ಮಡಿಕೇರಿ, ಫೆ. ೧೯: ಲಿಟ್ಲ್ ಫ್ಲವರ್ ಶಾಲೆಯಲ್ಲಿ ಸ್ಕೂಲ್ ಫೆಸ್ಟ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಮುಖ್ಯ ಅತಿಥಿಯಾಗಿ ಕಟ್ರತನ ಲಲಿತ ಅಯ್ಯಣ್ಣ ಹಾಗೂ ಪ್ರಾಂಶುಪಾಲೆ ಸುನಿತಾ ಪ್ರೀತು ಹಾಗೂ ಪೋಷಕವೃಂದದವರು ಪಾಲ್ಗೊಂಡಿದ್ದರು. ಮಕ್ಕಳಿಂದ ವಿವಿಧ ಕಾರ್ಯಕ್ರಮಗಳು ನಡೆದವು.

ಕಟ್ರತನ ಲಲಿತ ಅಯ್ಯಣ್ಣ ಮಾತನಾಡಿ, ಮಕ್ಕಳು ಸಾಮಾಜಿಕ ಜಾಲತಾಣಗಳಿಂದ ದೂರವಿರುವಂತೆ ಸಲಹೆ ನೀಡಿದರು. ಪ್ರಾಂಶುಪಾಲರು ಶಾಲಾ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭ ಶಾಂತಲಾ ಲಲಿತ ಕಲಾ ಶಾಲೆ, ಹಾಸನ ಇವರು ನಡೆಸಿದ ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ಮಕ್ಕಳಿಗೆ ಪ್ರಶಸ್ತಿ ಪತ್ರ ಮತ್ತು ಪದಕಗಳನ್ನು ವಿತರಿಸಲಾಯಿತು. ಹಾಗೂ ಭಾಗವಹಿಸಿದ ಎಲ್ಲ ಮಕ್ಕಳಿಗೂ ಪ್ರಶಂಸನಾ ಪತ್ರವನ್ನು ನೀಡಲಾಯಿತು. ವಿದ್ಯಾರ್ಥಿ ಸಾನ್ವಿಕ್ ಸ್ವಾಗತಿಸಿ, ಶಿಕ್ಷಕಿ ಸಜನಿ ವಂದಿಸಿದರು. ರಾಷ್ಟçಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯ ಗೊಳಿಸಲಾಯಿತು.