ವೀರಾಜಪೇಟೆ, ಮೇ ೬: ಪಟ್ಟಣದ ಸಂತ ಅನ್ನಮ್ಮ ಪದವಿ ಕಾಲೇಜಿನ ಅಂತಿಮ ಬಿಸಿಎ ವಿದ್ಯಾರ್ಥಿ ಗಳಿಂದ ಆ್ಯನ್ಸ್ ಪ್ರೀಮಿಯರ್ ಲೀಗ್ ಅಂತರ ತರಗತಿ ಕ್ರಿಕೆಟ್ ಮತ್ತು ಬಾಲಕಿಯರ ಥ್ರೋಬಾಲ್ ಪಂದ್ಯಾ ಟವನ್ನು ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದರು.

ಒಟ್ಟು ೮ ತಂಡಗಳಿದ್ದ ಕ್ರಿಕೆಟ್ ಪಂದ್ಯಾಟದಲ್ಲಿ ಉಪನ್ಯಾಸಕರೇ ತಂಡಗಳ ನಿರ್ವಹಣೆಗಾರರಾಗಿ ಕಾರ್ಯನಿರ್ವಹಿಸಿದ್ದು, ಎರಡು ದಿನಗಳ ಕಾಲ ನಡೆದ ಕ್ರೀಡಾಕೂಟ ವನ್ನು ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ರೆ. ಫಾ. ಐಸಾಕ್ ರತ್ನಾಕರ್ ಉದ್ಘಾಟಿಸಿದರು. ಪದವಿ ಕಾಲೇಜು ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಅವರು ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಕ್ರೀಡೆಗಳಲ್ಲಿಯೂ ಭಾಗವಹಿಸಬೇಕೆಂದು ಕಿವಿಮಾತು ಹೇಳಿದರು.

ಒಟ್ಟು ಎಂಟು ತಂಡಗಳು ಭಾಗವಹಿಸಿದ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಎರಡನೇ ದಿವಸ ಸೆಮಿಫೈನಲ್ ಹಾಗೂ ಫೈನಲ್ ಪಂದ್ಯಾಟವು ನಡೆದು ಟೈಟಾನ್ಸ್ ತಂಡವು ಸ್ಪಾರ್ಟನ್ಸ್ ತಂಡದ ವಿರುದ್ಧ ಜಯಗಳಿಸಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿತು.

ಬಾಲಕಿಯರ ಥ್ರೋಬಾಲ್‌ನಲ್ಲಿ ಒಟ್ಟು ೧೧ ತಂಡಗಳು ಪಾಲ್ಗೊಂಡು ಸೆಣಸಿ ಅಂತಿಮವಾಗಿ ತೃತೀಯ ಬಿಸಿಎ ಹಾಗೂ ತೃತೀಯ ಬಿಬಿಎ ತಂಡಗಳು ಫೈನಲ್ ಪ್ರವೇಶಿಸಿದವು. ಫೈನಲ್ ಬಿಸಿಎ ತಂಡ ಫೈನಲ್ ಬಿಬಿಎ ತಂಡವನ್ನು ಸೋಲಿಸಿ ಪ್ರಥಮ ಸ್ಥಾನವನ್ನು ಗಳಿಸಿತು. ಸಮಾರೋಪ ಸಮಾರಂಭದಲ್ಲಿ ವಿದ್ಯಾಸಂಸ್ಥೆಯ ವ್ಯವಸ್ಥಾಪಕರಾದ ರೆ. ಫಾ. ಐಸಾಕ್ ರತ್ನಾಕರ್, ಪ್ರಾಂಶುಪಾಲೆ ತೃಪ್ತಿ ಬೋಪಣ್ಣ, ಕಾಲೇಜಿನ ಐಕ್ಯೂಎಸಿ ಸಂಚಾಲಕಿ ಹೇಮ, ಸಹಾಯಕ ಧರ್ಮಗುರು ಫಾ. ಚಾರ್ಲ್ಸ್, ಬಿಸಿಎ ವಿಭಾಗದ ಮುಖ್ಯಸ್ಥೆ ಸೌಮ್ಯ ಸೋಮರಾಜ್, ದೈಹಿಕ ಶಿಕ್ಷಣ ನಿರ್ದೇಶಕ ಬಿ. ವಿ. ರಾಜ ರೈ ವಿಜೇತರಿಗೆ ಬಹುಮಾನ ವಿತರಿಸಿದರು. ಈ ಸಂದರ್ಭದಲ್ಲಿ ಉಪನ್ಯಾಸಕರು, ಪಂದ್ಯಾಟದ ಸಂಯೋಜಕರಾದ ಇಂದು, ಕಾವೇರಮ್ಮ, ತರುಣ್, ಸೌರವ್ ದಾಸ್ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.