ರಾಜಕೀಯ ಷಡ್ಯಂತ್ರದಿAದ ಬಂಧನ-ರೇವಣ್ಣ ಆರೋಪ

ಬೆಂಗಳೂರು, ಮೇ ೫: ತÀನ್ನ ವಿರುದ್ಧ ದೊಡ್ಡ ಷಡ್ಯಂತ್ರ ಮಾಡಿ ಮಹಿಳೆ ಅಪಹರಣ ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ಎಸ್‌ಐಟಿಯಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಆರೋಪಿಸಿದ್ದಾರೆ. ಬೌರಿಂಗ್ ಆಸ್ಪತ್ರೆಯಲ್ಲಿ ಭಾನುವಾರ ವೈದ್ಯಕೀಯ ತಪಾಸಣೆಗೆ ಒಳಗಾಗುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ೪೦ ವರ್ಷಗಳ ರಾಜಕೀಯ ಇತಿಹಾಸದಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲ. ಆದಾಗ್ಯೂ ರಾಜಕೀಯ ಷಡ್ಯಂತ್ರದಿAದ ದುರುದ್ದೇಶದಿಂದ ಬಂಧಿಸಲಾಗಿದೆ ಎಂದು ಕಿಡಿಕಾರಿದರು. ಏಪ್ರಿಲ್ ೨೮ಕ್ಕೆ ನನ್ನ ವಿರುದ್ಧ ಎಫ್‌ಐಆರ್ ದಾಖಲಿಸಿದರೂ ತನ್ನ ವಿರುದ್ಧ ಯಾವುದೇ ಪುರಾವೆ ಸಿಗಲಿಲ್ಲ. ಹಾಗಾಗೀ ಮೇ ೨ ರಂದು ಮತ್ತೊಂದು ಕೇಸ್ ಹಾಕಿಸಿ ಬಂಧಿಸಿದ್ದಾರೆ. ರಾಜಕೀಯ ದುರುದ್ದೇಶದಿಂದ ರಾಜಕೀಯ ಇತಿಹಾಸದಲ್ಲೇ ಇದು ದೊಡ್ಡ ಷಡ್ಯಂತ್ರವಾಗಿದೆ. ಇದನ್ನು ಎದುರಿಸುವ ಶಕ್ತಿಯಿದೆ.

ಪ್ರಜ್ವಲ್ ಪತ್ತೆಗೆ ವಿದೇಶದಲ್ಲಿ ಹುಡುಕಾಟ

ಬೆಂಗಳೂರು, ಮೇ ೫: ಲೈಂಗಿಕ ಹಗರಣ ಪ್ರಕರಣಕ್ಕೆ ಸಂಬAಧಿಸಿದAತೆ ಸದ್ಯ ದೇಶದಿಂದ ಪರಾರಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಗಾಗಿ ಎಸ್‌ಐಟಿ ವಿದೇಶದಲ್ಲಿ ಹುಡುಕಾಟವನ್ನು ತೀವ್ರಗೊಳಿಸಿದ್ದು, ಪ್ರಕರಣದ ಇನ್ನೂ ಮೂವರು ಸಂತ್ರಸ್ತೆಯರು ಎಸ್‌ಐಟಿಯನ್ನು ಸಂಪರ್ಕಿಸಿದ್ದಾರೆ ಎಂದು ಮೂಲಗಳು ಭಾನುವಾರ ತಿಳಿಸಿವೆ. ಶನಿವಾರ ಶಾಸಕ ಹೆಚ್.ಡಿ. ರೇವಣ್ಣ ಅವರ ಬಂಧನದ ಬಳಿಕ ಸಂತ್ರಸ್ತರು ಎಸ್‌ಐಟಿ ಮೊರೆ ಹೋಗಿದ್ದು, ಶೀಘ್ರದಲ್ಲೇ ಅವರು ತಮ್ಮ ಹೇಳಿಕೆಯನ್ನು ದಾಖಲಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಈ ನಿಟ್ಟಿನಲ್ಲಿ ಹೆಚ್ಚಿನ ವಿವರಗಳು ಇನ್ನಷ್ಟೇ ಹೊರಬರಬೇಕಿದೆ. ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ಬಂಧನದ ಬೆನ್ನಲ್ಲೇ, ಅಶ್ಲೀಲ ವೀಡಿಯೋ ಹಗರಣದ ಪ್ರಮುಖ ಆರೋಪಿ ಪ್ರಜ್ವಲ್ ರೇವಣ್ಣ ಶೀಘ್ರದಲ್ಲೇ ಅಧಿಕಾರಿಗಳ ಮುಂದೆ ಶರಣಾಗುವ ಸಾಧ್ಯತೆಯಿದೆ. ಪ್ರಜ್ವಲ್ ರೇವಣ್ಣ ಅವರ ಚಲನವಲನಗಳ ಬಗ್ಗೆ ಸಂಗ್ರಹಿಸಿದ ಮಾಹಿತಿ ಆಧಾರದ ಮೇಲೆ ಎಸ್‌ಐಟಿ ತಂಡ ಈಗಾಗಲೇ ವಿದೇಶಕ್ಕೆ ಬಂದಿಳಿದಿದ್ದು, ಸ್ಥಳೀಯ ಸಂಸ್ಥೆಗಳು ಮತ್ತು ಕೇಂದ್ರೀಯ ತನಿಖಾ ದಳ (ಸಿಬಿಐ) ಸಮನ್ವಯದಲ್ಲಿ ಅವರನ್ನು ಬಂಧಿಸಲಿದೆ ಎಂದು ಮೂಲಗಳು ತಿಳಿಸಿವೆ. ಎಸ್‌ಐಟಿ ಟ್ರ‍್ಯಾಕಿಂಗ್ ಪ್ರಕಾರ ಪ್ರಜ್ವಲ್ ಅವರು ಹಂಗೇರಿಯ ಬುಡಾಪೆಸ್ಟ್ನಲ್ಲಿರುವುದು ಪತ್ತೆಯಾಗಿದೆ. ಪ್ರಜ್ವಲ್ ರೇವಣ್ಣ ಪದೇ ಪದೇ ಸ್ಥಳ ಬದಲಾಯಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಜ್ವಲ್ ವಿರುದ್ಧ ಬ್ಲೂ ಕಾರ್ನರ್ ನೋಟೀಸ್

