ಸಿದ್ದಾಪುರ, ಮೇ ೧೩: ಕ್ರೀಡಾ ಚಟುವಟಿಕೆಗಳಲ್ಲಿ ಹೆಚ್ಚು ಆಸಕ್ತಿ ತೋರುವ ಕ್ರೀಡಾಪಟುಗಳ ಅನುಕೂಲಕ್ಕಾಗಿ ತಾಲೂಕು, ಹೋಬಳಿ ಮಟ್ಟದ ಕ್ರೀಡಾ ಮೈದಾನಗಳ ಅಭಿವೃದ್ಧಿಯೊಂದಿಗೆ ಪುನಶ್ಚೇತನಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವೀರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಹೇಳಿದರು.

ವೀರಾಜಪೇಟೆ ತಾಲೂಕಿನ ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೇಟ್ ಹಾಡಿಯಲ್ಲಿ ಎರಡನೇ ವರ್ಷದ ಜೇನುಕುರುಬರ ವಾಲಿಬಾಲ್ ಕಪ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಕ್ರೀಡಾ ಮೈದಾನಗಳ ಅಭಿವೃದ್ಧಿಗೆ ಈಗಾಗಲೇ ಎರಡು ಕೋಟಿ ಅನುದಾನದ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ.

ಸರ್ಕಾರಿ ಭೂಮಿಯನ್ನು ಗುರುತಿಸಲಾಗುತ್ತಿದ್ದು ಗ್ರಾಮೀಣ ಭಾಗದಲ್ಲೂ ಕ್ರೀಡಾ ಮೈದಾನಕ್ಕೆ ಜಾಗ ಮೀಸಲಿಟ್ಟು ಕ್ರೀಡಾಪಟುಗಳ ಅನುಕೂಲಕ್ಕಾಗಿ ಸುಸಜ್ಜಿತ ಆಟದ ಮೈದಾನ ನಿರ್ಮಾಣಕ್ಕೆ ಮುಂದಾಗುವು ದಾಗಿ ಹೇಳಿದರು.

ಕ್ರೀಡೆಗಳ ಮೂಲಕ ಸೌಹಾರ್ದ ಸಮಾಜ ನಿರ್ಮಾಣವಾಗಲಿದ್ದು, ಯುವ ಸಮೂಹ ದುಶ್ಚಟಗಳಿಂದ ದೂರವಿದ್ದು ಕ್ರೀಡಾ ಮನೋಭಾವದ ಮೂಲಕ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿ ಸಮಾಜದ ಮುಖ್ಯವಾಹಿನಿಗೆ ಬರಬೇಕೆಂದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಮೂಕೊಂಡ ವಿಜು ಸುಬ್ರಮಣಿ ಮಾತನಾಡಿ, ಆದಿವಾಸಿ ಜನಾಂಗ ಅಭಿವೃದ್ಧಿಯಿಂದ ದೂರ ಉಳಿದರೂ ಯುವ ಸಮೂಹ ಕ್ರೀಡಾ ಚಟುವಟಿಕೆ ಗಳಲ್ಲಿ ಹೆಚ್ಚು ಆಸಕ್ತಿ ತೋರುತ್ತಿದ್ದಾರೆ. ಮೈದಾನದ ವ್ಯವಸ್ಥೆ ಇಲ್ಲದೆ ರಸ್ತೆ ಬದಿಗಳಲ್ಲಿ ಆಟವಾಡಿದ ಮಕ್ಕಳು ಇದೀಗ ರಾಜ್ಯ, ರಾಷ್ಟçಮಟ್ಟದಲ್ಲೂ ಗುರುತಿಸಿಕೊಂಡಿದ್ದಾರೆ.

