ಮಡಿಕೇರಿ, ಮೇ ೮: ೨೦೨೪-೨೫ನೇ ಸಾಲಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಪರಿಶಿಷ್ಟ ಪಂಗಡದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ ದಾಖಲಿಸಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ತಾ. ೨೧ ಕೊನೆಯ ದಿನವಾಗಿದೆ. ೫ನೇ ತರಗತಿಯಲ್ಲಿ ಶೇ. ೬೦ ಕ್ಕಿಂತ ಹೆಚ್ಚು ಅಂಕ ಗಳಿಸಿರಬೇಕು. ಆಯ್ಕೆಯಾದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಾದ ಶ್ರೀ ಸಾಯಿ ಶಂಕರ್ ಎಜುಕೇಷನಲ್ ಇನ್ಸ್÷್ಟಟ್ಯೂಷನ್ಸ್, ಪ್ರಶಾಂತಿ ನಿಲಯ ಪೊನ್ನಂಪೇಟೆ, ಮತ್ತು ಸೆಂಟ್ ಜೋಸೆಫ್ಸ್ ಗರ್ಲ್ಸ್ ಕಾಂಪೋಸಿಟ್ ಪ್ರೌಢಶಾಲೆ, ಮಡಿಕೇರಿ ಇಲ್ಲಿ ೬ನೇ ತರಗತಿಗೆ ಪ್ರವೇಶ ಅವಕಾಶವನ್ನು ಕಲ್ಪಿಸಲಾಗುವುದು.

ವಿದ್ಯಾರ್ಥಿಗಳಿಂದ ಜಾತಿ ದೃಢೀಕರಣ ಪ್ರಮಾಣ ಪತ್ರ, ಆದಾಯ ದೃಢೀಕರಣ ಪತ್ರ ಹಾಗೂ ಮುಖ್ಯೋಪಾಧ್ಯಾಯರಿಂದ ದೃಢೀಕೃತಗೊಂಡ ಅಂಕಪಟ್ಟಿಯನ್ನು ಸಲ್ಲಿಸುವುದು. ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಪೋಷಕರ ಆದಾಯ ಮಿತಿ ರೂ. ೨ ಲಕ್ಷ ಒಳಗೆ ಇರಬೇಕು. (ಈ ಬಗ್ಗೆ ತಹಶೀಲ್ದಾರರವರಿಂದ ಪಡೆದ ಆದಾಯ ಪ್ರಮಾಣ ಪತ್ರ ಸಲ್ಲಿಸುವುದು).

ಅರ್ಜಿಯನ್ನು ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ವೀರಾಜಪೇಟೆ ತಾಲೂಕು, ಪೊನ್ನಂಪೇಟೆ ೯೯೦೧೪೮೨೭೬೩, ಸಹಾಯಕ ನಿರ್ದೇಶಕರು (ಗ್ರೇಡ್-೧), ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ ೯೪೮೨೮೯೪೬೭೬ ಹಾಗೂ ಸಹಾಯಕ ನಿರ್ದೇಶಕರು (ಗ್ರೇಡ್-೨), ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ ೯೭೩೧೨೫೯೨೮೭ ಇಲ್ಲಿ ಸಂಪರ್ಕಿಸಿ ಪಡೆಯಬಹುದು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ತಿಳಿಸಿದ್ದಾರೆ.