ಮಡಿಕೇರಿ, ಮೇ ೧೧: ಪ್ರಸಕ್ತ ಸಾಲಿಗೆ ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಪರಿಶಿಷ್ಟ ಜಾತಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ ದಾಖಲಿಸಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ತಾ. ೨೧ ಕೊನೆಯ ದಿನವಾಗಿದೆ. ೫ನೇ ತರಗತಿಯಲ್ಲಿ ಶೇ. ೬೦ ಕ್ಕಿಂತ ಹೆಚ್ಚು ಅಂಕ ಗಳಿಸಿರಬೇಕು. ಆಯ್ಕೆಯಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಜಿಲ್ಲೆಯ ಪ್ರತಿಷ್ಠಿತ ಶಾಲೆಯಲ್ಲಿ ೬ನೇ ತರಗತಿಗೆ ಪ್ರವೇಶ ಅವಕಾಶವನ್ನು ಕಲ್ಪಿಸಲಾಗುವುದು. ವಿದ್ಯಾರ್ಥಿಗಳಿಂದ ಜಾತಿ ದೃಢೀಕರಣ ಪ್ರಮಾಣ ಪತ್ರ, ಆದಾಯ ದೃಢೀಕರಣ ಪತ್ರ ಹಾಗೂ ಮುಖ್ಯೋಪಾಧ್ಯಾಯರಿಂದ ದೃಢೀಕೃತಗೊಂಡ ಅಂಕ ಪಟ್ಟಿಯನ್ನು ಸಲ್ಲಿಸುವುದು. ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಪೋಷಕರ ಆದಾಯ ಮಿತಿ ರೂ. ೨ ಲಕ್ಷ ಒಳಗೆ ಇರಬೇಕು. (ಈ ಬಗ್ಗೆ ತಹಶೀಲ್ದಾರರಿಂದ ಪಡೆದ ಆದಾಯ ಪ್ರಮಾಣ ಪತ್ರ ಸಲ್ಲಿಸುವುದು).
ಅರ್ಜಿಯನ್ನು ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ ೯೪೮೦೮೪೩೦೩೭, ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ ೯೪೮೦೮೪೩೧೫೫, ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ ೯೪೮೦೮೪೩೧೫೬ ಹಾಗೂ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಪೊನ್ನಂಪೇಟೆ ೯೪೮೦೮೪೩೧೫೭ ಇಲ್ಲಿಂದ ಪಡೆಯಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.