ಮಡಿಕೇರಿ, ಮೇ ೧೩: ನಗರದ ಮಹದೇವಪೇಟೆಯ ಶ್ರೀ ಚೌಡೇಶ್ವರಿ ದೇವಾಲಯದಲ್ಲಿ ತಾ. ೧೪ ರಂದು (ಇಂದು) ದೇವಿ ಜಯಂತಿ ಹಮ್ಮಿಕೊಳ್ಳಲಾಗಿದೆ.

ಶ್ರೀ ಚೌಡೇಶ್ವರಿ ಅಮ್ಮನವರ ವಾರ್ಷಿಕೋತ್ಸವ ಅಂಗವಾಗಿ ಬೆಳಿಗ್ಗೆ ೧೦ ಗಂಟೆಗೆ ಉತ್ಸವ ಮೂರ್ತಿಯನ್ನು ದೇವಾಲಯದಿಂದ ವಾದ್ಯಗೋಷ್ಠಿಯೊಂದಿಗೆ ಮೆರವಣಿಗೆ ಮೂಲಕ ಶ್ರೀ ಬಸವೇಶ್ವರ ದೇವಾಲಯ, ಕನ್ನಿಕಾ ಪರಮೇಶ್ವರಿ ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಿ ನಂತರ ದೇವಾಲಯಕ್ಕೆ ಹಿಂತಿರುಗಿ ವಿಶೇಷ ಪೂಜೆ ಸಲ್ಲಿಸಲಾಗುವುದು. ಮಧ್ಯಾಹ್ನ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.