ಗ್ರಾಮೀಣ ಭಾಗದ ಕ್ರೀಡಾಕೂಟಗಳಿಗೆ ಸರ್ಕಾರ ಪ್ರೋತ್ಸಾಹ ನೀಡುವುದರ ಮೂಲಕ ಪ್ರತಿ ಗ್ರಾಮಗಳಲ್ಲೂ

(ಮೊದಲ ಪುಟದಿಂದ) ಆಟದ ಮೈದಾನದ ವ್ಯವಸ್ಥೆ ಮಾಡಬೇಕೆಂದರು. ಜೇನು ಕುರುಬರ ಸಂಘದ ಅಧ್ಯಕ್ಷ ಜೆ.ಕೆ. ರಾಮ ಮಾತನಾಡಿ, ಕಾಡಂಚಿನಲ್ಲಿ ತಮ್ಮದೇ ಆದ ಜೀವನ ನಡೆಸುವ ಆದಿವಾಸಿ ಜನಾಂಗ ತಮ್ಮ ಮಕ್ಕಳಿಗೆ ಶಿಕ್ಷಣ, ಕ್ರೀಡಾ ಕಲಿಕೆಗೆ ಹೆಚ್ಚು ಆಸಕ್ತಿ ತೋರುತ್ತಿದ್ದು, ಸರ್ಕಾರ ಆದಿವಾಸಿಗಳ ಅಭಿವೃದ್ಧಿ ಹಾಗೂ ಮಕ್ಕಳ ಶಿಕ್ಷಣ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಗುರುತಿಸಿಕೊಂಡು ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಬೇಕೆಂದು ಹೇಳಿದÀರು. ಜೇನು ಕುರುಬ ಕಪ್ ವಾಲಿಬಾಲ್ ಪಂದ್ಯಾವಳಿಯಲ್ಲಿ ಜಿಲ್ಲೆಯ ಆದಿವಾಸಿ ಸಮುದಾಯಗಳ ೩೦ಕ್ಕೂ ಹೆಚ್ಚು ತಂಡಗಳು ಭಾಗವಹಿಸಿವೆ.

ಕ್ರೀಡಾ ಮನೋಭಾವದ ಮೂಲಕ ಗುರುತಿಸಿಕೊಂಡು ಗುರಿ ಮುಟ್ಟಬೇಕೆಂದು ಹೇಳಿದ ಅವರು, ಯುವ ಸಮೂಹ ದುಶ್ಚಟಗಳಿಂದ ದೂರವಿದ್ದು, ಶಿಕ್ಷಣ ಹಾಗೂ ಕ್ರೀಡೆಗಳ ಮೂಲಕ ಸಾಧನೆಯೊಂದಿಗೆ ಸಮಾಜದಲ್ಲಿ ಗುರುತಿಸಿ ಕೊಳ್ಳಬೇಕೆಂದರು.

ಈ ಸಂದರ್ಭ ಮಾಲ್ದಾರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಾಲತಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಗಣೇಶ್, ಮಾಲ್ದಾರೆ ಗ್ರಾಮ ಪಂಚಾಯಿತಿ ಸದಸ್ಯ ಮಹಮದ್ ಅಲಿ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಗಣೇಶ್, ಹಾಡಿ ಅಧ್ಯಕ್ಷ ರಾಜಪ್ಪ, ಯರವ ಸಮಾಜದ ಅಧ್ಯಕ್ಷ ಸಿದ್ದಪ್ಪ, ಪೊನ್ನಂಪೇಟೆ ಅರಣ್ಯ ಕಾಲೇಜು ಉಪನ್ಯಾಸಕ ಕೆಂಚ ರೆಡ್ಡಿ, ಪ್ರಮುಖರಾದ ಚೆಕ್ಕೆರ ಮನು ಮುತ್ತಪ್ಪ, ಜೆ.ಆರ್. ನಂದೀಶ್, ಜೆ.ಆರ್. ಇಂದಿರಾ, ವೈ.ಸಿ. ತಮ್ಮಯ್ಯ,

ಜೆ.ಬಿ. ರಾಜು, ಮತ್ತಿತರರು

ಇದ್ದರು.