ಮಡಿಕೇರಿ, ಮಾ. ೨೯: ಸ್ಥಳೀಯ ಜನನಿ ಮಹಿಳಾ ಮಂಡಳಿಯ ವತಿಯಿಂದ ಅಂರ್ರಾಷ್ಟಿçÃಯ ಮಹಿಳಾ ದಿನಾಚರಣೆಯನ್ನು ಕೊಡಗು ಡಿಸಿಸಿ ಬ್ಯಾಂಕಿನ ನಿವೃತ್ತ ಉಪ ಪ್ರಧಾನ ವ್ಯವಸ್ಥಾಪಕಿ ಪಟ್ಟಡ ಪ್ರೇಮ ಕರುಂಬಯ್ಯ ಅವರ ಮನೆಯ ಆವರಣದಲ್ಲಿ ನಡೆಸಲಾಯಿತು.
ರಾಣಿ ಅರುಣ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮ ದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಅಪ್ಪನೆರವಂಡ ವಿಲೀನ ದೇವಯ್ಯ ಅವರು ಅಂರ್ರಾಷ್ಟಿçÃಯ ಮಹಿಳಾ ದಿನಾಚರಣೆ ಬಗ್ಗೆ ಮಾತನಾಡಿ, ಮಹಿಳೆಯರು ಆರ್ಥಿಕವಾಗಿ ಸಬಲೀಕರಣಗೊಂಡು ಸದೃಢ ಭಾರತ ನಿರ್ಮಿಸುವಲ್ಲಿ ತಮ್ಮ ತಮ್ಮ ಜವಾಬ್ದಾರಿಯನ್ನು ಅರಿತು ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಪಟ್ಟಡ ಪ್ರೇಮ ಕರುಂಬಯ್ಯ ಅವರು ಮಾತನಾಡಿ, ಮಹಿಳೆಯರು ಸರಕಾರದಿಂದ ಸಿಗುವ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಆರ್ಥಿಕವಾಗಿ ಸ್ವಾವಲಂಭಿ ಗಳಾಗುವಂತೆ ಅಭಿವೃದ್ಧಿಯತ್ತ ಮುನ್ನಡೆಯಬೇಕೆಂದು ತಿಳಿಸಿದರು.
ಕಾರ್ಯಕ್ರಮದ ಪ್ರಯುಕ್ತ ಜನನಿ ಮಹಿಳಾ ಮಂಡಳಿಯ ಸದಸ್ಯರಿಗೆ ಹಾಗೂ ಮಹಿಳೆಯರಿಗೆ ರಸಪ್ರಶ್ನೆ ಕಾರ್ಯಕ್ರಮ, ವಿವಿಧ ರೀತಿಯ ಆಟೋಟಗಳನ್ನು ಏರ್ಪಡಿಸಲಾಗಿತ್ತು.
ಸಿಂಡಿಕೇಟ್ ಬ್ಯಾಂಕ್ನ ನಿವೃತ್ತ ಸಹಾಯಕ ವ್ಯವಸ್ಥಾಪಕಿ ನಾಳಿಯಮ್ಮಂಡ ಸುಶೀಲಾ ಗಾಂಧಿ ಅವರು ಅತಿಥಿಗಳಾಗಿ ಉಪಸ್ಥಿತರಿದ್ದರು. ನಿವೃತ್ತ ಉಪನ್ಯಾಸಕ ಪಟ್ಟಡ ಕರುಂಬಯ್ಯ ಉಪಸ್ಥಿತರಿದ್ದು, ಶುಭ ಹಾರೈಸಿದರು.
ಜನನಿ ಮಹಿಳಾ ಮಂಡಳಿಯ ಪ್ರಧಾನ ಕಾರ್ಯದರ್ಶಿ ತಾಯಿರಾ ನಿರೂಪಿಸಿ, ಉಪಾಧ್ಯಕ್ಷೆ ಹೇಮಾವತಿ ಪ್ರಸನ್ನ ಸ್ವಾಗತಿಸಿ, ನಿರ್ದೇಶಕಿ ಪ್ರೇಮ ಪ್ರಾರ್ಥಿಸಿ, ಖಜಾಂಚಿ ಜಯಪಾಲಾಕ್ಷ ವಂದಿಸಿದರು.