ವೀರಾಜಪೇಟೆ/ಕುಶಾಲನಗರ: ದೇಶಾದ್ಯಂತ ಲೋಕಸಭಾ ಚುನಾವಣಾ ಕಾವು ಏರಿದೆ. ಜಿಲ್ಲೆಯಲ್ಲಿಯೂ ಚುನಾವಣಾ ಕಣ ರಂಗೇರಿದ್ದು, ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಂ. ಲಕ್ಷö್ಮಣ್ ಗೌಡ ಅವರ ಗೆಲುವಿಗೆ ಕೈ ನಾಯಕರು ಇಂದು ವೀರಾಜಪೇಟೆ ಹಾಗೂ ಕುಶಾಲನಗರದಲ್ಲಿ ನಡೆದ ಪ್ರಚಾರ ಸಮಾವೇಶದಲ್ಲಿ ಪಾಲ್ಗೊಂಡು ಮತಯಾಚನೆ ನಡೆಸುವುದರೊಂದಿಗೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಬೆಳಿಗ್ಗೆ ವೀರಾಜಪೇಟೆ, ಸಂಜೆ ಕುಶಾಲನಗರದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಸಮಾಜ ಕಲ್ಯಾಣ ಸಚಿವ ಹೆಚ್.ಸಿ. ಮಹದೇವಪ್ಪ, ರೇಷ್ಮೆ ಸಚಿವ ವೆಂಕಟೇಶ್, ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಜಿಲ್ಲೆಯ ಶಾಸಕದ್ವಯರು, ಮುಖಂಡರುಗಳು ಭಾಗವಹಿಸಿ ಶಕ್ತಿ ಪ್ರದರ್ಶನ ಮಾಡಿದರು.

ವೀರಾಜಪೇಟೆಯಲ್ಲಿ ಸಭೆ

ಪ್ರಜಾಪ್ರಭುತ್ವದ ರಕ್ಷಣೆಗೆ ಕಾಂಗ್ರೆಸ್ ಮುಂದಾಳತ್ವದ ‘ಇಂಡಿಯಾ’ ಮೈತ್ರಿಯ ಅವಶ್ಯಕತೆ ದೇಶದಲ್ಲಿ ಅನಿವಾರ್ಯವಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಹೆಚ್.ಸಿ. ಮಹದೇವಪ್ಪ ಪ್ರತಿಪಾದಿಸಿದರು. ವೀರಾಜಪೇಟೆ ಕೊಡವ ಸಮಾಜದ ಸಭಾಂಗಣದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ

(ಮೊದಲ ಪುಟದಿಂದ) ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾ ವೇಶದಲ್ಲಿ ಭಾಗವಹಿಸಿ ಮಾತನಾಡಿ, ವ್ಯಕ್ತಿ ಪೂಜೆ ಸರ್ವಾಧಿಕಾರಿತನವನ್ನು ಸೃಷ್ಟಿಸಿ ದೇಶದ ಪ್ರಜಾಪ್ರಭುತ್ವವನ್ನು ನಾಶ ಮಾಡುತ್ತದೆ. ಈ ಕಾರಣಕ್ಕೆ ಇಂದು ನಮ್ಮ ಸಂವಿಧಾನ ಕ್ಷೀಣಿಸುತ್ತಿದ್ದು ದೇಶದಲ್ಲಿ ಸರ್ವಾಧಿಕಾರಿ ಧೋರಣೆ ಕಾಣುತ್ತಿದ್ದೇವೆ. ಪ್ರಜಾಪ್ರಭುತ್ವದಲ್ಲಿ ಸಂವಿಧಾನವೇ ರಾಜ ಮಾರ್ಗವಾ ಗಿದ್ದು ಇದನ್ನು ಮುಚ್ಚುವ ಕೆಲಸವಾ ಗುತ್ತಿದೆ ಎಂದು ಟೀಕಿಸಿದ ಅವರು, ಕೊಡಗಿನಲ್ಲಿ ಹಿಂದೆ ತಾನು ಜಿಲ್ಲಾ ಉಸ್ತುವಾರಿ ಸಚಿವನಾಗಿ ಕೆಲಸ ಮಾಡಿದ್ದ ಸಂದರ್ಭ ಇಲ್ಲಿಯ ಜನರು ಉತ್ತಮ ಸಹಕಾರ ನೀಡಿದ್ದಾರೆ. ಆದರಿಂದ ನಮಗೆ ಉತ್ತಮ ಅಭಿವೃದ್ದಿ ಕೆಲಸ ಮಾಡಲು ಸಾಧ್ಯವಾಯಿತು. ಈ ಬಾರಿ ಎರಡು ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸ ಕರು ಗೆಲುವು ಸಾಧಿಸಿದ್ದಾರೆ. ಅದರಂತೆ ಲೋಕಸಭ ಕ್ಷೇತ್ರದಲ್ಲೂ ಕೊಡಗಿನ ಜನರು ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿ ಜಿಲ್ಲೆಯ ಶಾಸಕರ ಕೈ ಬಲಪಡಿ ಸಬೇಕೆಂದು ಮನವಿ ಮಾಡಿದರು.

ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಮಾತನಾಡಿ, ಕೇಂದ್ರದ ಹತ್ತು ವರ್ಷದ ಆಡಳಿತದಲ್ಲಿ ದೇಶ ೨೫ ವರ್ಷ ಹಿಂದೆ ಹೋಗಿದೆ. ಕಪ್ಪು ಹಣ ತರುತ್ತವೆ ಎಂದು ಹೇಳಿದವರಿಗೆ ಸುಪ್ರಿಂಕೋರ್ಟ್ನಲ್ಲಿ ಅದರ ಪಟ್ಟಿ ಸಲ್ಲಿಸಲು ಸಾಧ್ಯವಾಗಿಲ್ಲ. ರೈತರ ಅದಾಯ ಹೆಚ್ಚಳ ಭರವಸೆ ನೀಡಿದ್ದು ಕೃಷಿ ಪರಿಕರಗಳ ಬೆಲೆ ಏರಿಕೆಯಿಂದ ರೈತರು ಬೀದಿಗೆ ಬರುವಂತಾಗಿದೆ. ಕಾಂಗ್ರೆಸ್ ಭ್ರಷ್ಟಚಾರಿ ಎಂದು ಹೇಳಿಕೊಂಡು ಕಾಂಗ್ರೆಸ್ ಮುಕ್ತ ಮಾಡುತ್ತೇವೆ ಎಂದು ಹೇಳಿಕೊಂಡು ಬಂದವರು ಎಲೆಕ್ಷನ್ ಬಾಂಡ್‌ನ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಇಡಿ, ಸಿಬಿಐ ಮುಂತಾದ ಸಂಸ್ಥೆಗಳನ್ನು ಬಿಜೆಪಿ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಜನರು ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಬೇಕು. ಕಾರ್ಯಕರ್ತರು ನಮ್ಮ ರಾಜ್ಯ ಸರಕಾರದ ಸಾಧನೆಯನ್ನು ಜನರ ಮುಂದಿಟ್ಟು ಮತಯಾಚಿಸಿ ಎಂದು ಕರೆ ನೀಡಿದರು.

ಸತ್ಯ-ಸುಳ್ಳಿನ ನಡುವಿನ ಕದನ : ಎ.ಎಸ್. ಪೊನ್ನಣ್ಣ

ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವೀರಾಜಪೇಟೆ ಶಾಸಕ ಎ.ಎಸ್ ಪೊನ್ನಣ್ಣ ಪ್ರಾಸ್ತಾವಿಕವಾಗಿ ಮಾತನಾಡಿ, ಸಿದ್ದರಾಮಯ್ಯ ಸರಕಾರದ ಗ್ಯಾರಂಟಿ ಯೋಜನೆಗಳು ಪರಿಣಾ ಮಕಾರಿಯಾಗಿ ಅನುಷ್ಠಾನವಾಗಿದೆ. ನುಡಿದಂತೆ ನಡೆದು ತೋರಿಸಿದ್ದೇವೆ. ಇದನ್ನು ಜನರ ಮುಂದಿಡಬೇಕು. ಜನರ ಮುಂದೆ ಸತ್ಯ ಹೇಳಿ ಈ ಮೂಲಕ ಸುಳ್ಳು ಸೋಲುವಂತೆ ಮಾಡಿ ಎಂದರು. ನಾವು ಕೇವಲ ಗುದ್ದಲಿ ಪೂಜೆ ಮಾಡುವವರಲ್ಲ, ನಿಗದಿಯಂತೆ ಕೆಲಸ ಮಾಡಿದ್ದೇವೆ. ಈ ಬಾರಿ ಕೊಡಗು ಮೈಸೂರು ಕ್ಷೇತ್ರದಲ್ಲಿ ಸಂಸತ್ ಸ್ಥಾನಕ್ಕೆ ನಡೆಯುವ ಚುನಾವಣೆ ಕೇವಲ ಚುನಾವಣೆಯಲ್ಲಾ. ಬದಲಿಗೆ ಸತ್ಯ ಮತ್ತು ಸುಳ್ಳಿನ ನಡುವಿನ ಕದನವಾಗಿದೆ ಅಧಿಕಾರಕ್ಕೆ ಬಂದು ವರ್ಷದೊಳಗೆ ೨೫೦ ಕೋಟಿ ಅಭಿವೃದ್ದಿ ಕೆಲಸ ಮಾಡಿದ್ದೇನೆ. ಆದರಿಂದ ಮತದಾರರು ಸತ್ಯವನ್ನು ಗೆಲ್ಲಿಸಬೇಕು ಎಂದರು.