ಬೆಂಗಳೂರು, ಮೇ ೫: ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಮತ್ತಷ್ಟು ಸಂಕಷ್ಟ ಎದುರಾಗಿದ್ದು, ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಮನವಿ ಬೆನ್ನಲ್ಲೇ ಸಿಬಿಐ ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕಾರ್ನರ್ ನೋಟೀಸ್ ಜಾರಿ ಮಾಡಿದೆ. ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ರಾಜ್ಯ ಗೃಹ ಸಚಿವ ಜಿ. ಪರಮೇಶ್ವರ್, ಲೈಂಗಿಕ ಕಿರುಕುಳ ಮತ್ತು ಅಪಹರಣ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ಪತ್ತೆಗೆ ಈಗಾಗಲೇ ಬ್ಲೂ ಕಾರ್ನರ್ ನೋಟಿಸ್Ã ನೀಡಲಾಗಿದೆ. ಪ್ರಕರಣದ ತನಿಖೆ ನಡೆಸಲು ವಿಶೇಷ ತನಿಖಾ ತಂಡಕ್ಕೆ ರಾಜ್ಯ ಸರ್ಕಾರ ಸಂಪೂರ್ಣ ಸ್ವಾತಂತ್ರö್ಯ ನೀಡಲಾಗಿದೆ ಎಂದು ತಿಳಿಸಿದರು. ಈ ಬ್ಲೂ ಕಾರ್ನರ್ ನೋಟಿಸ್ ಇಂಟರ್‌ಪೋಲ್ ಕಲರ್-ಕೋಡೆಡ್ ನೋಟೀಸ್‌ನ ಒಂದು ಭಾಗವಾಗಿದ್ದು, ಇದು "ಜಗತ್ತಿನಾದ್ಯಂತ (ಅಪೇಕ್ಷಿತ ವ್ಯಕ್ತಿಗಳು/ಅಪರಾಧಗಳ ಕುರಿತು) ಮಾಹಿತಿಗಾಗಿ ಎಚ್ಚರಿಕೆಗಳು ಮತ್ತು ವಿನಂತಿಗಳನ್ನು ಹಂಚಿಕೊಳ್ಳಲು ದೇಶಗಳನ್ನು ಸಕ್ರಿಯಗೊಳಿಸುತ್ತದೆ ಮತ್ತು ತನಿಖೆ ನೆರವಾಗುತ್ತದೆ ಎಂದು ಹೇಳಲಾಗಿದೆ.

ಲೈಂಗಿಕ ದೌರ್ಜನ್ಯಕ್ಕೊಳಗಾದವರಿಗೆ ಆರ್ಥಿಕ ನೆರವು

ಬೆಂಗಳೂರು, ಮೇ ೫: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದವರಿಗೆ ಕಾಂಗ್ರೆಸ್ ಸರ್ಕಾರ ಆರ್ಥಿಕ ನೆರವು ನೀಡಲಿದೆ. ಬೆಳಗಾವಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಇದನ್ನು ಪ್ರಕಟಿಸಿದರು. ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ ಎಂದ ಅವರು, ‘ಕಳೆದ ೭೫ ವರ್ಷಗಳಲ್ಲಿ ಎಂದೂ ನಡೆಯದ ವಿಶಿಷ್ಟ ಪ್ರಕರಣ ಇದಾಗಿದ್ದು, ನೂರಾರು ಅತ್ಯಾಚಾರ ಸಂತ್ರಸ್ತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರ್ಥಿಕ ನೆರವು ಘೋಷಿಸಿದ್ದಾರೆ ಎಂದು ಸುರ್ಜೇವಾಲ ತಿಳಿಸಿದರು.

