ಮಡಿಕೇರಿ, ಮೇ ೯: ಹಾಸನದ ಪೆನ್‌ಡ್ರೆöÊವ್ ಪ್ರಕರಣಕ್ಕೆ ಸಂಬAಧಿಸಿದAತೆ ಜೆಡಿಎಸ್ ರಾಷ್ಟಿçÃಯ ಅಧ್ಯಕ್ಷ ಹೆಚ್.ಡಿ. ದೇವೇಗೌಡ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ತೇಜೋವಧೆ ಮಾಡಲಾಗುತ್ತಿದೆ ಎಂದು ಆರೋಪಿಸಿ ರಾಜ್ಯ ಸರ್ಕಾರದ ವಿರುದ್ಧ ಜಿಲ್ಲಾ ಜೆಡಿಎಸ್ ಪ್ರತಿಭಟನೆ ನಡೆಸಿತು.

ಗಾಂಧಿ ಮೈದಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿ ಎದುರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಸನ ಪೆನ್‌ಡ್ರೆöÊವ್ ಪ್ರಕರಣದ ರೂವಾರಿ ಎಂದು ಆರೋಪಿಸಿದ ಪ್ರತಿಭಟನಾಕಾರರು ಈ ಪ್ರಕರಣಕ್ಕೆ ಸಂಬAಧಿಸಿದAತೆ ಡಿ.ಕೆ. ಶಿವಕುಮಾರ್, ಕಾರ್ತಿಕ್, ನವೀನ್‌ಗೌಡ ಇವರುಗಳ ವಿರುದ್ಧವೂ ಮೊಕದ್ದಮೆ ದಾಖಲಿಸಬೇಕು; ಡಿಕೆಶಿ ಅವರನ್ನು ಸಂಪುಟದಿAದ ಕೈಬಿಡಬೇಕೆಂದು ಒತ್ತಾಯಿಸಿದರು. ಪೆನ್‌ಡ್ರೆöÊವ್ ಪ್ರಕರಣ ಸಂಬAಧ ರಾಜ್ಯ ಸರ್ಕಾರದ ಅಧೀನದಲ್ಲಿ ಬರುವ ಎಸ್.ಐ.ಟಿ.ಯಿಂದ ನಿಸ್ಪಕ್ಷಪಾತ ತನಿಖೆ ಸಾಧ್ಯವಿಲ್ಲ ಎಂದ ಪ್ರತಿಭಟನಾಕಾರರು ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿದರು. ಶಾಸಕ ಹೆಚ್.ಡಿ. ರೇವಣ್ಣ ಅವರ ವಿರುದ್ಧ ಅನವಶ್ಯಕ ಕೇಸು ದಾಖಲು ಮಾಡಲಾಗಿದೆ ಎಂದು ದೂರಿದರಲ್ಲದೆ ಆ ಕೇಸನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ರಾಜ್ಯ ಸರ್ಕಾರ ಜೆಡಿಎಸ್ ಪಕ್ಷವನ್ನು ಮುಗಿಸುವ ಹುನ್ನಾರ ನಡೆಸುತ್ತಿದೆ. ಸಂತ್ರಸ್ತ ಮಹಿಳೆಯರ ಮಾನಹಾನಿಯನ್ನು ತಡೆಯುವಲ್ಲಿ ವಿಫಲವಾಗಿದೆ ಎಂದು ಆಪಾದಿಸಿದರು.

ಯುವ ಜೆಡಿಎಸ್ ಅಧ್ಯಕ್ಷ ಸಿ.ಎಲ್. ವಿಶ್ವ, ಜೆಡಿಎಸ್ ವಕ್ತಾರ ಕಾಟ್ನಮನೆ ವಿಠಲಗೌಡ, ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ ಮೂಟೆರ ಪುಷ್ಪಾವತಿ ಮತ್ತಿತರರು ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಜೆಡಿಎಸ್ ಪ್ರಮುಖರಾದ ಗುಲಾಬಿ ಜನಾರ್ಧನ, ಪಿ.ಎಂ. ಮಂಜುನಾಥ್, ಜಾಸಿರ್, ರವಿಕಿರಣ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.