ಮಡಿಕೇರಿ, ಮೇ ೭: ಪ್ರಸಕ್ತ ೨೦೨೪ನೇ ಸಾಲಿನ ವಿಶ್ವ ಪರಿಸರ ದಿನಾಚರಣೆಯು ‘ಭೂಸುಧಾರಣೆ ಹಾಗೂ ಮರುಭೂಮೀಕರಣ ಮತ್ತು ಬರ ಸ್ಥಿತಿಸ್ಥಾಪಕತ್ವ’ ಎಂಬ ವಿಷಯದ ಮೇಲೆ ಕೇಂದ್ರೀಕೃತವಾಗಿದೆ. ಈ ಜಾಗತಿಕ ಆಚರಣೆಯ ಅನುಗುಣವಾಗಿ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಮತ್ತು ಪರಿಸರ ಸಂಘ ಬೆಂಗಳೂರು (ಎನ್ವಿರಾನ್ಮೆಂಟ್ ಅಸೋಸಿಯೇಷನ್ ಆಫ್ ಬೆಂಗಳೂರು) ಜಂಟಿಯಾಗಿ ‘ಭೂಮಿ ಮತ್ತು ಮಣ್ಣಿನ ಮೇಲೆ ಹವಾಮಾನ ಬದಲಾವಣೆಯ ಪರಿಣಾಮಗಳು’ ಎಂಬ ಶೀರ್ಷಿಕೆಯಡಿಯಲ್ಲಿ ಒಂದು ದಿನದ ರಾಷ್ಟಿçÃಯ ಕಾರ್ಯಾಗಾರ ಜೂನ್ ೮ ರಂದು ಅಕಾಡೆಯ ಕಚೇರಿಯಲ್ಲಿ ನಡೆಯಲಿದೆ.

ಈ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ (ಕನ್ನಡ ಮತ್ತು ಇಂಗ್ಲೀಷ್-೧೦೦೦ ಪದಗಳಿಗೆ ಮೀರದಂತೆ) ನಡೆಯಲಿದೆ. ಹೆಚ್ಚಿನ ವಿವರಗಳಿಗೆ ಅಕಾಡೆಮಿಯ ವೆಬ್‌ಸೈಟ್ hಣಣಠಿs://ಞsಣಚಿಛಿಚಿಜemಥಿ.iಟಿ ನ್ನು ವೀಕ್ಷಿಸಬಹುದು.

ಪ್ರಬಂಧ ಸ್ಪರ್ಧೆಯನ್ನು ‘ಮಣ್ಣು ಮತ್ತು ಭೂಮಿಯ ಮೇಲೆ ಹವಾಮಾನ ಬದಲಾವಣೆಯ ಪರಿಣಾಮಗಳು’ ಎಂಬ ವಿಷಯದ ಮೇಲೆ ಆಯೋಜಿಸಲಾಗುತ್ತಿದ್ದು, ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಲು ಬಯಸುವ ವಿದ್ಯಾರ್ಥಿಗಳು ಹೆಸರು, ಇ-ಮೇಲ್, ಮೊಬೈಲ್ ಸಂಖ್ಯೆ, ಶಾಲೆಯ ಹೆಸರು ಮತ್ತು ಪ್ರಬಂಧದ ಭಾಷೆ ಈ ಮಾಹಿತಿಯನ್ನು ಅಕಾಡೆಮಿಯ ಇ-ಮೇಲ್ essಚಿಥಿ.ಞsಣಚಿ@gmಚಿiಟ.ಛಿom ಕಳುಹಿಸಿಕೊಡಬೇಕು.

ಪ್ರಬಂಧಗಳನ್ನು ಅಕಾಡೆಮಿಯ ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸಬೇಕು. ಪ್ರಬಂಧ ಕಳುಹಿಸಲು ತಾ. ೨೭ ಕೊನೆಯ ದಿನವಾಗಿದೆ ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಎ.ಎಂ. ರಮೇಶ್ ತಿಳಿಸಿದ್ದಾರೆ.