ಅಪಹರಣ ಪ್ರಕರಣ: ಹೆಚ್.ಡಿ. ರೇವಣ್ಣಗೆ ೭ ದಿನ ನ್ಯಾಯಾಂಗ ಬಂಧನ

ಬೆAಗಳೂರು, ಮೇ ೮: ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಜೆಡಿಎಸ್ ಶಾಸಕ ಹೆಚ್.ಡಿ. ರೇವಣ್ಣ ಅವರಿಗೆ ಕೋರ್ಟ್ ೭ ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಎಸ್‌ಐಟಿ ಕಸ್ಟಡಿ ಇಂದಿಗೆ ಮುಕ್ತಾಯವಾದ ಹಿನ್ನೆಲೆ ರೇವಣ್ಣರನ್ನು ಬೆಂಗಳೂರಿನ ೧೭ನೇ ಎಸಿಎಂಎA ಕೋರ್ಟ್ ಮುಂದೆ ಹಾಜರುಪಡಿಸಲಾಗಿದ್ದು ನ್ಯಾಯಧೀಶರು ತಾ. ೧೪ ರವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ. ಏಳು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿದ ಹಿನ್ನೆಲೆಯಲ್ಲಿ ಕೋರ್ಟ್ ಹಾಲ್‌ನಿಂದ ಹೊರಬರುವಾಗ ರೇವಣ್ಣ ಕಣ್ಣೀರು ಹಾಕಿದರು. ಇನ್ನು ಎಸ್‌ಐಟಿ ಅಧಿಕಾರಿಗಳು ರೇವಣ್ಣರನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ದಿದ್ದಾರೆ. ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದ ಮಹಿಳೆಯನ್ನು ಅಪಹರಿಸಿದ ಪ್ರಕರಣದಲ್ಲಿ ಎಸ್‌ಐಟಿ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದು, ರೇವಣ್ಣ ಆಪ್ತನನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ವಿಚಾರಣೆ ನಡೆಸಿದ ನ್ಯಾಯಾಧೀಶರು ಅರ್ಜಿ ವಿಚಾರಣೆಯನ್ನು ತಾ. ೯ಕ್ಕೆ ಮುಂದೂಡಿದ್ದಾರೆ. ಒಂದುವೇಳೆ ಜಾಮೀನು ಸಿಗದ್ದಿದ್ದರೆ ತಾ. ೧೪ ರವರೆಗೆ ರೇವಣ್ಣ ಜೈಲಿನಲ್ಲೇ ಇರಬೇಕಾಗುತ್ತದೆ.

ಪ್ರಜ್ವಲ್ ರೇವಣ್ಣ ಪೆನ್‌ಡ್ರೆöÊವ್ ಕೇಸ್ ಹಿಂದೆ ಹೆಚ್‌ಡಿಕೆ ಕೈವಾಡ: ಡಿ.ಕೆ.ಶಿ.

ಚಿಕ್ಕಮಗಳೂರು, ಮೇ ೮: ಪ್ರಜ್ವಲ್ ರೇವಣ್ಣ ಪೆನ್‌ಡ್ರೆöÊವ್ ಲೀಕ್ ಹಿಂದೆ ಬ್ಲ್ಯಾಕ್‌ಮೇಲ್ ಕಿಂಗ್ ಹೆಚ್.ಡಿ. ಕುಮಾರಸ್ವಾಮಿಯವರ ಕೈವಾಡವಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬುಧವಾರ ಆರೋಪಿಸಿದ್ದಾರೆ. ಚಿಕ್ಕಮಗಳೂರಿನ ಹೆಲಿಪ್ಯಾಡ್‌ನಲ್ಲಿ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ತಮ್ಮ ಕೈವಾಡ ಇದೆ ಎಂದು ಆರೋಪಿಸಿದ್ದ ಕುಮಾರಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕುಮಾರಸ್ವಾಮಿ ಅವರಿಗೆ ಪೆನ್‌ಡ್ರೈವ್‌ನ ಸಂಪೂರ್ಣ ವಿಚಾರ ತಿಳಿದಿದೆ. ವಕೀಲರೊಬ್ಬರು ಮತ್ತು ಇತರರು ಇದರ ಬಗ್ಗೆ ಮಾತನಾಡುತ್ತಿದ್ದಾರೆ. ಕುಮಾರಣ್ಣ ನನ್ನ ರಾಜೀನಾಮೆ ಬಯಸುತ್ತಿದ್ದಾರೆ, ಒಕ್ಕಲಿಗ ನಾಯಕರ ಪೈಪೋಟಿಯಂತೆ, ರಾಜೀನಾಮೆ ಬೇಕಂತೆ, ಕೊಡೋಣ ರಾಜೀನಾಮೆ.. ಮುಗಿಸೋದೇ ಅಲ್ವಾ ಅವರ ಕೆಲಸ, ಕಿಂಗ್ ಆಫ್ ಬ್ಲಾಕ್ ಮೇಲ್. ಆಫೀರ್ಸ್, ಪೊಲಿಟಿಷಿಯನ್ಸ್ಗಳಿಗೆ ಹೆದರಿಸುತ್ತಿದ್ದಾರೆ, ಅವರದು ಇದೇ ಕೆಲಸ. ಚರ್ಚೆ ಮಾಡಲು ಇನ್ನೂ ಟೈಮ್ ಇದೆ, ವಿಧಾನಸಭೆ ಅಧಿವೇಶನ ಇದೆ, ಎಲ್ಲಾ ತೆಗೆದುಕೊಂಡು ಬರಲಿ ಚರ್ಚೆ ಮಾಡೋಣ ಎಂದು ಹೇಳಿದರು.

