ವೀರಾಜಪೇಟೆ, ಏ. ೧: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆ ಹಾಗೂ ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕದ ಸಹಯೋಗದೊಂದಿಗೆ ಮೂರ್ನಾಡು ಪ್ರಥಮ ದರ್ಜೆ ಕಾಲೇಜಿನಲ್ಲಿ ಏಡ್ಸ್ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಏಡ್ಸ್ ಜಾಗೃತಿ ಕುರಿತಾಗಿ ದ್ವಿತೀಯ ಬಿಕಾಂನ ವಿದ್ಯಾರ್ಥಿಗಳಾದ ಹರ್ಷಿತ ಹಾಗೂ ಅರ್ಜುನ್ ಮಾತನಾಡಿದರು. ಕಾಲೇಜಿನ ಎನ್ಎಸ್ಎಸ್ ಅಧಿಕಾರಿ ಕಲ್ಪನಾ ಕಾರ್ಯಕ್ರಮದ ಕುರಿತಾಗಿ ಮಾತನಾಡಿದರು. ಏಡ್ಸ್ ಕುರಿತಾದ ಪೋಸ್ಟರ್ ಮೇಕಿಂಗ್ ಹಾಗೂ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ರೇಖಾ ಚಿಣ್ಣಪ್ಪ ಮಾತನಾಡಿ ಏಡ್ಸ್ ಬಗ್ಗೆ ಶಾಲಾ-ಕಾಲೇಜು ಹಂತದಲ್ಲಿ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿದರೆ ಹೆಚ್ಚು ಸೂಕ್ತ ಎಂದು ಅಭಿಪ್ರಾಯಪಟ್ಟರು.