ಮಡಿಕೇರಿ, ಮೇ ೧೦ : ಸಿದ್ದಾಪುರ ವ್ಯಾಪ್ತಿಯಲ್ಲಿ ೨೪೦೦ ಎಕರೆ ಖಾಸಗಿ ಸಂಸ್ಥೆಯೊAದರ ಕಾಫಿ ತೋಟ ಸೇರಿದಂತೆ ಕೊಡಗು ಜಿಲ್ಲೆಯ ಕಾವೇರಿ ಜಲಾನಯನ ಪ್ರದೇಶದ ಜಮೀನುಗಳನ್ನು ಕೃಷಿಯೇತರ ಭೂಮಿಯನ್ನಾಗಿ ಪರಿವರ್ತಿಸಬಾರದು ಎಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಮಡಿಕೇರಿಯಲ್ಲಿ ಧರಣಿ ಸತ್ಯಾಗ್ರಹ ನಡೆಸಿತು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ಧರಣಿ ನಡೆಸಿದ ಪ್ರಮುಖರು ಭೂಪರಿವರ್ತನೆಗೆ ಅವಕಾಶ ನೀಡುವ ಸರಕಾರದ ಕ್ರಮವನ್ನು ತೀವ್ರವಾಗಿ ವಿರೋಧಿಸಿದರು. ವಾಣಿಜ್ಯೋದ್ಯಮ ಉದ್ದೇಶಕ್ಕಾಗಿ ಭೂಪರಿ ವರ್ತಿಸುವುದನ್ನು ಸಂಪೂರ್ಣವಾಗಿ ತಡೆಯಬೇಕು. ಎಲ್ಲಾ ಕಾನೂನುಗಳನ್ನು ಗಾಳಿಗೆ ತೂರಿ ಭೂಪರಿವರ್ತನಾ ಕೃತ್ಯದಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಎನ್.ಯು.ನಾಚಪ್ಪ ಅವರು ಮಾತನಾಡಿ ಕೊಡಗಿನ ಕಾಫಿ ತೋಟಗಳನ್ನು ಭೂಪರಿವರ್ತಿಸುವ ಮೂಲಕ ಪ್ರಭಾವಿಗಳಿಗೆ ವಿಲ್ಲಾ, ಬೃಹತ್ ಬಂಗಲೆ ಹಾಗೂ ಟೌನ್ ಶಿಪ್ಗಳನ್ನು ನಿರ್ಮಿಸಲು ಸರಕಾರ ಅವಕಾಶ ನೀಡಲು ಮುಂದಾಗಿದೆ. ಕಾವೇರಿ ನದಿ ಪಾತ್ರದ ಭೂಪ್ರದೇಶವನ್ನು ನಾಶಪಡಿಸಿದಲ್ಲಿ ಅದು ಭೌಗೋಳಿಕ ಅಸಮತೋಲನಕ್ಕೆ ಕಾರಣವಾಗಲಿದೆ. ದಕ್ಷಿಣ ಭಾರತದ ಜೀವನ ರೇಖೆಯಾದ ಕಾವೇರಿಯ ಜಲಮೂಲಗಳಿಗೆ ಧಕ್ಕೆಯಾಗಲಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಭೂಪರಿವರ್ತನಾ ವಹಿವಾಟನ್ನು ನಿಲ್ಲಿಸಬೇಕು, ಕಠಿಣ ಕಾನೂನು ಕ್ರಮಗಳನ್ನು ಪ್ರಾರಂಭಿಸಬೇಕು, ಮಾರಾಟಗಾರ, ಖರೀದಿದಾರ, ದಲ್ಲಾಳಿ, ಕಂದಾಯ ದಾಖಲೆ ಪರಿವರ್ತನೆ ಅಧಿಕಾರಿ, ಗ್ರಾಮ ಪಂಚಾಯಿತಿ, ಉಪನೋಂದಣಿ ಅಧಿಕಾರಿ ಮತ್ತು ರಾಜಕೀಯ ಪುಡಾರಿಗಳನ್ನು ಶಿಕ್ಷಿಸಬೇಕು ಎಂದು ಒತ್ತಾಯಿಸಿದರು.
ಧರಣಿ ಸತ್ಯಾಗ್ರಹದಲ್ಲಿ ಬೊಪ್ಪಂಡ ಬೊಳ್ಳಮ್ಮ ನಾಣಯ್ಯ, ಪಟ್ಟಮಾಡ ಲಲಿತಾ ಗಣಪತಿ, ಚೋಳಪಂಡ ಜ್ಯೋತಿ ನಾಣಯ್ಯ, ಅಜ್ಜಿನಿಕಂಡ ಇನಿತಾ ಮಾಚಯ್ಯ, ಕಲಿಯಂಡ ಪ್ರಕಾಶ್, ಬಾಚರಣಿಯಂಡ ಚಿಪ್ಪಣ್ಣ, ಅಳಮಂಡ ಜೈ, ಕಿರಿಯಮಾಡ ಶೆರಿನ್, ಪುಲ್ಲೇರ ಕಾಳಪ್ಪ, ಚಂಬAಡ ಜನತ್, ಕರ್ನಲ್ ಚೆಪ್ಪುಡಿರ ಮುತ್ತಣ್ಣ, ಬೇಪಡಿಯಂಡ ಬಿದ್ದಪ್ಪ, ಅರೆಯಡ ಗಿರೀಶ್, ಮೂಕೊಂಡ ದಿಲೀಪ್, ಕಾಟುಮಣಿಯಂಡ ಉಮೇಶ್, ಪುಟ್ಟಿಚಂಡ ದೇವಯ್ಯ, ಚೋಳಪಂಡ ನಾಣಯ್ಯ, ನಂದಿನೆರವAಡ ಅಪ್ಪಯ್ಯ, ಪುದಿಯೊಕ್ಕಡ ಕಾಶಿ, ನಂದಿನೆರವAಡ ಅಯ್ಯಣ್ಣ, ನಂದಿನೆರವAಡ ವಿಜು, ಚೆಟ್ರುಮಾಡ ಸಂಜು ಬೋಪಣ್ಣ, ಕೂಪದಿರ ಸಾಬು, ಮಂದಪAಡ ದೀಪು, ನೆಲ್ಲಮಕ್ಕಡ ವಿವೇಕ್, ದೇವಣೀರ ಸುಜಯ್, ಪಟ್ಟಡ ಅರುಣ್, ಐಲಪಂಡ ಮಿಟ್ಟು, ಬಡುವಂಡ ವಿಜಯ್, ಚೇನಂಡ ಸುರೇಶ್, ಚೇನಂದ ಮಧು, ಮಂದಪAಡ ಯತೀಶ್, ವಕೀಲ ಹೇಮಚಂದ್ರ ಪಾಲ್ಗೊಂಡಿದ್ದರು.
ರಾಷ್ಟçಪತಿ, ಪ್ರಧಾನಮಂತ್ರಿ, ಕೇಂದ್ರ ಪರಿಸರ ಮತ್ತು ಅರಣ್ಯ ಮಂತ್ರಾಲಯ, ಯುನೆಸ್ಕೋದ ಮಹಾನಿರ್ದೇಶಕರು, ವಿಶ್ವ ಪ್ರಸಿದ್ಧ ಅರ್ಥಶಾಸ್ತçಜ್ಞ ಡಾ.ಸುಬ್ರಮಣ್ಯನ್ ಸ್ವಾಮಿ ಅವರಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಪತ್ರ ಸಲ್ಲಿಸಿದರು.