ಮಡಿಕೇರಿ, ಮೇ ೬: ನಗರದ ಪತ್ರಿಕಾ ಭವನದಲ್ಲಿ ಕೊಡವ ಮಕ್ಕಡ ಕೂಟದ ೯೦ನೇ ಪುಸ್ತಕ ಹಾಗೂ ಲೇಖಕಿ ಯಶೋಧ ಪೇರಿಯಂಡ ಅವರ ಎರಡನೇ ಪುಸ್ತಕ "ಮಕ್ಕಕ್ ಕೊದಿಮೊದ"ವನ್ನು ಎಂ.ಬಾಡಗ ಸರ ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಮಡೆಯಂಡ ಉಮ್ಮಯ್ಯ ತಿಮ್ಮಯ್ಯ ಬಿಡುಗಡೆಗೊಳಿಸಿದರು.

ನಂತರ ಮಾತನಾಡಿದ ಅವರು, ಬರಹಗಾರರ ಸಂಖ್ಯೆ ಹೆಚ್ಚಾಗುತ್ತಿದೆ, ಕಥೆ, ಕವನ ರಚನೆಯಲ್ಲಿ ಆಸಕ್ತಿ ತೋರುತ್ತಿದ್ದಾರೆ. ಆದರೆ ಬರಹಗಾರರಿ ಗಷ್ಟೇ ಆಸಕ್ತಿ ಇದ್ದರೆ ಸಾಲದು. ಓದುಗರ ಸಂಖ್ಯೆಯೂ ಹೆಚ್ಚಾಗಬೇಕು. ಇಂದು ಮೊಬೈಲ್‌ನಲ್ಲೇ ಕಾಲಕಳೆ ಯುವ ಹೆಚ್ಚು ಮಂದಿ ಇದ್ದಾರೆ, ಜ್ಞಾನಾರ್ಜನೆಗೆ ಪುಸ್ತಕಗಳನ್ನು ಓದಬೇಕು ಎಂದು ತಿಳಿಸಿದರು.

"ಮಕ್ಕಕ್ ಕೊದಿಮೊದ" ಕೊಡವ ಪುಸ್ತಕದ ಲೇಖಕಿ ಯಶೋಧ ಪೇರಿಯಂಡ ಮಾತನಾಡಿ, ಹಿಂದಿನ ಕಾಲದಲ್ಲಿ ಪುಸ್ತಕ ಓದುಗರ ಸಂಖ್ಯೆ ಹೆಚ್ಚಿತ್ತು. ಅಲ್ಲದೇ ತಂದೆ, ತಾಯಂದಿರು, ಅಜ್ಜ, ಅಜ್ಜಿಯಂದಿರು ಮಕ್ಕಳಿಗೆ ಕಥೆಯನ್ನು ಹೇಳಿಕೊಡುವ ರೂಢಿ ಇತ್ತು. ಆದರೆ ಇಂದಿನ ಕಾಲಘಟ್ಟದಲ್ಲಿ ಮಕ್ಕಳು ಮೊಬೈಲ್, ಟಿ.ವಿ ಗಳಿಗೆ ಹೆಚ್ಚು ಒತ್ತು ನೀಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಮಕ್ಕಳಿಗೆ ಪರಿಸರ, ಪ್ರಾಣಿ ಪಕ್ಷಿಗಳ ಮೇಲೆ ಪ್ರೀತಿ ಹೆಚ್ಚಾಗಬೇಕು. ಈ ನಿಟ್ಟಿನಲ್ಲಿ ಮಕ್ಕಳಿಗಾಗಿ ಪುಸ್ತಕವನ್ನು ಬರೆಯಲಾಗಿದೆ ಎಂದರು.

ಭಾಗಮಂಡಲ ಶ್ರೀ ಇಗ್ಗುತ್ತಪ್ಪ ಎಜುಕೇಶನ್ ಸೊಸೈಟಿಯ ಪ್ರಧಾನ ಕಾರ್ಯದರ್ಶಿ ಚೀಯಕಪೂವಂಡ ಮಿಥುನ್ ಚಂಗಪ್ಪ ಮಾತನಾಡಿ, ಕೊಡವ ಮಕ್ಕಡ ಕೂಟದ ನೇತೃತ್ವದಲ್ಲಿ ಕೂಟದ ಸ್ಥಾಪಕಾಧ್ಯಕ್ಷ ಬೊಳ್ಳಜ್ಜೀರ ಬಿ.ಅಯ್ಯಪ್ಪ ಅವರು ಸರಕಾರದ ಯಾವುದೇ ಅನುದಾನವಿಲ್ಲದೆ ೯೦ ಪುಸ್ತಕಗಳನ್ನು ಲೋಕಾರ್ಪಣೆ ಗೊಳಿಸಿರುವುದು ಶ್ಲಾಘನೀಯ ಎಂದರು.

