ನಾಪೋಕ್ಲು, ಮೇ ೫: ಭಾಗಮಂಡಲ ಸಮೀಪದ ಕೋರಂಗಾಲದ ಸುಬ್ರಹ್ಮಣ್ಯ ದೇವಾಲಯದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ವಿಜೃಂಭಣೆಯಿAದ ನಡೆಯಿತು.

ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಗಣಹೋಮ, ದೇವರಿಗೆ ಅನುಜ್ಞಾನ ಕಲಶ, ಬಿಂಬಶುದ್ಧಿ, ನವಗ್ರಹ ಹೋಮ, ತತ್ವಹೋಮ, ತತ್ವಕಲಶ, ಜೀವಕಲಸ ಪ್ರತಿಷ್ಠೆ, ದುರ್ಗಾದೀಪ ನಮಸ್ಕಾರ ಪೂಜೆ, ಪ್ರಾಯಶ್ಚಿತ ಹೋಮ, ಆದಿವಾಸ ಹೋಮ, ಕಲಶ ಮಂಟಪ ಸಂಸ್ಕಾರ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.

ವೃಷಭ ಲಗ್ನದಲ್ಲಿ ಬ್ರಹ್ಮಕಲಶಾಭಿಷೇಕ ನಡೆಯಿತು. ಉಪದೇವರಿಗೆ ಕಲಶಾಭಿಷೇಕ, ಮಹಾಪೂಜೆ ದೇವರಿಗೆ ಪ್ರತಿಷ್ಠೆ ಬಲಿ, ಮಂಗಳ ಮಂತ್ರಾಕ್ಷತೆ, ಆಶೀರ್ವಚನ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಮೂರು ದಿನಗಳ ಕಾಲ ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಅಧಿಕ ಸಂಖ್ಯೆಯ ಗ್ರಾಮಸ್ಥರು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ಈ ಸಂದರ್ಭ ದೇವಾಲಯದ ಆಡಳಿತ ಮಂಡಳಿ, ಜೀರ್ಣೋದ್ಧಾರ ಸಮಿತಿ, ತಕ್ಕಮುಖ್ಯಸ್ಥರು, ಚುನಾಯಿತ ಪ್ರತಿನಿಧಿಗಳು ವಿವಿಧ ಸಂಘ-ಸAಸ್ಥೆಗಳ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.