ಸುಂಟಿಕೊಪ್ಪ, ಮೇ ೬: ೭ನೇ ಹೊಸಕೋಟೆಯ ಸಂತ ಸೆಬಾಸ್ಟೀನ್ ದೇವಾಲಯದ ವಾರ್ಷಿಕೋತ್ಸವದ ಅಂಗವಾಗಿ ೨ ದಿನದ ವಿಶೇಷ ಪೂಜೆ ಸೇರಿದಂತೆ ಆರಾಧನೆ, ಮಕ್ಕಳಿಗೆ ಪ್ರಥಮ ಪರಮ ಪ್ರಸಾದ ಹಾಗೂ ದೆವಾಲಯದ ಸುತ್ತ ಸಂತ ಸಬಾಸ್ಟೀನ್ ಅವರ ಮೂರ್ತಿಯ ಮೆರವಣಿಗೆಯನ್ನು ನೆರವೇರಿಸಲಾಯಿತು.

ಶನಿವಾರದಂದು ಸಂತ ಸೆಬಾಸ್ಟೀನ್ ದೇವಾಲಯದ ಧರ್ಮಗುರುಗಳಾದ ವಂ.ರೆ. ಫಾದರ್ ಸೆಬಾಸ್ಟೀನ್ ಪೂವತ್ತಿಗಲ್ ಅವರು ಸಂಜೆ ದೇವಾಲಯದಲ್ಲಿ ಧ್ವಜಾರೋಹಣ ನೆರವೇರಿಸುವ ಮೂಲಕ ನೂತನ ದೇವಾಲಯದಲ್ಲಿ ಹಬ್ಬದ ಆರಾಧನೆ ಹಾಗೂ ವಿಶೇಷ ಬಲಿ ಪೂಜೆಯನ್ನು ಸಲ್ಲಿಸಿದರು. ಭಾನುವಾರದಂದು ವಾರ್ಷಿಕೋತ್ಸವದ ಅಂಗವಾಗಿ ಮಡಿಕೇರಿ, ಸುಂಟಿಕೊಪ್ಪ, ಕೊಡಗರಹಳ್ಳಿ, ಕಂಬಿಬಾಣೆ, ಕುಶಾಲನಗರ ಸೇರಿದಂತೆ ಇನ್ನಿತರ ಕಡೆಗಳಿಂದ ಆಗಮಿಸಿದ್ದ ನೂರಾರು ಸಂಖ್ಯೆಯ ಭಕ್ತರು ಅಂಬು ಕಾಣಿಕೆಯ ಹರಕೆಗಳನ್ನು ಸಲ್ಲಿಸಿದರು. ನಂತರ ಬೆಳ್ತಂಗಡಿ ಧರ್ಮಕ್ಷೇತ್ರದ ಧರ್ಮಗುರುಗಳಾದ ವಂ.ರೆ. ಫಾದರ್ ಟೋಮಿ ಕಳ್ಳಿಪಾತ್ ಅವರು ಹಬ್ಬದ ಅಡಂಬರ ಬಲಿಪೂಜೆ ಹಾಗೂ ಮಕ್ಕಳಿಗೆ ನೂತನ ಪರಮ ಪ್ರಸಾದ ನೀಡಿದರು. ಸಂತ ಸೆಬಾಸ್ಟೀನ್ ಅವರ ಮೂರ್ತಿಯನ್ನು ಹಿಡಿದು ದೇವಾಲಯದ ಆವರಣದಲ್ಲಿ ಮೆರವಣಿಗೆಯನ್ನು ನಡೆಸಲಾಯಿತು. ಕೊನೆಯಲ್ಲಿ ಆಶೀರ್ವಚನವನ್ನು ನೀಡುವ ಮೂಲಕ ೨ ದಿನದ ವಾರ್ಷಿಕೋತ್ಸವ ಸಮಾರಂಭಕ್ಕೆ ತೆರೆ ಎಳೆದರು.

ಈ ಸಂದರ್ಭ ನೂತನ ದೇವಾಲಯ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಮರದ ಕೆತ್ತನೆ ಕೆಲಸ ನಿರ್ವಹಿಸಿದ್ದ ಕೆತ್ತನೆಗಾರರನ್ನು ಸನ್ಮಾನಿಸಿ, ಗೌರವಿಸಲಾಯಿತು. ಈ ಸಂದರ್ಭ ಸೇಕ್ರೆಡ್ ಆರ್ಟ್ ಕನ್ಯಾಸ್ತಿçà ಮಠದ ಕನ್ಯಾಸ್ತಿçÃಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.