ನಾಪೋಕ್ಲು, ಮೇ ೮: ವಿದ್ಯಾರ್ಥಿಗಳು ವಿದ್ಯೆ ಜೊತೆಗೆ ಉತ್ತಮ ವ್ಯಕ್ತಿತ್ವ ರೂಪಿಸಿಕೊಂಡು ತಮ್ಮ ಜೀವನದ ಮೌಲ್ಯಗಳ ಬೆಳವಣಿಗೆಗೆ ಅಡಿಪಾಯ ಹಾಕಿಕೊಳ್ಳಬೇಕು ಎಂದು ಸಮಾಜ ಸೇವಕ ಬೆಂಗಳೂರಿನ ಡಾ. ನಾಗರಾಜ್ ರಾವ್ ಹೇಳಿದರು.

ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಮತ್ತು ಐಕ್ಯೂಎಸಿ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ವ್ಯಕ್ತಿತ್ವ ವಿಕಸನ ಮತ್ತು ಬೆಳವಣಿಗೆ ಉಪನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಇದು ಸ್ಪರ್ಧಾತ್ಮಕ ಪ್ರಪಂಚವಾಗಿದ್ದು, ಓದಿನ ಜೊತೆ ಈಗಿಂದಲೇ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸಿ ವಿದ್ಯಾರ್ಥಿಗಳು ಯಶಸ್ವಿಯಾಗಬೇಕು. ಸದ್ಯದ ಪರಿಸ್ಥಿತಿಯಲ್ಲಿ ಖಾಸಗಿ ಕಂಪೆನಿಗಳಲ್ಲಿ ನಡೆಸುವ ಸಂದರ್ಶನಗಳ ಬಗ್ಗೆ ಅರಿವು ಇರಬೇಕು. ವಿದ್ಯಾರ್ಥಿಗಳು ಅದಕ್ಕಾಗಿ ತಯಾರಿ ನಡೆಸಬೇಕು. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಇಂಗ್ಲಿಷ್ ಭಾಷೆಯಲ್ಲಿ ನೈಪುಣ್ಯತೆ ಸಾಧಿಸಬೇಕು ಎಂದರು. ಕಾರ್ಯಕ್ರಮವನ್ನು ಉದ್ಯಮಿ ಎಂ.ಆರ್. ಶ್ರೀನಿವಾಸ್ ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಂಶುಪಾಲೆ ಡಾ. ಎನ್.ಪಿ. ಕಾವೇರಿ ಮಾತನಾಡಿ, ಎಲ್ಲಾ ವಿದ್ಯಾರ್ಥಿಗಳು ವ್ಯಕ್ತಿತ್ವ ವಿಕಸನಕ್ಕೆ ಸಂಬAಧಿಸಿದ ಕೌಶಲ್ಯ ಗಳನ್ನು ರೂಢಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಕಾರ್ಯ ಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಅಂಕುರ್ ಶಾಲೆಯ ಪ್ರಾಂಶುಪಾಲೆ ರತ್ನ ಚರ್ಮಣ್ಣ ಅವರಿಗೆ ಲಯನ್ ಸಂಸ್ಥೆ ಮತ್ತು ಕಾಲೇಜಿನ ವತಿಯಿಂದ ಕಿರುಕಾಣಿಕೆ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಕೊಡಗು ವೈದ್ಯಕೀಯ ಕಾಲೇಜು ಮಡಿಕೇರಿಯ ನಿವೃತ್ತ ಮುಖ್ಯ ಆಡಳಿತಾಧಿಕಾರಿ ಮೇರಿ ಚಿಟ್ಟಿಯಪ್ಪ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯ ದೇವಯ್ಯ ಪಾಲ್ಗೊಂಡಿದ್ದರು.