ಗೋಣಿಕೊಪ್ಪಲು, ಫೆ. ೧೯: ಕೊಡಗಿನ ಗಡಿಭಾಗವಾದ ಕುಟ್ಟ ಸಮೀಪವಿರುವ ಕೆ.ಬಾಡಗ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಪ್ರಾಪ್ತೆ ಬಾಲಕಿಯ ಮೇಲೆ ಅತ್ಯಾಚಾರ ನಡೆದು ನಂತರ ಮನನೊಂದು ಆತ್ಮಹತ್ಯೆಗೆ ಶರಣಾದ ಪ್ರಕರಣಕ್ಕೆ ಸಂಬAಧಿಸಿದAತೆ ಆರೋಪಿಗಳನ್ನು ಬಂಧಿಸುವAತೆ ಆಗ್ರಹಿಸಿ ಕರ್ನಾಟಕ ಅಹಿಂದ ಸಂಘಟನೆಗಳ ಒಕ್ಕೂಟವು ಪ್ರತಿಭಟನೆ ನಡೆಸಿವೆ.

ಕಚೇರಿಯ ಮುಂದೆ ಜಮಾವಣೆ ಗೊಂಡ ಪ್ರತಿಭಟನಾಕಾರರು ಅತ್ಯಾಚಾರ ಹಾಗೂ ಸಾವಿನ ಪ್ರಕರಣವನ್ನು ತೀವ್ರವಾಗಿ ಖಂಡಿಸಿದರು. ಕೊಡಗು ಜಿಲ್ಲೆಯಲ್ಲಿ ದಲಿತರಿಗೆ ನ್ಯಾಯ ಸಿಗುತ್ತಿಲ್ಲ. ಪ್ರಕರಣಕ್ಕೆ ಸಂಬAಧಿಸಿದ ಯುವತಿಯು ಈಗಾಗಲೇ ಆತ್ಮಹತ್ಯೆ ಮಾಡಿ ಕೊಂಡಿದ್ದಾಳೆ. ಪ್ರಭಾವಿ ವ್ಯಕ್ತಿಗಳು ಈ ಪ್ರಕರಣದಲ್ಲಿ ಶಾಮೀಲಾಗಿದ್ದಾರೆ. ಪೊಲೀಸರು

(ಮೊದಲ ಪುಟದಿಂದ) ತನಿಖೆಯನ್ನು ಸರಿಯಾದ ರೀತಿಯಲ್ಲಿ ನಡೆಸದೆ ಅನ್ಯಾಯವೆಸಗಿದ್ದಾರೆ. ಕೂಡಲೇ ಉಳಿದ ಪ್ರಭಾವಿ ವ್ಯಕ್ತಿಗಳನ್ನು ಬಂಧಿಸಬೇಕು ಹಾಗೂ ಸ್ಥಳಕ್ಕೆ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಆಗಮಿಸುವಂತೆ ಪಟ್ಟು ಹಿಡಿದರು.

ಪ್ರತಿಭಟನಾ ಸ್ಥಳಕ್ಕೆ ಪೊನ್ನಂಪೇಟೆ ತಾಲೂಕು ತಹಶೀಲ್ದಾರ್ ರಾಮಚಂದ್ರ, ವೀರಾಜಪೇಟೆ ಡಿವೈಎಸ್ಪಿ ಮೋಹನ್ ಕುಮಾರ್ ಹಾಗೂ ಅಧಿಕಾರಿಗಳು ಆಗಮಿಸಿದರಾದರೂ ಹಿರಿಯ ಜಿಲ್ಲಾಮಟ್ಟದ ಅಧಿಕಾರಿಗಳು ಆಗಮಿಸುವಂತೆ ಒತ್ತಾಯಿಸಿದರು. ಪ್ರತಿಭಟನೆ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಉಪವಿಭಾಗಾಧಿಕಾರಿ ನರ್ವಾಡೆ ವಿನಾಯಕ್ ಕಾರ್ಭಾರಿ ಸ್ಥಳಕ್ಕೆ ಆಗಮಿಸಿದರು. ಘಟನೆ ವಿಚಾರವಾಗಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಪ್ರಕರಣಕ್ಕೆ ಸಂಬAಧಿಸಿದAತೆ ಪೊಲೀಸರು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಿದ್ದಾರೆ ಎಂದು ಹೋರಾಟಗಾರರಿಗೆ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ಯನ್ನು ಹಿಂಪಡೆಯಲಾಯಿತು.

