ವೀರಾಜಪೇಟೆ, ಮಾ. ೩೧: ವಿಶ್ವ ಕನ್ನಡ ಸಾಹಿತ್ಯ ಮತ್ತು ಸಾಂಸ್ಕöÈತಿಕ ಸಂಸ್ಥೆ ಹಾಗೂ ವಿಶ್ವ ಕನ್ನಡ ಕಲಾ ಸಂಸ್ಥೆ ಇವರ ವತಿಯಿಂದ ಬೆಂಗಳೂರಿನ ಬಾಗಲಗುಂಟೆಯ ಮಹಾಲಕ್ಷಿ÷್ಮ ಕಲ್ಯಾಣ ಮಂಟಪದಲ್ಲಿ ನಡೆದ ರಾಜ್ಯ ಮಟ್ಟದ ಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನದಲ್ಲಿ ಜಿಲ್ಲೆಯ ಮೂವರು ಕಲಾವಿದೆಯ ರಿಗೆ ಜ್ಞಾನಯೋಗಿ ಶಿವಶರಣೆ ನೀಲಾಂಬಿಕೆ ಪ್ರಶಸ್ತಿ ನೀಡಿ ಗೌರವಿಸ ಲಾಗಿದೆ. ವೀರಾಜಪೇಟೆಯ ನಾಟ್ಯಾಂಜಲಿ ನೃತ್ಯ ಸಂಸ್ಥೆಯ ಗುರು ಕಾವ್ಯಶ್ರೀ ಕಾಂತ್‌ರಾಜ್ ಅವರಿಗೆ ನೃತ್ಯ ಕ್ಷೇತ್ರದಲ್ಲಿನ ವೈಯಕ್ತಿಕ ಸಾಧನೆ ಹಾಗೂ ವಿದ್ಯಾರ್ಥಿಗಳಿಗೆ ನೀಡುತ್ತಿ ರುವ ತರಬೇತಿಯನ್ನು ಪರಿಗಣಿಸಿ ರಾಜ್ಯ ಮಟ್ಟದ ಜ್ಞಾನ ಯೋಗಿ ಶಿವಶರಣೆ ನೀಲಾಂಬಿಕೆ ಪ್ರಶಸ್ತಿ ಯನ್ನು ನೀಡಿ ಗೌರವಿಸಲಾಯಿತು.
ಕಾವ್ಯಶ್ರೀ ಅಮ್ಮತ್ತಿ ಬಿಳುಗುಂದ ಗ್ರಾಮದ ಹೇಮಾವತಿ, ಕಾಂತ್‌ರಾಜ್ ದಂಪತಿಯ ಪುತ್ರಿ. ಪ್ರಸ್ತುತ ಅರಮೇರಿ ಕಳಂಚೇರಿ ಮಠದ ಎಸ್.ಎಂ.ಎಸ್ ವಿದ್ಯಾಪೀಠದಲ್ಲಿ ಶಿಕ್ಷಕಿಯಾಗಿದ್ದಾರೆ.
*ವೀರಾಜಪೇಟೆಯ ವಿದುಷಿ ಪ್ರೇಮಾಂಜಲಿ ಆಚಾರ್ಯ ಅವರಿಗೂ ಜ್ಞಾನಯೋಗಿ ಶಿವಶರಣೆ ನೀಲಾಂಬಿಕೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾ ಯಿತು. ಇವರು ವೀರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಶಾಲೆಯ ಸಂಸ್ಥಾಪಕಿ ಯಾಗಿದ್ದಾರೆ.
*ಮಡಿಕೇರಿಯ ವಿದುಷಿ ಕಾವ್ಯಶ್ರೀ ಕಪಿಲ್ ಅವರಿಗೂ ಭರತನಾಟ್ಯ ಕ್ಷೇತ್ರದಲ್ಲಿ ಮಾಡಿರುವ ಸಾಧನೆಯನ್ನು ಪರಿಗಣಿಸಿ ಜ್ಞಾನಯೋಗಿ ಶಿವÀಶರಣೆ ನೀಲಾಂಬಿಕೆ ಪ್ರಶಸ್ತಿ ನೀಡಿ ಗೌರವಿಸ ಲಾಯಿತು. ಇವರು ಮಡಿಕೇರಿಯ ಬಾಲಭವನದಲ್ಲಿ ಭರತನಾಟ್ಯ ತರಗತಿ ನಡೆಸುತ್ತಿದ್ದಾರೆ.