂದು ಹೇಳಿದ್ದಾರೆ. ಅಧ್ಯಕ್ಷರುಗಳು ತಮ್ಮಲ್ಲಿರುವ ಮೊತ್ತದ ವಿವರಗಳನ್ನು ಮತ್ತು ವಿವಿಧ ಅಭಿವೃದ್ಧಿ ಚಟುವಟಿಕೆಗಳನ್ನು ತೆಗೆದುಕೊಳ್ಳುವ ಪ್ರಸ್ತಾವನೆಯನ್ನು ಬಜೆಟ್‌ನಲ್ಲಿ ನಮೂದಿಸಬೇಕು. ಅದು ಕಡ್ಡಾಯವಾಗಿದೆ. ಮಾರ್ಚ್ ೧೦ರ ಮೊದಲು ಬಜೆಟ್ ಸಿದ್ಧಪಡಿಸಿ ಅಂಗೀಕರಿಸಬೇಕು. ಬಜೆಟ್ ಮಂಡನೆಯನ್ನು ಸಂಬAಧಿಸಿದ ತಾಲೂಕು ಪಂಚಾಯಿತಿಗಳಿಗೆ ಕಳುಹಿಸಬೇಕು ಎಂದು ಖರ್ಗೆ ಹೇಳಿದರು.

ಸಿದ್ದರಾಮಯ್ಯ ವಿರುದ್ಧದ ವಿಚಾರಣೆಗೆ ಸುಪ್ರೀಂ ತಡೆ

ಬೆಂಗಳೂರು, ಫೆ. ೧೯: ೨೦೨೨ ರಲ್ಲಿ ರಾಜ್ಯದಲ್ಲಿ ನಡೆದಿದ್ದ ಪ್ರತಿಭಟನಾ ಮೆರವಣಿಗೆಗೆ ಸಂಬAಧಿಸಿದAತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧದ ವಿಚಾರಣೆಗೆ ಸುಪ್ರೀಂಕೋರ್ಟ್ ಸೋಮವಾರ ತಡೆ ನೀಡಿದೆ. ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್ ಮತ್ತು ಪಿ ಕೆ ಮಿಶ್ರಾ ಅವರ ಪೀಠವು ಕರ್ನಾಟಕ ಸರ್ಕಾರ ಮತ್ತು ಪ್ರಕರಣದ ದೂರುದಾರರಿಗೆ ನೋಟಿಸ್ ಜಾರಿ ಮಾಡಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ರಾಜ್ಯ ಸಚಿವರಾದ ಎಂ ಬಿ ಪಾಟೀಲ್ ಮತ್ತು ರಾಮಲಿಂಗಾ ರೆಡ್ಡಿ ಅವರಿಗೆ ೧೦,೦೦೦ ರೂಪಾಯಿ ದಂಡ ವಿಧಿಸಿದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು, ಮಾರ್ಚ್ ೬ ರಂದು ವಿಶೇಷ ನ್ಯಾಯಾಲಯ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿದ್ದ ಕೆ.ಎಸ್.ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬೆಂಗಳೂರಿನ ನಿವಾಸಕ್ಕೆ ಮುತ್ತಿಗೆ ಹಾಕಿದ ಕಾಂಗ್ರೆಸ್ ಮುಖಂಡರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ವಿಚಾರಣೆಗೆ ಹಾಜರಾಗದ ಕೇಜ್ರಿವಾಲ್ ವಿರುದ್ಧ ಪ್ರಕರಣ

ನವದೆಹಲಿ, ಫೆ. ೧೯: ದೆಹಲಿ ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬAಧಿಸಿದAತೆ ೬ ಬಾರಿ ಸಮನ್ಸ್ ನೀಡಿದರೂ ವಿಚಾರಣೆಗೆ ಹಾಜರಾಗದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರವಾಲ್ ವಿರುದ್ಧ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ. ಕೇಜ್ರವಾಲ್ ಅವರಿಗೆ ನೀಡಲಾದ ಮೊದಲ ಮೂರು ಸಮನ್ಸ್ಗಳನ್ನು ಉದ್ದೇಶಪೂರ್ವಕವಾಗಿ ಪಾಲಿಸದ ಆರೋಪದ ಮೇಲೆ ಐಪಿಸಿಯ ಸೆಕ್ಷನ್ ೧೭೪ರ ಅಡಿಯಲ್ಲಿ ದೂರು ದಾಖಲಿಸಲಾಗಿದೆ. ಕೇಜ್ರವಾಲ್ ಅವರು ಸತತವಾಗಿ ವಿಚಾರಣೆಗೆ ಗೈರಾದ ಬಗ್ಗೆ ನ್ಯಾಯಾಲಯದ ಗಮನಕ್ಕೂ ತರಲಾಗಿದೆ. ಹಾಗಾಗಿ ಕೇಜ್ರವಾಲ್ ಅವರು ಕಾನೂನು ಕ್ರಮಕ್ಕೆ ಅರ್ಹರಾಗಿದ್ದಾರೆ. ಸಮನ್ಸ್ನ ಸಿಂಧುತ್ವದ ಬಗ್ಗೆ ಯಾವುದೇ ಪ್ರಶ್ನೆ ಉದ್ಭವಿಸುವುದಿಲ್ಲ. ಕೇಜ್ರವಾಲ್ ಅವರು ಉದ್ದೇಶಪೂರ್ವಕವಾಗಿ ವಿಚಾರಣೆಗೆ ಹಾಜರಾಗದಿರುವುದು ಅಪರಾಧ ಎಂದು ಇ.ಡಿ ಮೂಲಗಳು ತಿಳಿಸಿವೆ.

ಇಂದು ರಾಹುಲ್ ವಿಚಾರಣೆ - ಯಾತ್ರೆಗೆ ಬ್ರೇಕ್

ನವದೆಹಲಿ, ಫೆ. ೧೯: ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬAಧಿಸಿದAತೆ ಸುಲ್ತಾನ್‌ಪುರ ಜಿಲ್ಲಾ ಸಿವಿಲ್ ನ್ಯಾಯಾಲಯಕ್ಕೆ ಹಾಜರಾಗುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸಮನ್ಸ್ ಜಾರಿ ಮಾಡಿರುವುದರಿಂದ ಮಂಗಳವಾರ ಬೆಳಿಗ್ಗೆ ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ವಿರಾಮ ನೀಡಲಾಗುವುದು ಎಂದು ಕಾಂಗ್ರೆಸ್ ಸಂವಹನ ವಿಭಾಗದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ತಿಳಿಸಿದ್ದಾರೆ. ಭಾರತ್ ಜೋಡೋ ನ್ಯಾಯ್ ಯಾತ್ರೆ ಇಂದು ೩೭ನೇ ದಿನಕ್ಕೆ ಕಾಲಿಟ್ಟಿದ್ದು, ಮಂಗಳವಾರ ಬೆಳಿಗ್ಗೆ ಬ್ರೇಕ್ ತೆಗೆದುಕೊಳ್ಳಲಾಗುವುದು ಮತ್ತು ಮಧ್ಯಾಹ್ನ ೨ ಗಂಟೆಗೆ ಅಮೇಥಿಯ ಫರ್ಸತ್‌ಗಂಜ್‌ನಿAದ ಪುನರಾರಂಭವಾಗಲಿದೆ. ಆಗಸ್ಟ್ ೪, ೨೦೧೮ ರಂದು ಬಿಜೆಪಿ ನಾಯಕರೊಬ್ಬರು ದಾಖಲಿಸಿದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬAಧಿಸಿದAತೆ ಹಾಜರಾಗಲಿದ್ದಾರೆ.