ಹಲವು ಕನಸುಗಳಿವೆ - ಲಕ್ಷö್ಮಣ್

ಕೊಡಗು ಮೈಸೂರು ಕ್ಷೇತ್ರದ ಅಭ್ಯರ್ಥಿ ಎಂ. ಲಕ್ಷö್ಮಣ್ ಮಾತನಾಡಿ, ತನ್ನಲ್ಲಿ ಹಣ ಬಲವಿಲ್ಲ. ಆದರೆ ಪಕ್ಷಕ್ಕೆ ನಿಷ್ಠನಾಗಿ ಕೆಲಸ ಮಾಡಿದ್ದೇನೆ. ಗೆಲುವು ದೊರೆತ್ತಲ್ಲಿ ಕೊಡವ ಭಾಷೆಯನ್ನು ೮ ನೇ ಪರಿಚ್ಛೇದಕ್ಕೆ ಸೇರಿಸುವುದು, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರಿಗೆ ಭಾರತ ರತ್ನ ನೀಡಲು ಕ್ರಮ, ಕಾಫಿ ಬೆಳೆಗಾರಿಗೆ ಬೆಂಬಲ ಬೆಲೆಯ ಪ್ಯಾಕೇಜ್ ನೀಡುವುದು ಸೇರಿದಂತೆ ಹಲವಾರು ಯೋಜನೆಗಳನ್ನು ಸಾಕಾರಗೊಳಿಸುವ ಕನಸಿವೆೆ ಎಂದು ತಮ್ಮ ಗುರಿಯನ್ನು ತಿಳಿಸಿದರು.

ರೇಷ್ಮೆ ಹಾಗೂ ಪಶುಸಂಗೋಪನೆ ಸಚಿವ ಕೆ. ವೆಂಕಟೇಶ್ ಮಾತನಾಡಿ, ಎ.ಎಸ್. ಪೊನ್ನಣ್ಣ ರಾಜ್ಯ ಸರಕಾರದಲ್ಲಿ ಪ್ರಭಾವಶಾಲಿ ಶಾಸಕರಾಗಿದ್ದು, ಲಕ್ಷö್ಮಣ್ ಸಂಸದರಾದರೆ ಮತ್ತಷ್ಟು ಅಭಿವೃದ್ಧಿ ಕಾರ್ಯಗಳನ್ನು ಜಿಲ್ಲೆಯಲ್ಲಿ ಮಾಡಲು ಪೂರಕ ಸ್ಥಿತಿ ನಿರ್ಮಾಣವಾಗುತ್ತದೆ ಎಂದು ತಿಳಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರÀ ಧರ್ಮಜ ಉತ್ತಪ್ಪ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ ಪುಷ್ಪಾ ಅಮರನಾಥ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಮಾಜಿ ಎಂ.ಎಲ್.ಸಿ.ಗಳಾದ ಶಾಂತೆಯAಡ ವೀಣಾ ಅಚ್ಚಯ್ಯ, ಚೆಪ್ಪುಡೀರ ಅರುಣ್ ಮಾZಯ್ಯ, ಪ್ರಮುಖರಾದ ಡಾ ಶುಶ್ರುತ ಗೌಡ, ತೆನ್ನಿರ ಮೈನಾ, ಹೊಸೂರು ಸೂರಜ್, ಹೆಚ್.ಎ.ಹಂಸ, ಅಣ್ಣಯ್ಯ, ಕೆ.ಎ.ಯಾಕುಬ್, ಹನೀಫ್, ಮಾದಂಡ ತಿಮಯ್ಯ, ಜಾನ್ಸನ್, ಶಶಿ ಸೇರಿದಂತೆ ಪಕ್ಷದ ಮುಖಂಡರು ಭಾಗವಹಿಸಿದ್ದರು.