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ

ಬೆಂಗಳೂರು, ಮೇ ೮: ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾವಿ ರಾಜಕಾರಣಿಯಾಗಿದ್ದ, ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ (೭೯) ಇಂದು ನಿಧನರಾದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ೧೯೪೬ ರ ಜ. ೧೫ ರಲ್ಲಿ ಸುಬ್ಬ ಪೂಜಾರಿ-ದೇವಕಿ ದಂಪತಿಯ ಕುಟುಂಬದಲ್ಲಿ ವಸಂತ ಬಂಗೇರ ಜನಿಸಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಅವರು ಬೆಳ್ತಂಗಡಿ ಕ್ಷೇತ್ರದಿಂದ ೫ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ವಸಂತ ಬಂಗೇರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಟ್ವಿಟರ್‌ನಲ್ಲಿ ಸಂತಾಪ ಸಂದೇಶ ಪ್ರಕಟಿಸಿದ್ದು, ಬಂಗೇರ ಅವರನ್ನು ನೇರ, ನಿಷ್ಠುರ ನಡೆ-ನುಡಿಯ ಆಂತರ್ಯದಲ್ಲಿ ಅಪಾರವಾದ ಜನಪರ ಕಾಳಜಿ ಮತ್ತು ಸ್ನೇಹನಿಷ್ಠೆಯನ್ನು ಹೊಂದಿದ್ದ ದೊಡ್ಡ ಮನುಷ್ಯ ಎಂದು ಬಣ್ಣಿಸಿದ್ದಾರೆ.