ಸಿಬಿಐ ಅಧಿಕಾರಿ ಸೋಗಿನಲ್ಲಿ ವಂಚನೆ

ಮAಗಳೂರು, ಮೇ ೫: ಸಿಬಿಐ ಅಧಿಕಾರಿಯ ಸೋಗಿನಲ್ಲಿ ಗುತ್ತಿಗೆದಾರರೊಬ್ಬರ ವಿರುದ್ಧ ಪ್ರಕರಣ ದಾಖಲಿಸುವುದಾಗಿ ಹೇಳಿ ೧೫ ಲಕ್ಷ ರೂ. ಗೂ ಅಧಿಕ ಹಣವನ್ನು ದೋಚಿರುವ ಘಟನೆ ನಡೆದಿದೆ. ಕೊಟ್ಟಾರ ನಿವಾಸಿಯಾದ ಸಂತ್ರಸ್ತರಿಗೆ ಏಪ್ರಿಲ್ ೨೫ ರಂದು ಕರೆ ಬಂದಿದೆ. ಬಳಿಕ ಈ ವಂಚನೆಯಲ್ಲಿ ಸಿಕ್ಕಿಬಿದ್ದಿದ್ದಾರೆ ಎಂದು ಅವರು ಹೇಳಿದರು. ಸಂತ್ರಸ್ತರ ಮೊಬೈಲ್ ಸಂಖ್ಯೆಗೆ ಕರೆ ಮಾಡಿದ ಆರೋಪಿ ತಾನು ಸಿಬಿಐ ಅಧಿಕಾರಿ ಎಂದು ಹೇಳಿಕೊಂಡಿದ್ದು, ಹಣಕಾಸಿನ ಅವ್ಯವಹಾರದ ಕುರಿತು ಮಾಹಿತಿ ಲಭ್ಯವಾಗಿದೆ ಎಂದಿದ್ದಾನೆ. ಈ ಸಂಬAಧ ಮುಂಬೈ ಸಿಬಿಐ ಕಚೇರಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತಕ್ಷಣ ಕ್ರಮ ಕೈಗೊಳ್ಳದಿದ್ದಲ್ಲಿ ಅವರ ಮೊಬೈಲ್ ಸಂಖ್ಯೆಯನ್ನು ಅಮಾನತುಗೊಳಿಸುವುದಾಗಿ ವಂಚಕ ಬೆದರಿಕೆ ಹಾಕಿದ್ದಾನೆ. ವಂಚಕ ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಸಿಬಿಐ)ನ ಹಿರಿಯ ಅಧಿಕಾರಿ ಎಂದು ಬಿಂಬಿಸಿದ ಇನ್ನೊಬ್ಬ ವ್ಯಕ್ತಿಗೆ ಕರೆಯನ್ನು ವರ್ಗಾಯಿಸಿದ್ದು, ಹಣದ ದುರುಪಯೋಗದ ಆರೋಪದ ಆಧಾರದ ಮೇಲೆ ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಳ್ಳುವುದು ಸೇರಿದಂತೆ ಇತರೆ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಸಂತ್ರಸ್ತರಿಗೆ ಬೆದರಿಸಿದ್ದಾರೆ. ವಂಚನೆಯ ಜಾಲದಲ್ಲಿ ಸಿಕ್ಕಿಬಿದ್ದ ಸಂತ್ರಸ್ತರು, ಪ್ರಕರಣದಿಂದ ಅವರನ್ನು ಮುಕ್ತವಾಗಿಸಲು ಹೆಚ್ಚಿನ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. ಈ ಒತ್ತಡಕ್ಕೆ ಮಣಿದ ಗುತ್ತಿಗೆದಾರರು ವಂಚಕರ ಸೂಚನೆಯಂತೆ ಹೆಚ್ಚುವರಿಯಾಗಿ ೧೫,೦೧,೦೪೯ ರೂ.ಗಳನ್ನು ವರ್ಗಾಯಿಸಿದ್ದಾರೆ.

