ಸಿದ್ದಾಪುರ, ಮೇ ೬: ಮೂರ್ನಾಡಿನ ದಲಿತ ನಾಗಸ್ ಕ್ರೀಡಾ ಅಕಾಡೆಮಿ ವತಿಯಿಂದ ತಾ. ೨೫ ಮತ್ತು ೨೬ ರಂದು ಜೈ ಭೀಮ್ ಕ್ರೀಡಾಕೂಟ ನಡೆಯಲಿದೆ ಎಂದು ಅಕಾಡೆಮಿ ಅಧ್ಯಕ್ಷ ಹೀರಾ ಸುಬ್ಬಯ್ಯ ತಿಳಿಸಿದ್ದಾರೆ.

ಕಳೆದ ೨೩ ವರ್ಷಗಳಿಂದ ಜನಾಂಗ ಬಾಂಧವರಿಗಾಗಿ ಕ್ರಿಕೆಟ್ ಕ್ರೀಡಾಕೂಟವನ್ನು ಆಯೋಜಿಸಲಾಗುತ್ತಿದ್ದು, ಈ ಬಾರಿ ಕ್ರಿಕೆಟ್ ಜೊತೆಗೆ ಮಕ್ಕಳಿಗೆ ಹಾಗೂ ಮಹಿಳೆಯರಿಗಾಗಿ ವಿವಿಧ ಕ್ರೀಡಾಕೂಟಗಳನ್ನು ಹಮ್ಮಿಕೊಳ್ಳಲಾಗಿದೆ. ಕ್ರೀಡಾಕೂಟ ಮೂರ್ನಾಡಿನ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಲಿದೆ.

ಸಮಾರೋಪ ಸಮಾರಂಭದಲ್ಲಿ ಸಮಾಜದ ಜನಾಂಗ ಬಾಂಧವರಿಗಾಗಿ ಶ್ರಮಿಸಿದ ಇಬ್ಬರು ಗಣ್ಯ ವ್ಯಕ್ತಿಗಳನ್ನು ಸನ್ಮಾನಿಸಲಾಗುವುದು. ಪಂಚಾಯಿತಿ ಮಟ್ಟದ ಕ್ರೀಡಾಕೂಟವಾಗಿದ್ದು, ಭಾಗವಹಿಸಲು ಇಚ್ಛಿಸುವ ತಂಡಗಳು ತಾ. ೧೫ ರೊಳಗಾಗಿ ೯೮೪೫೯೩೪೬೮೯, ೯೯೪೫೬೯೭೮೫೫ ಸಂಖ್ಯೆಯನ್ನು ಸಂಪರ್ಕಿಸಿ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ.