ಮಡಿಕೇರಿ, ಫೆ. ೧೯: ವನ್ಯಜೀವಿ ಉತ್ಪನ್ನಗಳನ್ನು ಅರಣ್ಯ ಇಲಾಖೆಗೆ ಹಿಂದಿರುಗಿಸುವ ವಿಚಾರಕ್ಕೆ ಸಂಬAಧಿಸಿದAತೆ ಉಚ್ಚ ನ್ಯಾಯಾಲಯದಿಂದ ತಡೆಯಾಜ್ಞೆ ದೊರೆತಿದೆ ಎಂದು ವೀರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಮಾಹಿತಿ ನೀಡಿದ್ದಾರೆ.

ವನ್ಯಜೀವಿ ಸಂರಕ್ಷಣಾ ಕಾಯಿದೆ ೨೦೦೩ರ ಅಧಿಸೂಚನೆಯ ಅಧಿನಿಯಮಗಳಿಗೆ ಸಂಬAಧಿಸಿದAತೆ ಕರ್ನಾಟಕ ಸರಕಾರ ವನ್ಯಜೀವಿ ಉತ್ಪನ್ನ, ಟ್ರೋಫಿಗಳನ್ನು ೩ ತಿಂಗಳೊಳಗೆ ಸರಕಾರದ ವಶಕ್ಕೆ ನೀಡುವಂತೆ ಅಧಿಸೂಚನೆ ನಿಯಮಾವಳಿಗಳನ್ನು ರಚಿಸಿ ಆದೇಶ ಹೊರಡಿಸಲಾಗಿತ್ತು.

ಈ ಅಧಿನಿಯಮ ವಿರುದ್ಧ ಪಟ್ಟಡ ರಂಜಿ ಪೂಣಚ್ಚ ಮತ್ತು ಕೋಡಿಮಣಿಯಂಡ ಕುಟ್ಟಪ್ಪ ಎಂಬವರು ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.

ತಾ. ೧೯ ರಂದು ವಿಚಾರಣೆ ನಡೆಸಿದ ಉಚ್ಚ ನ್ಯಾಯಾಲಯ ನಿಯಮಗಳಿಗೆ ಮಧ್ಯಂತರ ಆದೇಶದಲ್ಲಿ ತಡೆಯಾಜ್ಞೆ ನೀಡಿ ಆದೇಶಿಸಿದೆ. ವನ್ಯಜೀವಿ ಉತ್ಪನ್ನ ಹಿಂದಿರುಗಿಸುವ ವಿಚಾರವಾಗಿ ಯಾವುದೇ ರೀತಿ ಆತಂಕಪಡುವ ಅಗತ್ಯವಿಲ್ಲ ಎಂದು ಪೊನ್ನಣ್ಣ ತಿಳಿಸಿದ್ದಾರೆ.