ನಾಪೋಕ್ಲು, ಏ. ೨: ಕೊಡಗು ಡಿಸಿಸಿ ಬ್ಯಾಂಕಿನ ನಿರ್ದೇಶಕರಾಗಿ ಆಯ್ಕೆಯಾದ ಸ್ಥಳೀಯ ಪ್ರಾಥಮಿಕ ಕೃಷಿಪÀತ್ತಿನ ಸಹಕಾರ ಸಂಘದ ಅಧ್ಯಕ್ಷ ಕೇಟೋಳಿರ ಹರೀಶ್ ಪೂವಯ್ಯ ಅವರನ್ನು ನಾಪೋಕ್ಲು ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಸ್ಥಳೀಯ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಕಚೇರಿಯಲ್ಲಿ ನಡೆದÀ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಹರೀಶ್ ಪೂವಯ್ಯ ಡಿಸಿಸಿ ಬ್ಯಾಂಕಿನ ನಿರ್ದೇಶಕರ ಸ್ಥಾನಕ್ಕೆ ಸತತವಾಗಿ ನಾಲ್ಕು ಬಾರಿ ಆಯ್ಕೆಯಾಗಿದ್ದೇನೆ. ಎರಡು ಬಾರಿ ಉಪಾಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದೇನೆ ಎಂದರು. ನಿರ್ದೇಶಕ ಶಿವಚಾಳಿಯಂಡ ಅಂಬಿ ಕಾರ್ಯಪ್ಪ ಮಾತನಾಡಿದರು.
ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷರಾದ ಕುಂಡ್ಯೋಳAಡ ಎಂ. ಕವಿತಾ, ನಿರ್ದೇಶಕರಾದ ಕೇಲೇಟಿರ ಮುತ್ತಮ್ಮ, ಚೀಯಕಪೂವಂಡ ಸತೀಶ್. ದೇವಯ್ಯ, ಚೋಕಿರ ಪ್ರಭು ಪೂವಪ್ಪ, ಹೆಚ್.ಎ. ಬೊಳ್ಳು, ಅರೆಯಡ ರತ್ನ ಪೆಮ್ಮಯ್ಯ, ಚೋಕಿರ ಸಜಿತ್ ಚಿಣ್ಣಪ್ಪ, ಕುಂಡ್ಯೋಳAಡ ವಿಶು ಪೂವಯ್ಯ, ಟಿ.ಎ. ಮಿಟ್ಟು, ಅಪ್ಪಚ್ಚಿರ ರೀನಾ ನಾಣಯ್ಯ, ಎನ್.ಕೆ. ಪುಷ್ಪ ವ್ಯವಸ್ಥಾಪಕ ಶಿವಚಾಳಿಯಂಡ ವಿಜು ಪೂಣಚ್ಚ ಹಾಗೂ ಸಿಬ್ಬಂದಿ ಮತ್ತು ಸಾರ್ವಜನಿಕರು ಹಾಜರಿದ್ದರು.