ಮಡಿಕೇರಿ, ಮೇ ೧೨: ನಗರದ ನಾಲ್ಕು ಶಕ್ತಿ ದೇವತೆಗಳಲ್ಲೊಂದಾದ ಶ್ರೀ ಕಂಚಿಕಾಮಾಕ್ಷಿಯಮ್ಮ ದೇವಾಲಯದಲ್ಲಿ ಶ್ರೀ ಮಾರಿಯಮ್ಮ ಬೇವಿನ ಸೊಪ್ಪಿನ ಕರಗೋತ್ಸವ ಪ್ರಯುಕ್ತ ಪಂಪಿನ ಕೆರೆಯಲ್ಲಿ ಕರಗಗಳಿಗೆ ವಿಶೇಷ ಪೂಜೆಯ ನಂತರ ವಾದ್ಯಗೋಷ್ಠಿಯೊಂದಿಗೆ ದೇವಿಯ ಕರಗಗಳ ಮೆರವಣಿಗೆ ನಡೆಯಿತು.