ಈ ಸಂದÀರ್ಭದಲ್ಲಿ ಸಾಮಾಜಿಕ ಕಾರ್ಯಕರ್ತರುಗಳಾದ ಪ್ರತೀಕ್ ಪೊನ್ನಣ್ಣ ಹಾಗೂ ಪವನ್ ಪೆಮ್ಮಯ್ಯ ಪಕ್ಷ ಸೇರ್ಪಡೆಗೊಂಡರು.

ಕುಶಾಲನಗರದಲ್ಲಿ ಸಮಾವೇಶ - ಗೆಲುವಿಗೆ ಶ್ರಮಿಸಲು ಕರೆ

ಲೋಕಸಭಾ ಚುನಾವಣೆಯಲ್ಲಿ ಕೊಡಗು-ಮೈಸೂರು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಅವರಿಗೆ ಮತದಾನ ಮಾಡಿ ಬೆಂಬಲಿಸಿ ಬಲ ನೀಡುವ ಕೆಲಸ ಮಾಡಿದ್ದಲ್ಲಿ ಕೊಡಗು ಜಿಲ್ಲೆಯ ಚಿತ್ರಣವೇ ಬದಲಾಗಲಿದೆ ಎಂದು ಕಾಂಗ್ರೆಸ್ ಪ್ರಮುಖರು ಆಶಯ ವ್ಯಕ್ತಪಡಿಸಿದ್ದಾರೆ.

ಕುಶಾಲನಗರ ಕಾರು ನಿಲ್ದಾಣ ಆವರಣದಲ್ಲಿ ನಡೆದ ತಾಲೂಕು ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಮತ್ತು ಚುನಾವಣಾ ಪ್ರಚಾರ ನಡೆಯಿತು.

ಸಮಾಜ ಕಲ್ಯಾಣ ಸಚಿವ ಹೆಚ್.ಸಿ. ಮಹಾದೇವಪ್ಪ ಮಾತನಾಡಿ, ಕಪ್ಪು ಹಣದ ಹೆಸರಿನಲ್ಲಿ ದೇಶದ ಜನರ ಬದುಕಿನ ಭರವಸೆ ಕಿತ್ತು ಹಾಕಿದ ಕೇಂದ್ರ ಸರ್ಕಾರ ಜನತೆಯನ್ನು ಕಷ್ಟದ ಬದುಕಿನತ್ತ ದೂಡಿದೆ ಎಂದರಲ್ಲದೆ ದೇಶದಲ್ಲಿ ಹಣದುಬ್ಬರ ಆರ್ಥಿಕ ಏರುಪೇರು ಆಗಿದ್ದು, ಜನಸಾಮಾನ್ಯನ ಬದುಕು ದುಸ್ತರವಾಗಿದೆ ಎಂದು ಕಿಡಿಕಾರಿದರು.

ಸಚಿವ ಕೆ. ವೆಂಕಟೇಶ್ ಮಾತನಾಡಿ, ಕೊಡಗಿನ ಎರಡು ಕ್ಷೇತ್ರಗಳಲ್ಲಿ ಪೈಪೋಟಿಯಲ್ಲಿ ಅಭಿವೃದ್ಧಿ ಕೆಲಸ ನಡೆಯುತ್ತಿದೆ. ರಾಜ್ಯದಲ್ಲಿ ಬಿಜೆಪಿ ಸಂಪೂರ್ಣ ಶಕ್ತಿ ಕುಸಿದಿದ್ದು ಈ ಹಿನ್ನೆಲೆಯಲ್ಲಿ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ ಎಂದು ಟೀಕಿಸಿದರು.

ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಮಾತನಾಡಿ, ಕಾರ್ಯಕರ್ತರು ಪಕ್ಷದ ಬೆನ್ನೆಲುಬಾಗಿ ಕೆಲಸ ನಿರ್ವಹಿಸಬೇಕು. ಸರ್ಕಾರದ ಕಾರ್ಯಕ್ರಮಗಳನ್ನು ಮನೆ ಮನೆಗೆ ಪ್ರಚಾರ ಮಾಡಿ ತಲುಪಿಸಬೇಕು. ಭರವಸೆ ಈಡೇರಿಸಿದ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಕೈಜೋಡಿಸಬೇಕು ಎಂದರು.

