ಮೈಸೂರು, ಮಾ.೩೦ : ಮೈಸೂರು ಕೊಡಗು ಲೋಕಸಭಾ ಸಾರ್ವತ್ರಿಕ ಚುನಾವಣೆ ಅಭ್ಯರ್ಥಿಯಾಗಿ ಅಖಿಲ ಭಾರತ ಹಿಂದೂ ಮಹಾಸಭಾ ಪಕ್ಷದ ಎ.ಎಸ್. ಸತೀಶ್ ಅವರು ಮೈಸೂರಿನಲ್ಲಿ ಜಿಲ್ಲಾ ಚುನಾವಣಾಧಿಕಾರಿ ಡಾ:ಕೆ.ವಿ.ರಾಜೇಂದ್ರ ಅವರಿಗೆ ನಾಮಪತ್ರ ಸಲ್ಲಿಸಿದರು.

ಚುನಾವಣೆಗೆ ಅಧಿಸೂಚನೆ ಪ್ರಕಟವಾದ ಮೊದಲ ದಿನ ಇಬ್ಬರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು, ಇದುವರೆಗೆ ಮೂವರು ಉಮೇದುವಾರಿಕೆ ಸಲ್ಲಿಸಿದ್ದಾರೆ.