ಮಡಿಕೇರಿ, ಮಾ. ೩೧: ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಬೆಳ್ಳಿ ಮಹೋತ್ಸವದ ಪ್ರಯುಕ್ತ ಎರಡನೇ ದಿನ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯAಡ ವೀಣಾ ಅಚ್ಚಯ್ಯ ಅವರು, ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆ ಮಾಡುವ ಮೂಲಕ ಉನ್ನತ ಹುದ್ದೆಗಳನ್ನು ಅಲಂಕರಿಸಿ ಶಾಲೆಗೆ ಹಾಗೂ ಶಿಕ್ಷಕರಿಗೆ ಕೀರ್ತಿ ತಂದುಕೊಡಬೇಕು ಎಂದು ಕರೆ ನೀಡಿದರು.
ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಗೆ ತನ್ನದೇ ಆದ ಇತಿಹಾಸವಿದೆ, ಇಲ್ಲಿ ವ್ಯಾಸಂಗ ಮಾಡಿದ ಮಕ್ಕಳು ಉನ್ನತ ಸ್ಥಾನಗಳಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ. ಶಾಲೆಯಲ್ಲಿ ಜನರಲ್ ತಿಮ್ಮಯ್ಯ ಅವರ ಪುತ್ಥಳಿಯನ್ನು ಸ್ಥಾಪಿಸುವ ಮೂಲಕ ವೀರಾಸೇನಾನಿಗೆ ನಿರಂತರ ಗೌರವ ಸೂಚಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದರು.
ಮೈಸೂರಿನ ಎಸ್ಬಿಆರ್ಆರ್ ಮಹಾಜನ ಕಾಲೇಜಿನ ಸ್ನಾತಕೋತ್ತರ ಕೇಂದ್ರದ ಮುಖ್ಯಸ್ಥ ಕೊಡಂದೇರ ಹರೀಶ್ ಮಾಚಯ್ಯ ಮಾತನಾಡಿ, ಜನರಲ್ ತಿಮ್ಮಯ್ಯ ಅವರು ಒಬ್ಬ ಪರಿಪೂರ್ಣ ವ್ಯಕ್ತಿಯಾಗಿದ್ದು, ಯುವ ಸಮೂಹಕ್ಕೆ ಮಾದರಿಯಾಗಿದ್ದಾರೆ. ಅವರು ಸಜ್ಜನ ಸೇನಾನಿ, ಅವರ ಹೆಸರಿನಲ್ಲಿ ನಡೆಯುತ್ತಿ ರುವ ಜನರಲ್ ತಿಮ್ಮಯ್ಯ ಶಾಲೆಯು ಮಾದರಿ ಶಿಕ್ಷಣ ಸಂಸ್ಥೆಯಾಗಿ ೨೫ ವರ್ಷಗಳನ್ನು ಪೂರೈಸಿರುವುದು ಹೆಮ್ಮೆಯ ವಿಚಾರ ಎಂದರು. ಶಾಲಾ ಆಡಳಿತ ಮಂಡಳಿಯ ಕರೆಸ್ಪಾಂಡೆAಟ್ ಕನ್ನಂಡ ಕವಿತ ಬೊಳ್ಳಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಜನರಲ್ ತಿಮ್ಮಯ್ಯ ಶಾಲೆ ಎಲ್ಲಾ ವಿಷಯದಲ್ಲೂ ಮಾದರಿಯಾಗಿದೆ. ಪೋಷಕರು ತಮ್ಮ ಮಕ್ಕಳೊಂದಿಗೆ ಹೆಚ್ಚು ಕಾಲ ಕಳೆಯುವ ಮೂಲಕ ಅವರ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಬೇಕು ಮತ್ತು ಶಿಕ್ಷಕರು ಮಕ್ಕಳ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಉತ್ತಮ ವೇದಿಕೆ ಕಲ್ಪಿಸಬೇಕು ಎಂದು ತಿಳಿಸಿದರು. ಪೋಷಕರ ಪರವಾಗಿ ವಿನಿತಾ ಮಾದಪ್ಪ ಮಾತನಾಡಿದರು.
ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಮಂಡುವAಡ ಪಿ.ಮುತ್ತಪ್ಪ, ಕಾರ್ಯನಿರ್ವಾಹಕರಾದ ಮುಕ್ಕಾಟಿರ ಪೊನ್ನಮ್ಮ ಮೊಣ್ಣಪ್ಪ, ಸದಸ್ಯರಾದ ನಂದಿನೆರವAಡ ಎಂ. ದಿನೇಶ್, ಕೇಕಡ ಎ. ದೇವಯ್ಯ, ಮಂಡೀರ ಎಂ. ಮುದ್ದಪ್ಪ, ಮೂವೇರ ಕೆ. ಜಯರಾಮ್, ಬೊಪ್ಪಂಡ ಸರಳ ಕರುಂಬಯ್ಯ, ಕಾಂಡೇರ ಲಲ್ಲು ಕುಟ್ಟಪ್ಪ, ಶಿಕ್ಷಣ ತಜ್ಞರಾದ ಅಮ್ಮಾಟಂಡ ಪಾರ್ವತಿ ಅಪ್ಪಯ್ಯ, ಚೌರೀರ ಕಾವೇರಿ ಪೂವಯ್ಯ, ಶಾಲೆಯ ಪ್ರಾಂಶುಪಾಲೆ ಕಲ್ಮಾಡಂಡ ಸರಸ್ವತಿ ಸುಬ್ಬಯ್ಯ, ಮತ್ತಿತರರು ಉಪಸ್ಥಿತರಿದ್ದರು. ಶಿಕ್ಷಕರಾದ ಕೆ.ಶಶಿ, ಟೈನಿ ಚಂಗಪ್ಪ, ಬಿ.ಎ.ಚರಿಷ್ಮಾ ಅವರುಗಳು ಸಭಾ ಕಾರ್ಯಕ್ರಮ ಹಾಗೂ ಶಿಕ್ಷಕ ಭರತ್ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಿರೂಪಿಸಿದರು.