ಮಡಿಕೇರಿ, ಮೇ ೧೦: ೧೯೯೯ ರಲ್ಲಿ ಸ್ಥಾಪನೆ ಗೊಂಡ ಕುಶಾಲನಗರ ಹೋಬಳಿ ಕಾರ್ಯನಿರತ ಪತ್ರಕರ್ತರ ಸಂಘ ಬೆಳ್ಳಿ ಮಹೋತ್ಸವ ಸಂಭ್ರಮ ದಲ್ಲಿದ್ದು, ಈ ಸಂಬAಧ ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ೨೦೨೪ ರ ವರ್ಷದ ಅಂತ್ಯದ ತನಕ ವಿವಿಧ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಎಂ.ಎನ್. ಚಂದ್ರಮೋಹನ್ ತಿಳಿಸಿದರು.
ಮಡಿಕೇರಿ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ರೀಡೆ ಸಾಮಾಜಿಕ ಕಾರ್ಯಕ್ರಮಗಳು, ಶಾಲಾ-ಕಾಲೇಜು, ಸಂಘ-ಸAಸ್ಥೆಗಳೊAದಿಗೆ ಹಲವು ವಿಶಿಷ್ಟ ಕಾರ್ಯಕ್ರಮಗಳನ್ನು ನಡೆಸಲು ಯೋಜನೆ ಹಮ್ಮಿಕೊಳ್ಳಲಾಗಿದೆ. ಕೊಡಗು ಜಿಲ್ಲೆ ಹಾಗೂ ಗಡಿ ಭಾಗದ ಜಿಲ್ಲೆಗಳ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದೊಂದಿಗೆ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಬಗ್ಗೆ ಚಿಂತನೆ ಹರಿಸಲಾಗಿದೆ ಎಂದು ಮಾಹಿತಿ ನೀಡಿದರು. ಸಂಘ ನಡೆದು ಬಂದ ಹಾದಿ, ನೂತನ ಕುಶಾಲನಗರ ತಾಲೂಕಿನ ಸಮಗ್ರ ಮಾಹಿತಿ, ಚಟುವಟಿಕೆಗಳು ದಾಖಲಿಸಲು ಸ್ಮರಣ ಸಂಚಿಕೆಯನ್ನು ಹೊರ ತರಲು ಸಂಘ ನಿರ್ಧರಿಸಿದೆ ಎಂದು ಅವರು ಹೇಳಿದರು.
ಸಂಘದ ಸದಸ್ಯರಿಗೆ ಕ್ಷೇಮ ನಿಧಿ, ಕಚೇರಿ ಕಟ್ಟಡ ನಿರ್ಮಾಣ, ಸದಸ್ಯರಿಗೆ ನಿವೇಶನವನ್ನು ಪಡೆಯುವುದು ಈ ರೀತಿಯ ಚಟುವಟಿಕೆಗಳಿಗೆ ಸಾರ್ವಜನಿಕರು, ಉದ್ಯಮಿಗಳು ರಾಜಕೀಯ ನೇತಾರರು ಸರಕಾರದ ಸಹಕಾರದೊಂದಿಗೆ ಪ್ರೋತ್ಸಾಹದಾಯಕವಾಗಿ ನಿಧಿಯೊಂದನ್ನು ಸ್ಥಾಪಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
ಬೆಳ್ಳಿ ಮಹೋತ್ಸವದಲ್ಲಿ ಸಂಘದ ಸ್ಥಾಪಕ ಅಧ್ಯಕ್ಷರು ಸೇರಿದಂತೆ ಇದುವರೆಗೆ ಕುಶಾಲನಗರ ಹೋಬಳಿ ಸಂಘದಲ್ಲಿ ಸೇವೆ ಸಲ್ಲಿಸಿದ ಅಧ್ಯಕ್ಷರುಗಳನ್ನು ಸನ್ಮಾನಿಸಿ, ಗೌರವಿಸಲಾಗುವುದು. ಬೆಳ್ಳಿ ಹಬ್ಬದ ನೆನಪಿಗಾಗಿ ಹೊರತರಲಿರುವ ಸ್ಮರಣ ಸಂಚಿಕೆಯಲ್ಲಿ ವಿಶೇಷ ಲೇಖನಗಳು ಹಾಗೂ ಕುಶಾಲನಗರ ತಾಲೂಕಿನ ವ್ಯಾಪ್ತಿಯ ಸಮಗ್ರ ಮಾಹಿತಿಯನ್ನು ಪ್ರಕಟಿಸುವ ಸಲುವಾಗಿ ಈಗಾಗಲೇ ಪೂರ್ವ ಸಿದ್ಧತೆ ನಡೆದಿದೆ ಎಂದು ಮಾಹಿತಿ ನೀಡಿದರು.
ತಾಲೂಕು ಸಂಘದ ಕ್ರೀಡಾ ಸಮಿತಿ ಸಂಚಾಲಕ ಕೆ.ಜೆ. ಶಿವರಾಜ್ ಮಾತನಾಡಿ, ಬೆಳ್ಳಿ ಹಬ್ಬ ಮಹೋತ್ಸವ ಅಂಗವಾಗಿ ಕೊಡಗು ಜಿಲ್ಲೆಯ ಕಾರ್ಯನಿರತ ಪತ್ರಕರ್ತರ ಸಂಘದ ಸಮಗ್ರ ಸದಸ್ಯರನ್ನು ಒಳಗೊಂಡು ಜಿಲ್ಲಾಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿಯನ್ನು ತಾ. ೧೯ ರಂದು ಕುಶಾಲನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಈ ಸಂಬAಧ ಈಗಾಗಲೇ ಆಟಗಾರರ ಹರಾಜು ಪ್ರಕ್ರಿಯೆ ನಡೆದಿದ್ದು, ೬ ತಂಡಗಳು ಕ್ರಿಕೆಟ್ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲಿವೆ. ಜಿಲ್ಲೆಯ ೮೦ಕ್ಕೂ ಅಧಿಕ ಮಂದಿ ಪತ್ರಕರ್ತರು ಈ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ವಿಜೇತರಿಗೆ ನಗದು ಹಾಗೂ ಆಕರ್ಷಕ ಟ್ರೋಫಿ ಬಹುಮಾನವಾಗಿ ನೀಡಲಾಗುವುದು ಎಂದು ವಿವರ ಒದಗಿಸಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಸಂಘದ ಉಪಾಧ್ಯಕ್ಷರು ಹಾಗೂ ಕ್ರೀಡಾ ಸಂಚಾಲಕರಾದ ಮಂಜು ಸುವರ್ಣ, ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ವನಿತಾ ಚಂದ್ರಮೋಹನ್, ಕಾರ್ಯದರ್ಶಿ ಕೆ.ಕೆ. ನಾಗರಾಜಶೆಟ್ಟಿ, ಕ್ರೀಡಾ ಸಮಿತಿ ಸಹ ಸಂಚಾಲಕ ಹೆಚ್.ವಿ. ವಿನೋದ್ ಉಪಸ್ಥಿತರಿದ್ದರು.