ಪೊನ್ನಂಪೇಟೆ, ಮಾ. ೩೦: ಗೋಣಿಕೊಪ್ಪಲು ಕಾವೇರಿ ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕ ಹಾಗೂ ಗೋಣಿಕೊಪ್ಪಲು ಲೋಪಾಮುದ್ರ ದೃಷ್ಟಿ ಕಣ್ಣಿನ ಆಸ್ಪತ್ರೆ ವತಿಯಿಂದ ಗೋಣಿಕೊಪ್ಪಲು ಕಾವೇರಿ ಕಾಲೇಜಿನಲ್ಲಿ ನೇತ್ರ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.

ಈ ಶಿಬಿರದಲ್ಲಿ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಕಣ್ಣು ಪರೀಕ್ಷೆ ಮಾಡಿಸಿಕೊಂಡರು. ಯುವ ರೆಡ್‌ಕ್ರಾಸ್ ಘಟಕದ ಅಧಿಕಾರಿ ಎಂ.ಎ. ಕುಶಾಲಪ್ಪ ಕಾರ್ಯಕ್ರಮ ಆಯೋಜಿಸಿದ್ದರು.