(ಕಾಯಪಂಡ ಶಶಿ ಸೋಮಯ್ಯ)

ಮಡಿಕೇರಿ, ಮೇ ೮: ಲೋಕಸಭಾ ಚುನಾವಣೆಯ ಬಳಿಕ ಇದೀಗ ಮತ್ತೊಂದು ಚುನಾವಣೆಯ ಬಿರುಸು ಆರಂಭವಾಗುತ್ತಿದೆ. ರಾಜ್ಯ ವಿಧಾನ ಪರಿಷತ್‌ಗೆ ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ನೈರುತ್ಯ ಪದವೀಧರ ಕ್ಷೇತ್ರದ ಹಾಲಿ ಅಭ್ಯರ್ಥಿಗಳ ಅಧಿಕಾರಾವದಿ ಜೂನ್ ೧೮ಕ್ಕೆ ಮುಕ್ತಾಗೊಳ್ಳಲಿದ್ದು ಈ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿದೆ. ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರ ಕ್ಷೇತ್ರದ ವ್ಯಾಪ್ತಿಯಲ್ಲಿ ಕೊಡಗು ಜಿಲ್ಲೆಯೂ ಸೇರಿದೆ. ಹಾಲಿ ಅಭ್ಯರ್ಥಿಯಾಗಿ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್‌ನ ಭೋಜೇಗೌಡ ಅವರು ಇದ್ದಾರೆ. ಪದವೀಧರ ಕ್ಷೇತ್ರದಿಂದ ಕಳೆದ ಚುನಾವಣೆ ಸಂದರ್ಭ ಬಿಜೆಪಿಯಿಂದ ಅಭ್ಯರ್ಥಿಯಾಗಿ ಜಯ ಗಳಿಸಿದ್ದ ಆಯನೂರು ಮಂಜುನಾಥ್ ಅವರು ಕಳೆದ ವಿಧಾನಸಭಾ ಚುನಾವಣೆ ಸಂದರ್ಭ ಬಿಜೆಪಿಗೆ ಹಾಗೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಇವರ ರಾಜೀನಾಮೆ ಬಳಿಕ ಈ ಸ್ಥಾನ ತೆರವಾಗಿದ್ದು ಉಪಚುನಾವಣೆ ನಡೆದಿರಲಿಲ್ಲ. ಇದೀಗ ಕಳೆದ ಬಾರಿಯ ಅಧಿಕಾರಾವಧಿ ಜೂನ್ ೧೮ಕ್ಕೆ ಮುಕ್ತಾಯವಾಗುತ್ತಿದ್ದು ಎರಡೂ ಸ್ಥಾನಕ್ಕೆ ಚುನಾವಣೆ ಘೋಷಣೆ ಯಾಗಿದೆ. ಲೋಕಸಭಾ ಚುನಾವಣಾ ಫಲಿತಾಂಶಕ್ಕೆ ಒಂದು ದಿನ ಮುಂಚಿತವಾಗಿ ಜೂನ್ ೩ರಂದು ಮತದಾನ ನಡೆಯಲಿವೆ. ತಾ. ೬ರಂದು ಮತ ಎಣಿಕೆ ನಡೆಯಲಿದೆ.

ಈ ಚುನಾವಣೆಯೂ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಹಾಗೂ ಬಿಜೆಪಿ - ಜೆಡಿಎಸ್ ಮೈತ್ರಿ ಪಕ್ಷಕ್ಕೆ ಮಹತ್ವದ ಚುನಾವಣೆಯಾಗಿದೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆ.ಕೆ. ಮಂಜುನಾಥ್ ಹಾಗೂ ಆಯನೂರು ಮಂಜುನಾಥ್.

ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬAಧಿಸಿದAತೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕೊಡಗು ಜಿಲ್ಲಾ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಕೆ.ಕೆ. ಮಂಜುನಾಥ್ ಕುಮಾರ್ ಅವರು ಈಗಾಗಲೇ ಘೋಷಿಸಲ್ಪಟ್ಟಿದ್ದಾರೆ. ಪದವೀಧರ ಕ್ಷೇತ್ರಕ್ಕೂ ಕಾಂಗ್ರೆಸ್‌ನಿAದ ಆಯನೂರು ಮಂಜುನಾಥ್ ಅವರೇ ಅಭ್ಯರ್ಥಿಯಾಗಿದ್ದು ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ. ಈಗಾಗಲೇ ಇವರಿಬ್ಬರು ತಮ್ಮ ಕೆಲಸ ಆರಂಭಿಸಿದ್ದಾರೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಅವರು ಇದನ್ನು ಖಚಿತಪಡಿಸಿದ್ದಾರೆ.

ಅಂತಿಮವಾಗದ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳು

ಲೋಕಸಭೆಗೆ ಈಗಾಗಲೇ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಪಕ್ಷ ಮೈತ್ರಿಯ ಮೂಲಕ ಚುನಾವಣೆ ಎದುರಿಸಿದೆ. ಇದರಂತೆ ಇದೀಗ ನಡೆಯಬೇಕಿರುವ ತೆರವಾಗಲಿರುವ ವಿಧಾನಪರಿಷತ್ ಕ್ಷೇತ್ರಕ್ಕೂ ಮೈತ್ರಿ ಮೂಲಕವೇ ಚುನಾವಣೆ ಎದುರಿಸುವುದು ಬಹುತೇಕ ಖಚಿತ. ಆದರೆ ಕೊಡಗು ಒಳಗೊಂಡಿರುವ ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರ ಕ್ಷೇತ್ರಕ್ಕೆ ಈ ಪಕ್ಷಗಳ ಅಭ್ಯರ್ಥಿಗಳು ಯಾರೆಂದು ಇನ್ನೂ ಅಂತಿಮವಾಗಿಲ್ಲ. ಈ ಕುರಿತು ‘ಶಕ್ತಿ’ಯೊಂದಿಗೆ ಪ್ರತಿಕ್ರಿಯಿಸಿರುವ ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರು ಈ ಸ್ಥಾನಕ್ಕೆ ಕ್ಷೇತ್ರ ವ್ಯಾಪ್ತಿಯಲ್ಲಿ ಹಲವು ಆಕಾಂಕ್ಷಿಗಳಿದ್ದಾರೆ. ಈ ಬಗ್ಗೆ ಪಕ್ಷಗಳ ಮುಖಂಡರು ತೀರ್ಮಾನ ಪ್ರಕಟಿಸಿಲಿದ್ದಾರೆ. ಯಾರೇ ಅಭ್ಯರ್ಥಿಗಳಾದರೂ ಒಟ್ಟಿಗೆ ಕೆಲಸ ಮಾಡಿ ಗೆಲುವಿಗೆ ಪ್ರಯತ್ನಿಸಲಾಗುವುದು ಎಂದಿದ್ದಾರೆ.

ಎರಡೂ ಕ್ಷೇತ್ರಗಳ ವ್ಯಾಪ್ತಿಗೆ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ ಹಾಗೂ ದಾವಣಗೆರೆ ಜಿಲ್ಲೆಯ ಮೂರು ತಾಲೂಕುಗಳಾದ ಹೊನ್ನಾಳಿ, ನ್ಯಾಮತ್ತಿ ಹಾಗೂ ಚೆನ್ನಗಿರಿ ಒಳಪಡಲಿದೆ. ಶಿಕ್ಷಕರ ಕ್ಷೇತ್ರಕ್ಕೆ ಸುಮಾರು ೨೩ ಸಾವಿರದಷ್ಟು ಮತದಾರರು ಹಾಗೂ ಪದವೀಧರ ಕ್ಷೇತ್ರಕ್ಕೆ ಸುಮಾರು ೮೦ ಸಾವಿರಕ್ಕೂ ಅಧಿಕ ಮತದಾರರು ಇದ್ದಾರೆ.