ಜೆ.ಪಿ. ನಡ್ಡಾ, ಅಮಿತ್ ಮಾಲವೀಯಗೆ ಬೆಂಗಳೂರು ಪೊಲೀಸರಿಂದ ಸಮನ್ಸ್

ಬೆಂಗಳೂರು, ಮೇ ೮: ಬೆಂಗಳೂರು ಪೊಲೀಸರು ಬಿಜೆಪಿ ರಾಷ್ಟಾçಧ್ಯಕ್ಷ ಜೆ.ಪಿ. ನಡ್ಡಾ, ಪಕ್ಷದ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಲವೀಯ ಅವರಿಗೆ ಸಮನ್ಸ್ ಜಾರಿ ಮಾಡಿದ್ದಾರೆ. ನಿರ್ದಿಷ್ಟ ಅಭ್ಯರ್ಥಿಗಳಿಗೆ ಮತ ಹಾಕದಂತೆ ಎಸ್‌ಸಿ/ಎಸ್‌ಟಿ ಸಮುದಾಯದ ಸದಸ್ಯರಿಗೆ ಬೆದರಿಸುವ ಪೋಸ್ಟ್ನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದಕ್ಕೆ ಸಂಬAಧಿಸಿದ ಪ್ರಕರಣದಲ್ಲಿ ಸಮನ್ಸ್ ಜಾರಿಗೊಳಿಸಿದೆ. ಪ್ರಕರಣಕ್ಕೆ ಸಂಬAಧಿಸಿದAತೆ ಜಾರಿಯಾದ ನೋಟೀಸ್ ತಲುಪಿದ ೭ ದಿನಗಳ ಒಳಗಾಗಿ ಬೆಳಿಗ್ಗೆ ೧೧ ಗಂಟೆ ವೇಳೆಗೆ ನಗರದ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ನಲ್ಲಿ ಸೂಚಿಸಲಾಗಿದೆ. ಕೆಪಿಸಿಸಿ ಈ ಪೋಸ್ಟ್ನ್ನು ಉಲ್ಲೇಖಿಸಿ ಬಿಜೆಪಿ ರಾಷ್ಟಾçಧ್ಯಕ್ಷ ನಡ್ಡಾ, ಮಾಲವೀಯ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ದೂರು ನೀಡಿತ್ತು. ಇದು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯೂ ಆಗಿದೆ ಎಂದು ತಾ. ೫ ರಂದು ಆಯೋಗಕ್ಕೆ ಕಾಂಗ್ರೆಸ್ ದೂರು ಸಲ್ಲಿಸಿತ್ತು. ಜನಪ್ರತಿನಿಧಿಗಳ ಕಾಯ್ದೆ ಹಾಗೂ ಸೆಕ್ಷನ್ ೫೦೫ (೨) (ವರ್ಗಗಳ ನಡುವೆ ದ್ವೇಷ, ದ್ವೇಷ ಅಥವಾ ದುಶ್ಚಟವನ್ನು ಸೃಷ್ಟಿಸುವ ಅಥವಾ ಉತ್ತೇಜಿಸುವ ಹೇಳಿಕೆಗಳು) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲಾದ ವೀಡಿಯೊದಲ್ಲಿ (ಕಾಂಗ್ರೆಸ್ ನಾಯಕ) ರಾಹುಲ್ ಗಾಂಧಿ ಮತ್ತು (ಮುಖ್ಯಮಂತ್ರಿ) ಸಿದ್ದರಾಮಯ್ಯ ಅವರ ಅನಿಮೇಟೆಡ್ ಪಾತ್ರಗಳಿವೆ. ಕ್ಲಿಪ್‌ನಲ್ಲಿ, ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಸಮುದಾಯವನ್ನು ಗೂಡಿನಲ್ಲಿ "ಮೊಟ್ಟೆ" ಎಂಬAತೆ ಚಿತ್ರಿಸಲಾಗಿದೆ.

