ಸುಂಟಿಕೊಪ್ಪ, ಫೆ.೨೦ : ಸುಂಟಿಕೊಪ್ಪ ಪಟ್ಟಣದಲ್ಲಿ ಕಾನೂನು ಬಾಹಿರವಾಗಿ ನಡೆಯುತ್ತಿದ್ದ ಖಾಸಗಿ ಕ್ಲಿನಿಕ್ ಹಾಗೂ ಔಷಧಿ ಅಂಗಡಿಗಳಿಗೆ ಜಿಲ್ಲಾ ಮತ್ತು ತಾಲೂಕು ಆರೋಗ್ಯ ಅಧಿಕಾರಿಗಳ ತಂಡ ಭೇಟಿ ನೀಡಿ ಪರವಾನಗಿ ಹೊಂದಿಲ್ಲದ ಕಾರಣ ಮಳಿಗೆಯನ್ನು ಮುಚ್ಚಿಸಿ ಕಾನೂನು ಕ್ರಮಕೈಗೊಂಡಿದ್ದಾರೆ.

ಆಸ್ಪತ್ರೆ ರಸ್ತೆಯಲ್ಲಿ ಇತ್ತೀಚೆಗೆ ಆರಂಭಗೊAಡಿದ್ದ ಜನನಿ ಮೆಡಿಕಲ್ ಸೆಂಟರ್ ಹಾಗೂ ರಾಷ್ಟಿçÃಯ ಹೆದ್ದಾರಿ ಬದಿಯಲ್ಲಿರುವ ಅಶ್ವಿನಿ ಕ್ಲಿನಿಕ್ ಹಾಗೂ ಅನು ಮೆಡಿಕಲ್ಸ್ ಇಲಾಖೆಯಿಂದ ಪರವಾನಗಿ ಪಡೆಯದೆ ಕಾರ್ಯಚರಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್, ಸೋಮವಾರಪೇಟೆ ತಾಲೂಕು ಆರೋಗ್ಯ ಅಧಿಕಾರಿ ಹಿಂದೂದಾರ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಅನುಮತಿ ಇಲ್ಲದ ಹಿನ್ನೆಲೆ ಮಳಿಗೆಗಳಿಗೆ ಬೀಗ ಜಡಿದಿದ್ದಾರೆ.

ಈ ಸಂದರ್ಭ ಮಾತನಾಡಿದ ಡಾ.ಆನಂದ್, ಖಾಸಗಿ ವೈದ್ಯಕೀಯ ಸಂಸ್ಥೆಗಳು ಅನ್‌ಲೈನ್ ಮೂಲಕ ಕೆಪಿಎಂಇ ಕಾಯ್ದೆ ಪ್ರಕಾರ ನೋಂದಾವಣೆಗೊಳ್ಳಬೇಕು. ಆನಂತರ ಇಲಾಖೆಯಿಂದ ಪರಿಶೀಲಿಸಿ ಅವರಿಗೆ ಪರವಾನಗಿ ಅನುಮತಿ ಪತ್ರ ನೀಡಲಾಗುತ್ತದೆ. ಆದರೆ ಸುಂಟಿಕೊಪ್ಪದಲ್ಲಿ ಕಾರ್ಯಚರಿಸುತ್ತಿದ್ದ ಖಾಸಗಿ ಕ್ಲಿನಿಕ್ ಸರಕಾರದ ಗಮನಕ್ಕೆ ತರದೆ ರೋಗಿಗಳಿಗೆ ಚಿಕಿತ್ಸೆ ನೀಡುವುದು ಜೌಷಧಿ ವಿತರಿಸುತ್ತಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಈ ಖಾಸಗಿ ಮಳಿಗೆ ವಿರುದ್ಧ ಕ್ರಮಕೈಗೊಳ್ಳಲಾಗಿದೆ. ಕೆಪಿಎಂಇ ಕಾಯ್ದೆ ಪ್ರಕಾರ ಜಿಲ್ಲಾಧಿಕಾರಿಗಳ ಸಮಕ್ಷಮದಲ್ಲಿ ಸಭೆ ನಡೆಸಿ ಇವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.