ಸಿದ್ದಾಪುರ, ಮೇ ೭: ಕಳೆದ ೨೦ ವರ್ಷಗಳಿಂದಲೂ ಅಭಿವೃದ್ಧಿ ಕಾಣದ ಸಿದ್ದಾಪುರ-ಕರಡಿಗೋಡು ರಸ್ತೆ ಅಂದಾಜು ೩೦ ಲಕ್ಷ ರೂಪಾಯಿ ವೆಚ್ಚದಲ್ಲಿ ಡಾಂಬರೀಕರಣಗೊಳ್ಳುತ್ತಿದೆ. ಆದರೆ ಕಾಮಗಾರಿ ಕಳಪೆಯಿಂದ ಕೂಡಿದೆ ಎಂದು ಆರೋಪಿಸಿ ಸಂಬAಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಬರುವವರೆಗೂ ಕಾಮಗಾರಿ ಸ್ಥಗಿತಗೊಳಿಸಬೇಕೆಂದು ಆಟೋ ಚಾಲಕರು ಹಾಗೂ ಸ್ಥಳೀಯರು ಪಟ್ಟು ಹಿಡಿದ ಘಟನೆ ನಡೆದಿದೆ.

ಸ್ಥಳಕ್ಕೆ ಗುತ್ತಿಗೆದಾರರ ಪರವಾಗಿ ಹಾಗೂ ಇಂಜಿನಿಯರ್ ಪರವಾಗಿ ಬಂದವರನ್ನ ಸ್ಥಳೀಯರು ತರಾಟೆಗೆ ತೆಗೆದುಕೊಂಡರು. ಕಾಮಗಾರಿಯ ಯೋಜನೆ, ವೆಚ್ಚ, ಅಗಲ, ಉದ್ದದ ಬಗ್ಗೆ ಪಿಡಬ್ಲ್ಯೂಡಿ ವರ್ಕ್ ಇನ್ಸ್ಪೆಕ್ಟರ್ ದೀಪಕ್ ಅವರನ್ನು ಸ್ಥಳೀಯರು ಪ್ರಶ್ನೆ ಮಾಡಿದರು. ಗುಣಮಟ್ಟದ ಕಾಮಗಾರಿ ಮಾಡಬೇಕೆಂದು ಪಟ್ಟು ಹಿಡಿದ ಚಾಲಕರು ಸಂಬAಧಪಟ್ಟ ಗುತ್ತಿಗೆದಾರರು ಹಾಗೂ ಪಿಡಬ್ಲ್ಯೂಡಿ ಇಲಾಖೆ ಅಧಿಕಾರಿಗಳು ಬರುವವರೆಗೂ ಕಾಮಗಾರಿ ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿದರು.

ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಹುಸೇನ್ ಮಾತನಾಡಿ, ಕರಡಿಗೋಡು ಗ್ರಾಮೀಣ ಪ್ರದೇಶವಾಗಿದ್ದು ಈ ಹಿಂದೆ ಮಾಡಿದ ಹಲವು ಕಾಮಗಾರಿಗಳು ಕಳಪೆಯಾದ ಹಿನ್ನೆಲೆ ಕಳೆದ ೨೦ ವರ್ಷಗಳಿಂದಲೂ ರಸ್ತೆ ಅಭಿವೃದ್ಧಿ ಕಾಣದೆ ಗುಂಡಿಮಯವಾಗಿದೆ. ಯಾವುದೇ ಬಸ್ ಸಂಚಾರ ಇಲ್ಲದೆ ಖಾಸಗಿ ವಾಹನಗಳನ್ನು ಸ್ಥಳೀಯರು ಅವಲಂಬಿಸಿದ್ದಾರೆ. ವಾಹನಗಳ ಓಡಾಟಕ್ಕೂ ಹರಸಾಹಸ ಪಡಬೇಕಾಗಿದೆ.

ಚುನಾವಣೆಗೂ ಮುನ್ನ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣನವರು ಗ್ರಾಮಸ್ಥರ ಬೇಡಿಕೆಗೆ ಸ್ಪಂದಿಸಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ್ದರು. ಗುಣಮಟ್ಟದ ಕಾಮಗಾರಿ ಮಾಡಬೇಕೆಂದು ಕಟ್ಟುನಿಟ್ಟಿನ ಸೂಚನೆಯನ್ನೂ ನೀಡಿದ್ದರು.