ಕೇಜ್ರಿವಾಲ್‌ಗೆ ಸೌಲಭ್ಯ ಕೋರಿ ಸಲ್ಲಿಸಿದ್ದ ಪಿಐಎಲ್ ವಜಾ

ನವದೆಹಲಿ, ಮೇ ೮: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜೈಲಿನಿಂದಲೇ ಸರ್ಕಾರ ನಡೆಸಲು ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಕೋರಿ ವಕೀಲರೊಬ್ಬರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್ ಬುಧವಾರ ವಜಾಗೊಳಿಸಿದ್ದು, ರೂ. ೧ ಲಕ್ಷ ದಂಡ ವಿಧಿಸಿದೆ. ಕೇಜ್ರಿವಾಲ್ ರಾಜೀನಾಮೆಗೆ ಯಾವುದೇ ಅನಗತ್ಯ ಒತ್ತಡ ಹೇರದಂತೆ ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ ಅವರನ್ನು ನಿರ್ಬಂಧಿಸುವAತೆ ಅರ್ಜಿದಾರರು ಕೋರಿದ್ದರು. ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ನೇತೃತ್ವದ ನ್ಯಾಯಮೂರ್ತಿ ಮನ್ಮೀತ್ ಪಿ.ಎಸ್. ಅರೋರಾ ಅವರನ್ನೊಳಗೊಂಡ ಪೀಠವು, ತಮ್ಮ ಬಂಧನದ ವಿರುದ್ಧ ಎಎಪಿ ನಾಯಕ ಈಗಾಗಲೇ ಸುಪ್ರೀಂಕೋರ್ಟ್ಮೊರೆ ಹೋಗಿರುವುದರಿಂದ, ನ್ಯಾಯಾಂಗ ಬಂಧನದಲ್ಲಿರುವಾಗ ಅವರಿಗೆ ಯಾವುದೇ ಸೌಲಭ್ಯಗಳನ್ನು ಒದಗಿಸುವ ಕುರಿತು ಯಾವುದೇ ಆದೇಶಗಳನ್ನು ನೀಡಲು ಸಾಧ್ಯವಿಲ್ಲ ಎಂದಿತು. ನ್ಯಾಯಾಲಯವು ಮಾಧ್ಯಮಗಳ ಮೇಲೆ ಸೆನ್ಸಾರ್‌ಶಿಪ್ ವಿಧಿಸಲು ಅಥವಾ ರಾಜಕೀಯ ಪ್ರತಿಸ್ಪರ್ಧಿಗಳು ಹೇಳಿಕೆಗಳನ್ನು ನೀಡುವುದನ್ನು ತಡೆಯಲು ಸಾಧ್ಯವಿಲ್ಲ. ಪತ್ರಿಕಾ ಅಥವಾ ರಾಜಕೀಯ ವಿರೋಧಿಗಳನ್ನು ಮೌನಗೊಳಿಸಲು ನ್ಯಾಯಾಲಯವು ತುರ್ತು ಪರಿಸ್ಥಿತಿಯನ್ನು ಘೋಷಿಸಬೇಕೇ ಅಥವಾ ಸೆನ್ಸಾರ್‌ಶಿಪ್ ಜಾರಿಗೊಳಿಸಬೇಕೇ ಅಥವಾ ಮಾರ್ಷಲ್ ಕಾನೂನನ್ನು ಹೇರಬೇಕೇ ಎಂದು ಪೀಠ ಪ್ರಶ್ನಿಸಿತು. ೧ ಲಕ್ಷ ರೂ.ಗಳ ಬ್ಯಾಂಕ್ ಡ್ರಾಫ್ಟ್ ಸಿದ್ಧವಾಗಿಡಿ ಎಂದು ಅರ್ಜಿದಾರರಿಗೆ ನ್ಯಾಯಾಲಯ ಹೇಳಿತು. ಜೈಲಿನಿಂದ ಸರ್ಕಾರವನ್ನು ನಡೆಸುವುದು ಪ್ರಾಯೋಗಿಕವಾಗಿ ಅಸಾಧ್ಯವಾದರೂ, ತಂತ್ರಜ್ಞಾನದ ಬಳಕೆಯಿಂದ ಅದನ್ನು ಸಾಧ್ಯವಾಗಿಸಬಹುದು ಎಂದು ವಾದಿಸಿದ ಅರ್ಜಿದಾರರು, ಜೈಲಿನಲ್ಲಿ ಕೇಜ್ರಿವಾಲ್‌ಗೆ ವೀಡಿಯೋ ಕಾನ್ಫರೆನ್ಸ್ ವ್ಯವಸ್ಥೆ ಕಲ್ಪಿಸಬೇಕು. ಹೆಚ್ಚುವರಿ ಸಾಲಿಸಿಟರ್ ಜನರಲ್ ಚೇತನ್ ಶರ್ಮಾ ಅವರು ಅರ್ಜಿಯು ತಪ್ಪು ತಿಳುವಳಿಕೆಯಿಂದ ಕೂಡಿದೆ ಮತ್ತು ದುರುದ್ದೇಶದಿಂದ ಸಲ್ಲಿಸಲಾಗಿದೆ ಎಂದು ಹೇಳಿದರು.

ಭಾರಿ ಮಳೆಯಿಂದಾಗಿ ತಡೆಗೋಡೆ ೭ ಮಂದಿ ಸಾವು

ಹೈದರಾಬಾದ್, ಮೇ ೮: ಇಲ್ಲಿನ ಬಾಚುಪಲ್ಲಿ ಪ್ರದೇಶದಲ್ಲಿ ಭಾರಿ ಮಳೆಯಿಂದಾಗಿ ನಿರ್ಮಾಣ ಹಂತದ ಅಪಾರ್ಟ್ಮೆಂಟ್‌ನ ತಡೆಗೋಡೆ ಕುಸಿದು ನಾಲ್ಕು ವರ್ಷದ ಮಗು ಸೇರಿದಂತೆ ಏಳು ಮಂದಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ತೆಲಂಗಾಣದ ಹಲವೆಡೆ ಭಾರಿ ಮಳೆ ಸುರಿದಿದ್ದು, ಕೆಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ನಗರದ ಹಲವೆಡೆ ರಸ್ತೆಗಳು ಜಲಾವೃತಗೊಂಡಿAದ್ದು, ಸಂಚಾರ ದಟ್ಟಣೆ ಉಂಟಾಗಿದೆ. ಡಿಆರ್‌ಎಫ್ (ವಿಪತ್ತು ನಿರ್ವಹಣಾ ಪಡೆ) ತಂಡಗಳನ್ನು ನಿಯೋಜಿಸಲಾಗಿದ್ದು, ನಗರದ ವಿವಿಧೆಡೆ ನೀರು ನಿಂತಿರುವುದು ಮತ್ತು ಬಿದ್ದ ಮರಗಳನ್ನು ತೆರವುಗೊಳಿಸಲಾಗುತ್ತಿದೆ ಎಂದು ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ ಅಧಿಕಾರಿಗಳು ತಿಳಿಸಿದ್ದಾರೆ.