ಮಡಿಕೇರಿ, ಮೇ ೭: ನಗರದ ಹೊರವಲಯದಲ್ಲಿರುವ ಕರ್ಣಂಗೇರಿಯ ಶ್ರೀ ರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ ರಥೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊAದಿಗೆ ಶ್ರದ್ಧಾಭಕ್ತಿಯಿಂದ ಜರುಗಿತು.

ಮುಂಜಾನೆ ಧ್ವಜಾರೋಹಣದ ಮೂಲಕ ಪೂಜಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ನಂತರ ಗಣಪತಿ ಹೋಮ, ದೇವಿಗೆ ಅಭಿಷೇಕ, ಹೂವಿನ ಅಲಂಕಾರ ಹಾಗೂ ತೀರ್ಥ ಸ್ನಾನ ನಡೆಯಿತು. ಕಲಶ ಪೂಜೆ, ನೈವೇದ್ಯ ಪ್ರಸಾದ ಹಾಗೂ ಮಹಾಮಂಗಳಾರತಿ ಬಳಿಕ ದೇವಾಲಯದ ಆವರಣದ ಸುತ್ತಲೂ ದೇವಿಯ ರಥೋತ್ಸವವು ಜರುಗಿತು.

ತುಲಾಭಾರ, ತಲೆಮುಡಿ ತೆಗೆಯುವುದು, ತೀರ್ಥಸ್ನಾನ, ಉರುಳು ಸೇವೆ, ಕುಂಕುಮ ಅರ್ಚನೆ, ಮಂಗಳಾರತಿ ಹಾಗೂ ತಾಯಿಯ ದರ್ಶನ ನಡೆಯಿತು. ನಂತರ ನೆರೆದಿದ್ದ ಭಕ್ತಾದಿಗಳಿಗೆ ಅನ್ನದಾನ ನೆರವೇರಿತು. ಸಂಜೆ ದೇವಾಲಯದಲ್ಲಿ ವಿವಿಧ ಸಾಂಸ್ಕöÈತಿಕ ಕಾರ್ಯಕ್ರಮ ಹಾಗೂ ದೀಪಾಲಂಕಾರ, ಅನ್ನದಾನ ಸೇವೆ, ದೇವಿಯ ದರ್ಶನ ಹಾಗೂ ವಿವಿಧ ಪೂಜಾ ಕಾರ್ಯ ಕ್ರಮಗಳು ನಡೆಯಿತು. ದೇವಾಲಯಕ್ಕೆ ನಗರದ ವಿವಿಧೆಡೆಯಿಂದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.