ಮುಳ್ಳೂರು, ಮಾ. ೨೯: ‘ವಿದ್ಯಾಭ್ಯಾಸ ದಿನಗಳಲ್ಲಿ ವಿದ್ಯಾರ್ಥಿ ಗಳಲ್ಲಿ ಸ್ವಂತಿಕೆ, ಕ್ರಿಯಾಶೀಲತೆ, ಕೌಶಲ್ಯಗಳನ್ನು ಬೆಳೆಸಿದರೆ ಭವಿಷ್ಯದಲ್ಲಿ ಸಾಧನೆ ಮಾಡಲು ಸಹಕಾರಿ ಯಾಗುತ್ತದೆ’ ಎಂದು ಬೆಂಗಳೂರಿನ ಸಾಫ್ಟ್ವೇರ್ ಇಂಜಿನಿಯರ್ ನಾಗೇಂದ್ರ ಅಭಿಪ್ರಾಯಪಟ್ಟರು. ಅವರು ಸಮೀಪದ ಕೊಡ್ಲಿಪೇಟೆ ಹಲಸಿನಮರ ಗೌರಮ್ಮ ಶಾಂತಮಲ್ಲಪ್ಪ ಪ್ರಥಮ ದರ್ಜೆ ಕಾಲೇಜಿನ ವಾಣ್ಯಿಜ್ಯ ಶಾಸ್ತç ವಿಭಾಗದ ವಿದ್ಯಾರ್ಥಿಗಳು ತಯಾರಿಸಿದ ವಿವಿಧ ವಾಣಿಜ್ಯ ನವೀನ ಮಾದರಿಗಳ ವಸ್ತು ಪ್ರದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಯ ಜೊತೆಯಲ್ಲಿ ಕ್ರಿಯಾಶೀಲತೆಗೆ ಪೂರಕ ವಾಗುವಂತಹ ಚಟುವಟಿಕೆಗಳಲ್ಲಿ ತೊಡಗಿಸಿ ಕೊಳ್ಳಬೇಕು ವಾಣಿಜ್ಯ ಶಾಸ್ತç ವಿಭಾಗದ ವಿದ್ಯಾರ್ಥಿಗಳು ವಾಣಿ ಜೋದ್ಯಮ ಕ್ಷೇತ್ರಕ್ಕೆ ಸಂಬAಧಿಸಿದ ನವೀನ ಮಾದರಿಗಳನ್ನು ತಯಾರಿಸು ವುದರಿಂದ ಸ್ವಂತಿಕೆ, ಕ್ರಿಯಾಶೀಲತೆ ಮತ್ತು ಕೌಶಲ್ಯವಂತಿಕೆ ಅಭಿವೃದ್ಧಿ ಗೊಳ್ಳುತ್ತದೆ. ಈ ನಿಟ್ಟಿನಲ್ಲಿ ಕಾಲೇಜಿನ ವಾಣಿಜ್ಯ ಶಾಸ್ತç ವಿದ್ಯಾರ್ಥಿಗಳು ತಾವು ತಯಾರಿಸಿದ ವಾಣಿಜ್ಯ ನವೀನ ಮಾದರಿಗಳ ವಸ್ತು ಪ್ರದರ್ಶನವನ್ನು ಆಯೋಜಿಸಿರುವುದು ಶ್ಲಾಘನೀಯ ಬೆಳವಣಿಗೆಯಾಗಿದೆ ಎಂದರು. ವಿದ್ಯಾ ಭ್ಯಾಸದ ದಿನಗಳಲ್ಲಿ ಕ್ರಿಯಾಶೀಲತೆಗೆ ಪೂರಕವಾಗುವಂತಹ ಚಟುವಟಿಕೆ ಯಲ್ಲಿ ತೊಡಗಿಸಿ ಕೊಳ್ಳುವುದರಿಂದ ಭವಿಷ್ಯದಲ್ಲಿ ಸಹಕಾರಿಯಾಗುತ್ತದೆ. ಈ ದಿಸೆಯಲ್ಲಿ ಇತರೆ ವಿದ್ಯಾರ್ಥಿಗಳು ಇಂಥಹ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಮಾನಸಿಕ ಮತ್ತು ಬೌದ್ದಿಕ ಆರೋಗ್ಯ ಮಟ್ಟವನ್ನು ಹೆಚ್ಚಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ದಿನದ ಮಹತ್ವ ಕುರಿತು ಕಾಲೇಜು ಪ್ರಾಂಶುಪಾಲ ಎಂ.ಆರ್. ನಿರಂಜನ್ ಪ್ರಾಸ್ತಾವಿಕವಾಗಿ ಮಾತನಾಡಿ ವಿದ್ಯಾರ್ಥಿಗಳಲ್ಲಿರುವ ಕೌಶಲ್ಯ ಪ್ರತಿಭೆಗಳನ್ನು ಗುರುತಿಸುವ ಸಲುವಾಗಿ ವಾಣಿಜ್ಯ ಶಾಸ್ತç ವಿದ್ಯಾರ್ಥಿಗಳಿಗೆ ಪ್ರಾಜೆಕ್ಟ್ ವರ್ಕ್, ವಾಣಿಜೋದ್ಯಮ ನವೀನ ಮಾದರಿಗಳ ತಯಾರಿಕೆ ಮುಂತಾದ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ವಿದ್ಯಾಸಂಸ್ಥೆ ವಿದ್ಯಾರ್ಥಿಗಳಿಗೆ ಅವಕಾಶ ನೀಡಿ ಪ್ರೋತ್ಸಾಹಿಸುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಸುಭ ನಾಗೇಂದ್ರ ಮಾತನಾಡಿದರು. ವಿದ್ಯಾಸÀಂಸ್ಥೆ ಕಾರ್ಯದರ್ಶಿ ಕೆ.ಎಸ್.ಪರಮೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದಲ್ಲಿ ವಿದ್ಯಾಸಂಸ್ಥೆ ನಿರ್ದೇಶಕ ಬಿ.ಕೆ.ಯತೀಶ್, ಕಾಲೇಜು ಉಪನ್ಯಾಸಕರು ಹಾಜರಿದ್ದರು. ವಿದ್ಯಾಸಂಸ್ಥೆ ಅಧ್ಯಕ್ಷ ಮತ್ತು ಹೈಕೋರ್ಟಿನ ಹಿರಿಯ ವಕೀಲ ಎಚ್. ಎಸ್.ಚಂದ್ರಮೌಳಿ ಶುಭ ಸಂದೇಶ ರವಾನಿಸಿದರು. ಕಾಲೇಜಿನ ವಾಣಿಜ್ಯ ಶಾಸ್ತç ಉಪನ್ಯಾಸಕಿ ಶ್ರೇಯಾ ಸುಹಾಸ್ ಕಾರ್ಯಕ್ರಮವನ್ನು ಆಯೋಜಿಸಿದರು. ವಿದ್ಯಾರ್ಥಿಗಳು ರಾಷ್ಟಿçÃಯ ಬ್ಯಾಂಕ್, ಪೆಟ್ರೋಲ್ ಬಂಕ್ ಮುಂತಾದ ವಾಣಿ ಜೋದ್ಯಮ ನವೀನ ಮಾದರಿ ಗಳನ್ನು ತಯಾರಿಸಿ ವಸ್ತು ಪ್ರದರ್ಶನದಲ್ಲಿ ಇವುಗಳ ಬಗ್ಗೆ ಮಾಹಿತಿ ನೀಡಿದರು