ಬಿಜೆಪಿ ಬಂಡವಾಳಶಾಹಿಗಳ ಪರ ಪಕ್ಷವಾಗಿದ್ದು ಶ್ರೀಮಂತ- ಬಡವರ ಅಂತರ ಅಧಿಕವಾಗುತ್ತಿದೆ. ದೇಶದಲ್ಲಿ ಪ್ರಜಾಪ್ರಭುತ್ವ ನಾಶವಾಗುತ್ತಿದೆ. ಕಳೆದ ಸಾಲಿನಲ್ಲಿ ರಾಜ್ಯದಿಂದ ಆಯ್ಕೆಯಾದ ಸಂಸತ್ ಸದಸ್ಯರು ಕೇಂದ್ರದಲ್ಲಿ ಯಾವುದೇ ರೀತಿಯ ಜನಪರ ಧ್ವನಿ ಎತ್ತದಿರುವ ಬಗ್ಗೆ ಅವರು ಆಕ್ಷೇಪ ವ್ಯಕ್ತಪಡಿಸಿದರು.

ಗೆಲುವು ನಿಶ್ಚಿತ - ಮಂತÀರ್

ಕ್ಷೇತ್ರ ಶಾಸಕ ಡಾ .ಮಂತರ್ ಗೌಡ ಮಾತನಾಡಿ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಲಕ್ಷö್ಮಣ್ ಅವರನ್ನು ಗೆಲ್ಲಿಸುವ ಜವಾಬ್ದಾರಿ ತಮ್ಮದಾಗಿದೆ. ಲಕ್ಷö್ಮಣ್ ಅವರ ಗೆಲುವು ನಿಶ್ಚಿತ ಎಂದರು.

ಅಭ್ಯರ್ಥಿ ಲಕ್ಷö್ಮಣ್ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಕಾರ್ಯಕ್ರಮವನ್ನು ನೆನಪಿಸಿಕೊಂಡು ಬೆಂಬಲಿಸಿ ತನಗೆ ಈ ಬಾರಿ ಅವಕಾಶ ನೀಡಬೇಕು ಎಂದು ಕೋರಿದರು. ತನ್ನನ್ನು ಆಯ್ಕೆ ಮಾಡಿದ್ದಲ್ಲಿ ಜಿಲ್ಲೆಯ ಹಲವಾರು ಸಮಸ್ಯೆಗಳಿಗೆ ಶಾಶ್ವತ ಪರಿಹಾರ ದೊರಕಲಿದೆ. ಪ್ರವಾಸೋದ್ಯಮದ ಸಮಗ್ರ ಅಭಿವೃದ್ಧಿ ಮಾಡುವುದು ಹಾಗೂ ಮಾಜಿ ಸೈನಿಕರ ಸಮಸ್ಯೆಗೆ ಪರಿಹಾರ ಕಂಡುಹಿಡಿಯುವುದು ಜೊತೆಗೆ ಜಿಲ್ಲೆಯಲ್ಲಿ ವೈದ್ಯಕೀಯ ತಾಂತ್ರಿಕ ಹಾಗೂ ಕಾನೂನಾತ್ಮಕವಾಗಿ ಅಭಿವೃದ್ಧಿ ಎಲ್ಲಾ ರೀತಿಯ ಪ್ರಯತ್ನ ಮಾಡಲಾಗುವುದು ಎಂದರು.

ವೀರಾಜಪೇಟೆ ಶಾಸಕÀ ಎ.ಎಸ್. ಪೊನ್ನಣ್ಣ, ಕೆಪಿಸಿಸಿ ಸದಸ್ಯ ಮಂಜುನಾಥ್ ಗುಂಡೂರಾವ್, ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷÀ ವಿ.ಪಿ ಶಶಿಧರ್ ಮಾತನಾಡಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯರುಗಳಾದ ಅರುಣ್ ಮಾಚಯ್ಯ, ವೀಣಾ ಅಚ್ಚಯ್ಯ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಪಿ. ಚಂದ್ರಕಲಾ, ಶಾಮ್, ಪಕ್ಷದ ವಿವಿಧ ವಿಭಾಗಗಳ ಪ್ರಮುಖರು, ಪುರಸಭಾ ಸದಸ್ಯರು ಇದ್ದರು.