ಬಲಮುರಿ ಅಯ್ಯಪ್ಪ ಸ್ವಸಹಾಯ ಸಂಘದ ಸದಸ್ಯರಾದ ಚಂಗAಡ ರೇಷ್ಮಾ ತಮ್ಮಯ್ಯ ಮಾತನಾಡಿ, ಎಲ್ಲರಲ್ಲೂ ಒಂದೊAದು ರೀತಿಯ ಪ್ರತಿಭೆ ಅಡಗಿರು ತ್ತದೆ. ಆದರೆ ಬರೆಯುವ ಕಲೆ ಕೆಲವರಿಗೆ ಮಾತ್ರ ಬರುತ್ತದೆ. ಬರೆಯುವವರ ಸಂಖ್ಯೆಯAತೆ ಓದುಗರ ಸಂಖ್ಯೆಯೂ ಹೆಚ್ಚಾಗಬೇಕು ಎಂದರು.

ಕೊಡವ ಮಕ್ಕಡ ಕೂಟದ ಸ್ಥಾಪಕ ಅಧ್ಯಕ್ಷ ಬೊಳ್ಳಜ್ಜೀರ ಬಿ.ಅಯ್ಯಪ್ಪ ಮಾತನಾಡಿ, ಕೊಡವ ಮಕ್ಕಡ ಕೂಟದ ವತಿಯಿಂದ ಈವರೆಗೆ ಜಿಲ್ಲೆಯ ಹಲವು ಬರಹಗಾರರು, ಸಾಹಿತಿಗಳು ಬರೆದ ಕೊಡವ, ಕನ್ನಡ, ಇಂಗ್ಲೀಷ್, ಹಿಂದಿ ಸೇರಿದಂತೆ ೯೦ ಪುಸ್ತಕಗಳನ್ನು ಬಿಡುಗಡೆ ಮಾಡಲಾಗಿದ್ದು, ೧೦೦ನೇ ಪುಸ್ತಕಕ್ಕೆ ಬರಹಗಾರರಿಂದ ಲೇಖನಗ ಳನ್ನು ಆಹ್ವಾನಿಸುವುದಾಗಿ ತಿಳಿಸಿದ್ದಾರೆ.

ಕೊಡಗಿನ ಆಚಾರ, ವಿಚಾರ, ಸಂಸ್ಕೃತಿ, ಪದ್ಧತಿ, ಪರಂಪರೆ, ಇತಿ ಹಾಸ, ಸೇರಿದಂತೆ ಸಮಾಜಮುಖಿ ಬರಹಗಳನ್ನು ಸಂಗ್ರಹಿಸಿ ಪುಸ್ತಕ ರೂಪ ದಲ್ಲಿ ಹೊರ ತರಲು ನಿರ್ಧರಿಸಲಾಗಿದೆ. ೧೦೦ನೇ ಪುಸ್ತಕವಾಗಿ ೧೦೦ ಬರಹಗಾ ರರ ಲೇಖನಗಳನ್ನು ಒಂದೇ ಪುಸ್ತಕ ದಲ್ಲಿ ಪ್ರಕಟಿಸಿ ಬಿಡುಗಡೆಗೊಳಿಸ ಲಾಗುವುದು. ಬರಹ ಯಾವ ಭಾಷೆ ಯಲ್ಲಿ ಬೇಕಾದರು ಇರಬಹುದು.

ಆಸಕ್ತ ಬರಹಗಾರರು ಯಾವುದೇ ಜಾತಿ, ಮತ, ಬೇಧವಿಲ್ಲದೆ ತಮ್ಮ ಬರಹಗಳನ್ನು ಟೈಪ್ ಮಾಡಿ ಅಥವಾ ಬರೆದು ಕೊಡವ ಮಕ್ಕಡ ಕೂಟ, ಕೆ.ಬಾಡಗ, ಎಫ್.ಎಂ.ಕೆ.ಎA.ಸಿ ಕಾಲೇಜು ಪೋಸ್ಟ್, ಮಡಿಕೇರಿ, ಕೊಡಗು ಈ ವಿಳಾಸಕ್ಕೆ ಅಥವಾ ಬೊಳ್ಳ ಜ್ಜೀರ ಬಿ.ಅಯ್ಯಪ್ಪ ೯೮೮೦೭೭೮೦೭೪ ಮೊ. ಸಂಖ್ಯೆಗೆ ವಾಟ್ಸಾö್ಯಪ್ ಮಾಡಬ ಹುದು. ಲೇಖನಗಳನ್ನು ಜೂನ್ ೩೦ರೊಳÀಗೆ ಕಳುಹಿಸಿಕೊಡಬಹು ದಾಗಿದೆೆ ಎಂದು ಅಯ್ಯಪ್ಪ ತಿಳಿಸಿದರು. ಸಮಾಜ ಸೇವಕರಾದ ಮಡೆಯಂಡ ಸೂರಜ್ ತಿಮ್ಮಯ್ಯ ಉಪಸ್ಥಿತರಿದ್ದರು.