ವೀರಾಜಪೇಟೆ, ಮೇ ೮: ಬಂಟರ ಸಮುದಾಯದ ೧೧ನೇ ವರ್ಷದ ಜಿಲ್ಲಾಮಟ್ಟದ ಕ್ರೀಡಾಕೂಟವು ತಾ. ೧೮ ಹಾಗೂ ೧೯ ರಂದು ವೀರಾಜಪೇಟೆಯ ಸಂತ ಅನ್ನಮ್ಮ ವಿದ್ಯಾಸಂಸ್ಥೆಯ ಮೈದಾನದಲ್ಲಿ ನಡೆಯಲಿದೆ ಎಂದು ವೀರಾಜಪೇಟೆ ತಾಲೂಕು ಬಂಟರ ಸಂಘದ ಅಧ್ಯಕ್ಷ ನೀಲಿಮಾಡು ಲೀಲಾಧರ್ ರೈ ತಿಳಿಸಿದ್ದಾರೆ.

ವೀರಾಜಪೇಟೆ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವೀರಾಜಪೇಟೆ-ಪೊನ್ನಂಪೇಟೆ ತಾಲೂಕು ಸಮಿತಿ ಆಶ್ರಯದಲ್ಲಿ ವೀರಾಜಪೇಟೆಯಲ್ಲಿ ಕ್ರೀಡಾಕೂಟವನ್ನು ನಡೆಸ ಲಾಗುತ್ತಿದೆ.

ಈ ಬಾರಿಯ ಕ್ರೀಡಾಕೂಟದಲ್ಲಿ ಪುರುಷರಿಗೆ ಕ್ರಿಕೆಟ್, ಭಾರದ ಗುಂಡು ಎಸೆತ, ಮಹಿಳೆಯರಿಗೆ ಥ್ರೋಬಾಲ್, ಸಂಗೀತ ಕುರ್ಚಿ, ಮಹಿಳೆ ಹಾಗೂ ಪುರುಷರಿಗೆ ಹಗ್ಗಜಗ್ಗಾಟ, ೧ ರಿಂದ ೪ನೇ ತರಗತಿ, ೫ ರಿಂದ ೭ನೇ ತರಗತಿ ಹಾಗೂ ೮ ರಿಂದ ೧೦ನೇ ತರಗತಿಯ ಮಕ್ಕಳಿಗೆ ಪ್ರತ್ಯೇಕ ವಿಭಾಗಗಳಲ್ಲಿ ಓಟದ ಸ್ಪರ್ಧೆ, ಪುಟಾಣಿಗಳಿಗೆ ಕಪ್ಪೆಜಿಗಿತ ಸೇರಿದಂತೆ ಹಲವು ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.

ತಾ. ೧೮ ರಂದು ಬೆಳಿಗ್ಗೆ ೯ ಗಂಟೆಗೆ ಕ್ರೀಡಾಕೂಟಕ್ಕೆ ಚಾಲನೆ ನೀಡ ಲಾಗುವುದು. ತಾ. ೧೯ ರಂದು ಸಂಜೆ ೬ ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. ಈ ಸಂದರ್ಭ ಮಂಗಳೂರಿನ ಅಲಂಗಾರಿನ ನಕ್ಷತ್ರ ಕಲಾ ತಂಡದಿAದ ‘ನವಶಕ್ತಿ ವೈಭವ’ ಯಕ್ಷಗಾನ ಪ್ರದರ್ಶನÀವಿರುತ್ತದೆ. ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್. ಪೊನ್ನಣ್ಣ, ಬಂಟರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಜಗದೀಶ್ ರೈ, ಪ್ರಧಾನ ಕಾರ್ಯದರ್ಶಿ ರವೀಂದ್ರ ರೈ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.

ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗವಹಿಸಲು ಹಲವು ತಂಡಗಳು ಈಗಾಗಲೇ ನೋಂದಾಯಿಸಿ ಕೊಂಡಿದ್ದು, ತಾ. ೧೧ ರ ಸಂಜೆ ೫ ರವರೆಗೆ ಕ್ರಿಕೆಟ್ ಪಂದ್ಯಗಳಲ್ಲಿ ಭಾಗವಹಿಸುವ ತಂಡಗಳ ನೋಂದ ಣಿಗೆ ಅಂತಿಮ ಅವಕಾಶ ನೀಡಲಾಗಿದೆ. ತಾ. ೧೨ ರಂದು ಬೆಳಿಗ್ಗೆ ೧೦ ಗಂಟೆಗೆ ಕ್ರಿಕೆಟ್ ಪಂದ್ಯಾವಳಿಯ ಟೈಸ್ ಹಾಕಲಾಗುತ್ತದೆ ಎಂದರು.

ಗೋಷ್ಠಿಯಲ್ಲಿ ಬಂಟರ ಸಂಘದ ತಾಲೂಕು ಘಟಕದ ಉಪಾಧ್ಯಕ್ಷ ಪ್ರಕಾಶ್ ರೈ, ಕಾರ್ಯದರ್ಶಿ ಸಂಪತ್ ಶೆಟ್ಟಿ, ಹೇಮಂತ್ ಶೆಟ್ಟಿ, ಮತ್ತಿತರರು ಉಪಸ್ಥಿತರಿದ್ದರು.