ಇದೀಗ ನಿರ್ಲಕ್ಷö್ಯದಿಂದ ಕಾಮಗಾರಿ ಕಳಪೆ ಆಗುತ್ತಿರುವ ಬಗ್ಗೆ ಸ್ಥಳೀಯರು ಆರೋಪಿಸಿದ್ದಾರೆ. ಕೂಡಲೇ ಗುಣಮಟ್ಟದ ರಸ್ತೆ ನಿರ್ಮಾಣ ಮಾಡಬೇಕೆಂದು ಅಧಿಕಾರಿಗಳನ್ನು ಒತ್ತಾಯಿಸಿದರು. ವಾಹನ ಚಾಲಕರ ಮಜ್ದೂರ್ ಸಂಘದ ಅಧ್ಯಕ್ಷ ಸತೀಶ್ ಮಾತನಾಡಿ, ಕಾಡು ಪ್ರಾಣಿಗಳ ಭಯದ ನಡುವೆ ಜನರು ಈ ರಸ್ತೆಯನ್ನ ಅವಲಂಬಿತರಾಗಿದ್ದಾರೆ. ರಸ್ತೆ ಅಭಿವೃದ್ಧಿ ಕೆಲಸದಲ್ಲಿ ಕಳಪೆ ಗುಣಮಟ್ಟದ ಕಾಮಗಾರಿ ನಡೆಯುತ್ತಿದ್ದು ಸಂಬAಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವಂತೆ ಆಗ್ರಹಿಸಿದರು.

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿ ಇಲ್ಲಿ ಯಾವುದೇ ಪ್ರತಿಭಟನೆ ಇಲ್ಲ ರಸ್ತೆ ಗುಣಮಟ್ಟದ ಕಾಮಗಾರಿ ಮಾಡಬೇಕೆಂದು ಒತ್ತಾಯಿಸಲಾಗಿದೆ ಎಂದರು. ಸ್ಥಳಕ್ಕೆ ಆಗಮಿಸಿದ ಪಂಚಾಯಿತಿಯ ಜನಪ್ರತಿನಿಧಿಗಳು ಹಾಗೂ ಕಾಂಗ್ರೆಸ್ ಮುಖಂಡರುಗಳು ಆಟೋ ಚಾಲಕರು ಹಾಗೂ ಸ್ಥಳೀಯರೊಂದಿಗೆ ಮಾತುಕತೆ ನಡೆಸಿದರು.

ಈ ಸಂದರ್ಭ ಕಳಪೆ ರಸ್ತೆಯ ಅಭಿವೃದ್ಧಿ ಬಗ್ಗೆ ಪರ ವಿರೋಧ ಚರ್ಚೆಯೊಂದಿಗೆ ಮಾತಿನ ಚಕಮಕಿ ನಡೆಯಿತು. ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮಾಡದಿರಿ ಎಂದು ಕೆಲವರು ಹೇಳಿದರೆ. ಕಳಪೆ ಕೆಲಸಕ್ಕೆ ಸಮರ್ಥನೆ ಮಾಡಬೇಡಿ ಎಂದು ಸ್ಥಳೀಯರು ಹೇಳಿದರು.

ಪಿಡಬ್ಲ್ಯೂಡಿ ವರ್ಕ್ ಇನ್ಸ್ಪೆಕ್ಟರ್ ದೀಪಕ್ ಗುಣಮಟ್ಟದ ಕಾಮಗಾರಿ ಮಾಡಿಸುವುದಾಗಿ ಭರವಸೆ ನೀಡಿದರು. ಈ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮ ಗೋಪಾಲ್, ಉಪಾಧ್ಯಕ್ಷ ಪಳನಿ ಸ್ವಾಮಿ, ಗ್ರಾಮ ಪಂಚಾಯಿತಿ ಸದಸ್ಯ ಅಬ್ದುಲ್ ಶುಕುರ್, ಮಾಜಿ ಸದಸ್ಯರುಗಳಾದ ಮಿಲನ್, ಕರ್ಪಯ್ಯ, ವಲಯ ಕಾಂಗ್ರೆಸ್ ಅಧ್ಯಕ್ಷ ಪ್ರತೀಶ ಸುರೇಶ್, ಮುಸ್ತಫ, ಮಜೀದ್, ಮಣಿ ಸೇರಿದಂತೆ ಮತ್ತಿತರರು ಹಾಜರಿದ್ದರು.

-ಎಸ್.ಎಂ. ಮುಬಾರಕ್