ಕೂಡಿಗೆ, ಏ.೧: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯು ಕೂಡುಮಂಗಳೂರು ರಾಮೇಶ್ವರ ಸಹಕಾರ ಸಂಘದ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆ ಯನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ನೆರವೇರಿಸಿ ಮಾತನಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಸಾಮಾನ್ಯ ವರ್ಗದ ಜನರಿಗೆ ಬಹು ಉಪಯುಕ್ತವಾಗುತ್ತಿವೆ. ಯೋಜನೆಯ ಬಗ್ಗೆ ತಿಳಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕಾಗಿದೆ. ಈಗಾಗಲೇ ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಪಕ್ಷದ ಶಾಸಕರು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿರುವ ಹಿನ್ನೆಲೆಯಲ್ಲಿ, ಲೋಕಸಭಾ ಸದಸ್ಯರು ಕಾಂಗ್ರೆಸ್ ಪಕ್ಷದವರೇ ಆದರೆ ಹೆಚ್ಚಿನ ಅನುದಾನದ ಮೂಲಕ ಉತ್ತಮ ಪ್ರಗತಿ-ಯೋಜನೆಗಳನ್ನು ರೂಪಿಸಿ ಕ್ಷೇತ್ರ ವನ್ನು ಅಭಿವೃದ್ಧಿಪಡಿಸಲು ಅನುಕೂಲ ವಾಗುವುದು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗಳಲ್ಲಿ ಕಾಂಗ್ರೆಸ್ ಜಿಲ್ಲಾ ಅಸಂಘಟಿತ ಕಾರ್ಮಿಕ ಘಟಕದ ಅಧ್ಯಕ್ಷ ಟಿ.ಪಿ. ಹಮೀದ್ ವಹಿಸಿದರು. ವೇದಿಕೆಯಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ. ಕೆ.ಪಿ. ಚಂದ್ರಕಲಾ, ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್, ಕೆ.ಪಿ.ಸಿ.ಸಿ. ಸಮಿತಿ ಸದಸ್ಯ ಮಂಜುನಾಥ್ ಗುಂಡೂರಾವ್, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸದಸ್ಯರಾದ ಅರುಣ್ ರಾವ್, ಫಿಲೋಮಿನಾ, ಟಿ.ಪಿ. ಹಮೀದ್, ಕಾರ್ಮಿಕ ಘಟಕದ ಅಧ್ಯಕ್ಷ ಅಣ್ಣಯ್ಯ, ನಟೇಶ್ ಗೌಡ, ವಿಕ್ಟರ್, ಸುರೇಶ್, ಕೂಡಿಗೆ-ಕೂಡು ಮಂಗಳೂರು ಪಂಚಾಯಿತಿ ವ್ಯಾಪ್ತಿಯ ಪಕ್ಷದ ವಿವಿಧ ಘಟಕಗಳÀ ಸದಸ್ಯರು, ಪದಾಧಿಕಾರಿಗಳು ಸೇರಿದಂತೆ ಕಾರ್ಯಕರ್ತರು ಹಾಜರಿದ್ದರು.