ಎಂಜಿನ್‌ನಿAದ ಬೇರ್ಪಟ್ಟು ಸಾಗಿದ ಬೋಗಿಗಳು

ಅಮೃತಸರ, ಮೇ ೫: ಜಮ್ಮುವಿಗೆ ತೆರಳಬೇಕಿದ್ದ ರೈಲೊಂದರ ಬೋಗಿಗಳು ಎಂಜಿನ್‌ನಿAದ ಬೇರ್ಪಟ್ಟ ಘಟನೆ ಪಂಜಾಬ್‌ನ ಸರ್‌ಹಿಂದ್‌ನಲ್ಲಿ ಭಾನುವಾರ ನಡೆದಿದ್ದು, ಬೋಗಿಗಳಿಲ್ಲದೇ ಎಂಜಿನ್ ಬರೊಬ್ಬರಿ ೩ ಕಿಮೀ ಮುಂದೆ ಸಾಗಿದೆ. ಪಂಜಾಬ್‌ನ ಸರ್‌ಹಿಂದ್ ರೈಲ್ವೆ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಬೋಗಿಗಳು ಇಲ್ಲದೆ ಎಂಜಿನ್ ಸುಮಾರು ಮೂರು ಕಿಲೋ ಮೀಟರ್ ದೂರ ಚಲಿಸಿದೆ. ದೆಹಲಿ-ಕಟ್ರಾ ರೈಲ್ವೆ ಮಾರ್ಗದಲ್ಲಿ ಕೆಲಸನಿರತ ಕೀಮ್ಯಾನ್ ಒಬ್ಬರು ಬೋಗಿಗಳು ಇಲ್ಲದೆ ಎಂಜಿನ್ ಚಲಿಸುತ್ತಿರುವುದನ್ನು ಲೋಕೊ ಪೈಲಟ್ ಗಮನಕ್ಕೆ ತಂದರು. ನಂತರ ಬೋಗಿಗಳನ್ನು ಜೋಡಿಸಿಕೊಂಡು ಮತ್ತೆ ರೈಲನ್ನು ಚಲಾಯಿಸಲಾಯಿತು ಎಂದು ಅವರು ಮಾಹಿತಿ ನೀಡಿದ್ದಾರೆ.

ಮೊಸಳೆಗಳಿದ್ದ ಕೆರೆಗೆ ಮಗುವನ್ನು ಎಸೆದ ತಾಯಿ

ಕಾರವಾರ, ಮೇ ೫: ಗಂಡನ ಮೇಲಿದ್ದ ಕೋಪಕ್ಕೆ ಆರು ವರ್ಷದ ಮಗುವನ್ನು ಮೊಸಳೆ ತುಂಬಿದ್ದ ನಾಲೆಗೆ ತಾಯಿಯೇ ಎಸೆದ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಹಾಲಮಡ್ಡಿಯಲ್ಲಿ ವರದಿಯಾಗಿದೆ. ರವಿಕುಮಾರ ಹಾಗೂ ಸಾವಿತ್ರಿ ದಂಪತಿಯ ೬ ವರ್ಷದ ಮಗು ವಿನೋದ್ ಮೊಸಳೆಗೆ ಆಹಾರವಾಗಿದ್ದಾನೆ. ಗಂಡ-ಹೆAಡತಿ ಜಗಳ ಮಾಡುತ್ತಿರುವಾಗ ಕೋಪದ ಭರದಲ್ಲಿ ತಾಯಿ ಸಾವಿತ್ರಿ ಮಗುವನ್ನು ಮನೆಯ ಹಿಂದಿರುವ ಕಾಗದ ಕಾರ್ಖಾನೆಯಿಂದ ಬರುವ ರಾಸಾಯನಿಕ ನೀರಿನ ನಾಲೆಗೆ ಎಸೆದಿದ್ದಾಳೆ. ಮಗುವನ್ನು ನಾಲೆಗೆ ಎಸೆದ ವಿಷಯ ಅಕ್ಕಪಕ್ಕದ ಜನರಿಗೆ ತಿಳಿಯುತ್ತಿದ್ದಂತೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ದಳದವರು ಹಾಗೂ ಸ್ಥಳೀಯರು ಮಗುವಿನ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಭಾನುವಾರ ಮುಂಜಾನೆ ಮುಂದುವರೆದ ಶೋಧ ಕಾರ್ಯಾಚರಣೆಯಲ್ಲಿ ನಾಲೆಗೆ ಎಸೆಯಲಾಗಿದ್ದ ಮಗುವನ್ನು ಮೊಸಳೆಯೊಂದು ಬಾಯಿಯಲ್ಲಿ ಹಿಡಿದು ನದಿಯಲ್ಲಿ ಓಡಾಡುತ್ತಿರುವುದು ಕಂಡುಬAದಿದೆ. ಸ್ಥಳೀಯ ಮುಳುಗು ತಜ್ಞರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗೂ ಪೊಲೀಸ್ ಸಿಬ್ಬಂದಿಗಳು ಮೊಸಳೆ ಬಾಯಿಯಿಂದ ಮಗುವಿನ ಮೃತದೇಹವನ್ನು ಹೊರ ತಂದಿದ್ದಾರೆ.