ಭಾಗಮಂಡಲ, ಮೇ ೮: ಭಾಗಮಂಡಲದಲ್ಲಿ ಸಂಚಾರ ವ್ಯವಸ್ಥೆಗೆ ಕೈಗೊಳ್ಳಲಾದ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಂಡಿದ್ದು, ಇದೀಗ ಸಂಚಾರಕ್ಕೆ ಮುಕ್ತವಾಗಿದೆ. ಪ್ರತಿ ವರ್ಷ ಮಳೆಗಾಲದಲ್ಲಿ ಭಾಗಮಂಡಲ ಜಲಾವೃತವಾಗಿ ಜನಸಾಮಾನ್ಯರು ಸಂಕಷ್ಟ ಅನುಭವಿಸುತ್ತಿದ್ದರು. ಮೇಲ್ಸೇತುವೆ ಕಾಮಗಾರಿ ಪೂರ್ಣಗೊಂಡಿರುವುದರಿAದ ಈ ಬಾರಿ ಮಳೆಗಾಲದಲ್ಲಿ ಜನರಿಗೆ ಸಂಚಾರಕ್ಕೆ ಅಡ್ಡಿಯಾಗುವುದಿಲ್ಲ. ಜಿಲ್ಲೆಯ ಏಕೈಕ ಮೇಲ್ಸೇತುವೆ ಆರು ವರ್ಷಗಳ ಬಳಿಕ ವಾಹನ ಸಂಚಾರಕ್ಕೆ ಮುಕ್ತಗೊಂಡಿದೆ.

೨೦೧೮ರಲ್ಲಿ ಮೇಲ್ಸೇತುವೆ ಕಾಮಗಾರಿ ನಿರ್ಮಾಣಕ್ಕೆ ಚಾಲನೆ ನೀಡಲಾಗಿದ್ದು, ಸುಮಾರು ಆರು ವರ್ಷಗಳ ಬಳಿಕ ಕಾಮಗಾರಿ ಮುಕ್ತಾಯಗೊಳ್ಳುತ್ತಿದೆ ಈಗಾಗಲೇ ಮೇಲ್ಸೇತುವೆಯಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಸದ್ಯದಲ್ಲಿಯೇ ಮೇಲ್ಸೇತುವೆ ಅಧಿಕೃತವಾಗಿ ಉದ್ಘಾಟನೆಗೊಳ್ಳಲಿದೆ.

ಕಾವೇರಿಯ ಉಗಮಸ್ಥಾನ ತಲಕಾವೇರಿ ಸೇರಿದಂತೆ ಭಾಗಮಂಡಲ ದೇವಾಲಯ ಸಂಕೀರ್ಣಗಳಿAದ ಪ್ರಸಿದ್ಧವಾಗಿದ್ದು ಇಲ್ಲಿ ಜಾತ್ರೆಯ ಸಂಭ್ರಮ. ಭಕ್ತರೂ, ಪ್ರವಾಸಿಗರೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು ಜಿಲ್ಲೆಯ ಪ್ರಮುಖ ಧಾರ್ಮಿಕ ಕ್ಷೇತ್ರವಾಗಿ ಪ್ರಸಿದ್ಧಿ ಹೊಂದಿದೆ. ಮಳೆಗಾಲದಲ್ಲಿ ಮಾತ್ರ ಭಾಗಮಂಡಲದಲ್ಲಿ ಸಂಚಾರ ಸಮಸ್ಯೆ ಉದ್ಭವಿಸುತ್ತಿತ್ತು. ಬೆಟ್ಟಶ್ರೇಣಿಗಳಲ್ಲಿ ಮಳೆಯಾದಾಗ ಭಾಗಮಂಡಲ ಜಲಾವೃತವಾಗುತ್ತಿತ್ತು. ಭಾಗಮಂಡಲದ ತ್ರಿವೇಣಿ ಸಂಗಮ ಮುಳುಗಡೆಯಾಯಿತೆಂದರೆ ತಲಕಾವೇರಿ, ಕೋರಂಗಾಲ ಮತ್ತು ಚೇರಂಗಾಲ ಸೇರಿದಂತೆ ವಿವಿಧ ಗ್ರಾಮಗಳ ಸಂಪರ್ಕ ಕಡಿತಗೊಂಡು ಸಂಚಾರ ಸಮಸ್ಯೆ ಉಲ್ಪಣಿಸುತ್ತಿತ್ತು. ಈ ಸಮಸ್ಯೆಯ ಪರಿಹಾರಕ್ಕಾಗಿ ಮೇಲ್ಸೇತುವೆ ಕಾಮಗಾರಿ ಕೈಗೆತ್ತಿಕೊಳ್ಳಲಾಯಿತು.

೨೦೧೮ರಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಕೆ.ಜೆ ಚಾರ್ಜ್ ಭಾಗಮಂಡಲದಲ್ಲಿ ಮೇಲ್ಸೇತುವೆ ನಿರ್ಮಿಸುವುದಾಗಿ ಘೋಷಿಸಿದರು. ಜಿಲ್ಲೆಯ ಪುಣ್ಯಕ್ಷೇತ್ರವಾದ ಭಾಗಮಂಡಲ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಪ್ರತಿವರ್ಷ ಮಳೆಗಾಲದಲ್ಲಿ ಎರಡು ಮೂರು ತಿಂಗಳ ಕಾಲ ನಿರಂತರ ಸಂಪರ್ಕ ಕಡಿತಗೊಳ್ಳುತ್ತಿದ್ದು, ಗ್ರಾಮಸ್ಥರ ಸಮಸ್ಯೆಯನ್ನು ನೀಗಿಸಲು ೨೬.೮೬ ಕೋಟಿ ರೂ.ವೆಚ್ಚದಲ್ಲಿ ಮೇಲ್ಸೇತುವೆ ಕಾಮಗಾರಿಗೆ ಹಸಿರುನಿಶಾನೆ ನೀಡಲಾಯಿತು. ೨೦೧೮ರಲ್ಲಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡು ೨೦೧೯ರ ಜನವರಿಯಲ್ಲಿ ಕಾಮಗಾರಿ ಆರಂಭಗೊAಡಿತು. ತೇಜಸ್ ಇನ್ಫೊçà ಪ್ರೆöÊವೇಟ್ ಲಿಮಿಟೆಡ್ ಗುತ್ತಿಗೆ ಹೊಂದಿದ್ದು ಜಿಲ್ಲೆಯಲ್ಲಿ ಮೊದಲ ಮೇಲ್ಸೇತುವೆಯಾಗಿ ಕಾಮಗಾರಿ ಆರಂಭಗೊAಡಿತು.

ಒAದು ವರ್ಷದೊಳಗೆ ಮುಗಿಯಬೇಕಾದ ಕಾಮಗಾರಿ ಮುಕ್ತಾಯಗೊಳ್ಳಲು ಆರು ವರ್ಷ ತೆಗೆದುಕೊಂಡಿತು. ನಿರ್ಮಾಣಕ್ಕೆ ೩೫.೮೬ ಕೋಟಿ ರೂ. ವೆಚ್ಚವೂ ಆಗಿದೆ. ಮೇಲ್ಸೇತುವೆ ಡಾಮರೀಕರಣ ಹಾಗೂ ಲೈಟಿಂಗ್ ವ್ಯವಸ್ಥೆಗಳು ಮುಕ್ತಾಯಗೊಂಡಿವೆ. ಮಳೆಗಾಲದಲ್ಲಿ ಮಳೆಯಿಂದಾಗಿ ಕಾಮಗಾರಿ ನಿರ್ಮಾಣಕ್ಕೆ ಅಡಚಣೆ, ಕೊರೊನಾ ಸಮಸ್ಯೆ, ಸ್ಥಳದ ಸಮಸ್ಯೆ ಹಾಗೂ ಗುತ್ತಿಗೆದಾರರ ಕೆಲಸ ವಿಳಂಬ ಮಾಡಿದ ಹಿನ್ನೆಲೆಯಲ್ಲಿ ಕಾಮಗಾರಿ ನಿಧಾನಗತಿಯಲ್ಲಿ ಸಾಗಿದ್ದು, ಹಲವು ಬಾರಿ ಸಾರ್ವಜನಿಕರಿಂದ ವಿರೋಧವೂ ವ್ಯಕ್ತವಾಗಿತ್ತು.

ಇದೀಗ ಮೇಲ್ಸೇತುವೆ ನಿರ್ಮಾಣಗೊಂಡಿರುವುದರಿAದ ಭಾಗಮಂಡಲ ಸೇರಿದಂತೆ ಸುತ್ತಮುತ್ತಲ ಗ್ರಾಮಸ್ಥರಿಗೆ ಮಳೆಗಾಲದಲ್ಲಿ ಅನುಕೂಲಕರವಾಗಿದೆ. ಭಾಗಮಂಡಲ ವ್ಯಾಪ್ತಿಯ ಅಯ್ಯಂಗೇರಿ, ಸಣ್ಣಪುಲಿಕೋಟು, ತಾವೂರು, ತಣ್ಣಿಮಾನಿ, ಕೋರಂಗಾಲ ಗ್ರಾಮದ ಜನರಿಗೆ ಮಾತ್ರವಲ್ಲದೆ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೂ ಉಂಟಾಗುತ್ತಿದ್ದ ಸಮಸ್ಯೆ ನಿವಾರಣೆಯಾಗಿದೆ.

ಮೇಲ್ಸೇತುವೆಯ ಕೊನೆಯ ಭಾಗಗಳಲ್ಲಿ ಕಾಂಕ್ರೀಟ್ ಬಾಕಿ ಇದ್ದು ಮಳೆಗಾಲದ ಆರಂಭಕ್ಕೂ ಮುನ್ನ ಅವುಗಳನ್ನು ಪೂರ್ಣಗೊಳಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಕೆಳಭಾಗದಲ್ಲಿ ಚರಂಡಿ ವ್ಯವಸ್ಥೆ ಇಲ್ಲ. ಮೇಲ್ಸೇತುವೆಯ ಕೊನೆಯ ಭಾಗದಲ್ಲಿ ಚರಂಡಿ ನಿರ್ಮಾಣ ಆಗಬೇಕಿದೆ. ರಸ್ತೆಯ ಅಂಚಿಗೆ ಮಣ್ಣು ಹಾಕದೆ ವಾಹನಗಳ ಸಂಚಾರಕ್ಕೆ ಅಡ್ಡಿ ಆಗುತ್ತಿದೆ.

ಭಾಗಮಂಡಲ- ನಾಪೋಕ್ಲು ತಿರುವು ಭಾಗದಲ್ಲಿ ನಾಮಫಲಕ ಅಳವಡಿಸುವ ಅಗತ್ಯವಿದೆ. ತಿರುವಿನಲ್ಲಿ ವೇಗದ ಮಿತಿ ಇರಬೇಕು. ಇಲ್ಲದಿದ್ದರೆ ಅಪಾಯವಾಗುವ ಸಾಧ್ಯತೆ ಇದೆ ಎಂದು ಸಾರ್ವಜನಿಕರು ಅಭಿಪ್ರಾಯ ಪಟ್ಟಿದ್ದಾರೆ. -ಸುನಿಲ್ ಕುಯ್ಯಮುಡಿ