ಸಿದ್ದಾಪುರ, ಮೇ ೫: ಕೆಲ ತಿಂಗಳುಗಳಿAದ ಅಯ್ಯಪ್ಪ ದೇವರಕಾಡುವಿನಲ್ಲಿ ಕೆಲವು ಕಿಡಿಗೇಡಿಗಳು ತ್ಯಾಜ್ಯ ಸುರಿಯುತ್ತಿದ್ದ ಪರಿಣಾಮ ಎಲ್ಲೆಂದರಲ್ಲಿ ತ್ಯಾಜ್ಯದ ರಾಶಿ ಕಂಡುಬರುತ್ತಿತ್ತು.

ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿ ತ್ಯಾಜ್ಯ ಸುರಿಯುವವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದರು.

ವೀರಾಜಪೇಟೆ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಜಗನ್ನಾಥ್ ಹಾಗೂ ಎಸಿಎಫ್ ನೆಹರು ಅವರ ಮಾರ್ಗದರ್ಶನದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಣ್ಣಂಗಾಲ ಗ್ರಾಮದ ಚಾಮುಂಡಿ ಪೈಸಾರಿ ಸಮೀಪದ ಅಯ್ಯಪ್ಪ ದೇವರಕಾಡಿಗೆ ಭೇಟಿ ನೀಡಿ ಕಣ್ಣಂಗಾಲ ಗ್ರಾಮ ಪಂಚಾಯಿತಿಯ ತ್ಯಾಜ್ಯ ವಿಲೇವಾರಿ ವಾಹನದೊಂದಿಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ಹಾಗೂ ಪಂಚಾಯಿತಿ ಸಿಬ್ಬಂದಿಗಳನ್ನು ಒಗ್ಗೂಡಿಸಿ ಶ್ರಮದಾನದ ಮೂಲಕ ತ್ಯಾಜ್ಯ ತೆರವುಗೊಳಿಸಿದ್ದಾರೆ.

ದೇವರಕಾಡುವಿನಲ್ಲಿ ತ್ಯಾಜ್ಯ ಸುರಿಯುವವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲು ಸಿಸಿ ಕ್ಯಾಮರಾ ಅಳವಡಿಸಲಾಗಿದ್ದು, ದೇವರಕಾಡು ಸಂರಕ್ಷಣೆಗೆ ಸ್ಥಳೀಯರು ಸಹಕಾರ ನೀಡಬೇಕೆಂದು ವಲಯ ಅರಣ್ಯ ಅಧಿಕಾರಿ ಕಳ್ಳಿರ ಎಂ. ದೇವಯ್ಯ ಮನವಿ ಮಾಡಿದ್ದಾರೆ.

ಈ ಸಂದರ್ಭ ಉಪ ವಲಯ ಅರಣ್ಯಾಧಿಕಾರಿ ಸಂಜಿತ್ ಸೋಮಯ್ಯ, ಅರಣ್ಯ ಗಸ್ತು ಪಾಲಕರಾದ ಚಂದ್ರಶೇಖರ್, ಅರುಣಾ, ಆರ್‌ಆರ್‌ಟಿ ಸಿಬ್ಬಂದಿಗಳಾದ ವಿನೋದ್, ಅಚ್ಚಯ್ಯ, ಹರೀಶ್, ಸಚಿನ್, ದರ್ಶನ್ ಸೇರಿದಂತೆ ಪಂಚಾಯಿತಿಯ ಸ್ವಚ್ಛತಾ ಸಿಬ್ಬಂದಿ ಹಾಜರಿದ್ದರು.