ಅರಣ್ಯ ವೀಕ್ಷಕನೊಬ್ಬ ಮತ್ತು ಚಾಲಕನೊಬ್ಬ ಸೇರಿದಂತೆ ಅವರ ಸ್ನೇಹಿತರು ಸೇರಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿದ ಹೋರಾಟಗಾರರು ಈ ಬಗ್ಗೆ ಕುಟುಂಬದವರು ದೂರು ನೀಡಲು ಕುಟ್ಟ ಪೊಲೀಸ್ ಠಾಣೆಗೆ ತೆರಳಿದ ವೇಳೆ, ಎಸ್ಸಿಎಸ್ಟಿ ದೌರ್ಜನ್ಯ ೩ರ ಕಾಯ್ದೆ ಮತ್ತು ಪೋಕ್ಸೊ ಪ್ರಕರಣ ಅಡಿಯಲ್ಲಿ ಕೇಸು ದಾಖಲಿಸಬೇಕು ಎಂಬ ಮಾಹಿತಿ ಇದ್ದರೂ ಅಲ್ಲಿನ ಪೊಲೀಸ್ ಅಧಿಕಾರಿಗಳು ನಿರ್ಲಕ್ಷö್ಯ ವಹಿಸಿದ್ದಾರೆ ಎಂದು ಪ್ರತಿಭಟ ನಾಕಾರರು ಆರೋಪಿಸಿದರು.

ಅತ್ಯಾಚಾರದಿಂದ ನೊಂದ ದಲಿತ ಬಾಲಕಿ ಮನನೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿ ದ್ದಾಳೆ. ಈ ನಿಟ್ಟಿನಲ್ಲಿ ಗೃಹಮಂತ್ರಿ ಪರಮೇಶ್ವರ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಅತ್ಯಾಚಾರಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡ ಬಾಲಕಿಯ ಕುಟುಂಬಕ್ಕೆ ನ್ಯಾಯ ಮತ್ತು ರಕ್ಷಣೆ ನೀಡಬೇಕು. ಪರಿಹಾರ ಘೋಷಿಸ ಬೇಕು. ಕೃತ್ಯದಲ್ಲಿ ಪಾಲುದಾರ ರಾಗಿರುವ ಎಲ್ಲಾ ಆರೋಪಿಗಳನ್ನು ಕೂಡಲೇ ಬಂಧಿಸಬೇಕು. ಈ ಪ್ರಕರಣದಲ್ಲಿ ನಿರ್ಲಕ್ಷö್ಯತೆ ತೋರಿರುವ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ಅಹಿಂದ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳಾದ ಪ್ರೋ. ಹರಿರಾಮ್, ಬಿ.ಆರ್. ಭಾಸ್ಕರ್ ಪ್ರಸಾದ್, ಎಂ.ಮAಜುನಾಥ್, ಶಿವರಾಕೇಶ್ ಸೇರಿದಂತೆ ಕೊಡಗು ಜಿಲ್ಲಾ ದಲಿತ ಸಂಘರ್ಷ ಸಮಿತಿಯ ಮುಖಂಡರುಗಳಾದ ಹೆಚ್.ಆರ್. ಪರಶುರಾಮ್, ಕೃಷ್ಣಪ್ಪ ಬೆಳ್ಳೂರು, ಶಿವಣ್ಣ, ರಜನಿಕಾಂತ್, ಮುರುಗ, ರಮೇಶ್ ಮಾಯಮುಡಿ ಸೇರಿದಂತೆ ಇನ್ನಿತರ ಪ್ರಮುಖರು ಒತ್ತಾಯಿಸಿದರು.

ಪ್ರತಿಭಟನೆ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು. ತಹಶೀಲ್ದಾರ್ ಹಾಗೂ ಸಿಬ್ಬಂದಿ ಗಿರಿಜನ ಕಲ್ಯಾಣಾಧಿಕಾರಿ ನವೀನ್ ಸೇರಿದಂತೆ ಪ್ರಮುಖ ಅಧಿಕಾರಿಗಳು ಹಾಜರಿದ್ದರು. -ಹೆಚ್.ಕೆ.ಜಗದೀಶ್