ಮಡಿಕೇರಿ, ಮೇ ೭: ಕೋಮು ಸೌಹಾರ್ದತೆ ಕದಡುವ ಉದ್ದೇಶ ದಿಂದ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸಂದೇಶಗಳನ್ನು ಹರಿಬಿಡುವ ವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ಇಲಾಖೆ ಎಚ್ಚರಿಸಿದೆ.

ಪತ್ರಿಕಾ ಪ್ರಕಟಣೆ ಮೂಲಕ ಈ ಬಗ್ಗೆ ತಿಳಿಸಿರುವ ಇಲಾಖೆ, ಸಾಮಾ ಜಿಕ ಜಾಲತಾಣಗಳಲ್ಲಿ ಬೇರೆ ಜಾತಿ, ಧರ್ಮ, ವ್ಯಕ್ತಿಗಳ ವಿರುದ್ಧ ಉದ್ದೇಶ ಪೂರ್ವಕವಾಗಿ ಸುಳ್ಳು ಸುದ್ದಿ ಹರಿ ಬಿಡುವುದು, ತಮಾಷೆ ವೀಡಿಯೋ ಗಳನ್ನು ಮಾರ್ಪಡಿಸಿ ನಿಜ ಎಂಬು ವುದಾಗಿ ಬಿಂಬಿಸಿ ಸಮುದಾಯದ ಒಳಗೆ ಬೇಧ-ಭಾವ ಮೂಡಿಸುವ ಪ್ರಯತ್ನ ಮಾಡುತ್ತಿರುವುದು ಕಂಡುಬರುತ್ತಿದೆ. ಪ್ರಚೋದನಾಕಾರಿ ಪದಗಳನ್ನು ಬಳಸಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಈಗಾಗಲೇ ೧೦ ಎಫ್.ಐ.ಆರ್, ೮ ಎನ್.ಸಿ.ಆರ್, ೮ ಪಿ.ಎ.ಆರ್, ೯ ಸ್ವಯಂಪ್ರೇರಿತ ಪ್ರಕರಣಗಳನ್ನು ದಾಖಲಿಸಿಕೊಂಡು ಕ್ರಮಕೈಗೊಳ್ಳಲಾಗಿದೆ.

ಕೋಮು ಸೌಹಾರ್ದತೆ ಕದಡುವ ರೀತಿಯ ವೀಡಿಯೋ, ಧ್ವನಿ ಬದಲಾ ಯಿಸಿ ವೀಡಿಯೋ ಹಂಚಿಕೆ, ಸುಳ್ಳು ಸುದ್ದಿ ಹಾಕುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಸಿರುವ ಪೊಲೀಸ್ ಇಲಾಖೆ, ಸಂದೇಶ, ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹಾಕುವ ಮುನ್ನ ಪರಿಶೀಲಿಸಿ ಸತ್ಯಾಸತ್ಯತೆ ಅರಿತುಕೊಳ್ಳ ಬೇಕು. ಸುಳ್ಳು ಸುದ್ದಿ ಪೋಸ್ಟ್ ಮಾಡುವವರ ವಿರುದ್ಧ ಶಿಸ್ತು ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಪ್ರಕಟಣೆ ತಿಳಿಸಿದೆ.