ಸಿದ್ದಾಪುರ, ಮೇ ೮: ಬಾಡಗ ಬಾಣಂಗಾಲ ಗ್ರಾಮದ ಮಠ ಶ್ರೀ ಮುತ್ತಪ್ಪ ದೇವಾಲಯದ ವಾರ್ಷಿಕೋತ್ಸವ ಹಾಗೂ ತೆರೆ ಮಹೋತ್ಸವ ಶ್ರದ್ಧಾಭಕ್ತಿಯಿಂದ ಜರುಗಿತು.

ಉತ್ಸವ ಅಂಗವಾಗಿ ದೇವಾಲಯದಲ್ಲಿ ವಿವಿಧ ಪೂಜಾ ಕಾರ್ಯಕ್ರಮಗಳು ನಡೆದವು. ರಾತ್ರಿ ಶ್ರೀ ಮುತ್ತಪ್ಪ ತಿರುವಪ್ಪ ಗುಳಿಗ, ಇನ್ನಿತರ ದೈವಗಳ ಕೋಲಗಳು ಜರುಗಿದವು. ಸುತ್ತಮುತ್ತಲ ಗ್ರಾಮದ ಸಾರ್ವಜನಿಕರು ತೆರೆ ಮಹೋತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಭಕ್ತಾದಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.

ಈ ಸಂದರ್ಭದಲ್ಲಿ ದೇವಾಲಯದ ಆಡಳಿತ ಮಂಡಳಿಯ ಪದಾಧಿಕಾರಿಗಳು ಹಾಜರಿದ್ದರು.