ಸೋಮವಾರಪೇಟೆ, ಏ.೨ : ಪಟ್ಟಣ ವ್ಯಾಪ್ತಿಯಲ್ಲಿರುವ ೩೩/೧೧ ಕೆ.ವಿ. ವಿದ್ಯುತ್ ವಿತರಣಾ ಕೇಂದ್ರವನ್ನು ೬೬/೧೧ ಕೆ.ವಿ. ಘಟಕವನ್ನಾಗಿ ಮೇಲ್ದರ್ಜೆಗೆ ಏರಿಸುತ್ತಿರುವುದರಿಂದ, ಐಗೂರು ಫೀಡರ್‌ನಲ್ಲಿ ತುರ್ತು ನಿರ್ವಹಣಾ ಕಾರ್ಯ ಕೈಗೊಳ್ಳುವ ಹಿನ್ನೆಲೆ ತಾ. ೩ ರಿಂದ ೧೪ರವರೆಗೆ ಆಯ್ದ ದಿನಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಕಚೇರಿ ಪ್ರಕಟಣೆ ತಿಳಿಸಿದೆ.
ತಾ. ೩, ೫, ೭, ೧೨ ಮತ್ತು ೧೪ರಂದು ಬೆಳಿಗ್ಗೆ ೧೦ ಗಂಟೆಯಿAದ ಸಂಜೆ ೫ ಗಂಟೆಯವರೆಗೆ ಬಳಗುಂದ, ಯಡವಾರೆ, ಐಗೂರು, ಹೊಸತೋಟ, ಕಾಜೂರು, ಕಾರೇಕೊಪ್ಪ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯಗೊಳ್ಳಲಿದೆ ಎಂದು ಪ್ರಕಟಣೆ ತಿಳಿಸಿದೆ.