ಸರ್ಕಾರ ಉರುಳಿಸುವುದು ನನ್ನ ಬಂಧನದ ಹಿಂದಿನ ಉದ್ದೇಶವಾಗಿತ್ತು: ಅರವಿಂದ ಕೇಜ್ರಿವಾಲ್

ನವದೆಹಲಿ, ಮೇ ೧೨: ದೆಹಲಿ ಮತ್ತು ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷದ ನೇತೃತ್ವದ ಸರ್ಕಾರಗಳನ್ನು ಉರುಳಿಸುವುದು ನನ್ನ ಬಂಧನದ ಹಿಂದಿನ ಬಿಜೆಪಿಯ ಉದ್ದೇಶವಾಗಿತ್ತು ಎಂದು ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ರಾಷ್ಟಿçÃಯ ಸಂಚಾಲಕ ಅರವಿಂದ ಕೇಜ್ರಿವಾಲ್ ಭಾನುವಾರ ಆರೋಪಿಸಿದ್ದಾರೆ. ದೆಹಲಿಯಲ್ಲಿ ತಮ್ಮ ಪಕ್ಷದ ಶಾಸಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಪಕ್ಷವನ್ನು ಒಡೆಯುವ ಬಿಜೆಪಿಯ ಯೋಜನೆ ವಿಫಲವಾಗಿದೆ ಮತ್ತು ತಮ್ಮ ಬಂಧನದ ನಂತರ ಎಎಪಿ ಮತ್ತಷ್ಟು ಒಗ್ಗೂಡಿದೆ. ನನ್ನ ಬಂಧನಕ್ಕೂ ಮುನ್ನ ಬಿಜೆಪಿಯವರು ಪಕ್ಷವನ್ನು ಒಡೆಯುತ್ತೇವೆ ಮತ್ತು ದೆಹಲಿ ಮತ್ತು ಪಂಜಾಬ್‌ನಲ್ಲಿ ಸರ್ಕಾರವನ್ನು ಉರುಳಿಸುತ್ತೇವೆ ಎಂದು ಹೇಳುತ್ತಿದ್ದರು ಎಂದರು. ಅವರು ನನ್ನನ್ನು ಬಂಧಿಸಿ, ಪಕ್ಷವನ್ನು ಒಡೆಯುತ್ತೇವೆ ಮತ್ತು ದೆಹಲಿಯಲ್ಲಿ ಮತ್ತು ನಂತರ ಪಂಜಾಬ್‌ನಲ್ಲಿ ಸರ್ಕಾರವನ್ನು ಉರುಳಿಸುವುದಾಗಿ ಯೋಜಿಸಿದ್ದರು. ನನ್ನ ಬಂಧನದ ನಂತರ, ಅವರ ಯೋಜನೆ ವಿಫಲವಾಗಿದೆ. ದೇಶದ ರಾಜಕೀಯ ನಿರೂಪಣೆಯು ತಮ್ಮ ಪಕ್ಷಕ್ಕೆ ವಿರುದ್ಧವಾಗಿದೆ. ಆದರೆ, ನಮ್ಮ ಪಕ್ಷದ ಸದಸ್ಯರು ಒಗ್ಗಟ್ಟಿನಿಂದ ನಿಂತಿದ್ದರಿAದ ಅದನ್ನು ದುರ್ಬಲಗೊಳಿಸಲು ಬಿ.ಜೆ.ಪಿ.ಯವರಿಗೆ ಸಾಧ್ಯವಾಗಲಿಲ್ಲ. ತಾವು ಜೂನ್ ೨ರಂದು ಮತ್ತೆ ಜೈಲಿಗೆ ಹೋಗಬೇಕಾಗುತ್ತದೆ. ತಾವು ಮತ್ತೆ ಜೈಲಿಗೆ ಹೋದ ನಂತರ ಪಕ್ಷವನ್ನು ನೋಡಿಕೊಳ್ಳಬೇಕು ಎಂದು ದೆಹಲಿ ಸಿಎಂ ತಮ್ಮ ಶಾಸಕರಿಗೆ ಹೇಳಿದರು.

ಕಾರು ತೊಳೆಯುವಾಗ ಎಕ್ಸಿಲೇಟರ್ ತುಳಿದ ಬಾಲಕ: ಮಗು ಸಾವು

ಬೆಂಗಳೂರು, ಮೇ ೧೨: ನಗರದ ಓಲ್ಡ್ ಏರ್‌ಪೋರ್ಟ್ ರಸ್ತೆ ಮುರುಗೇಶಪಾಳ್ಯದಲ್ಲಿ ತಂದೆ ಜತೆ ಕಾರು ತೊಳೆಯುವಾಗ ೧೫ ವರ್ಷದ ಬಾಲಕ ಏಕಾಏಕಿ ಎಕ್ಸಿಲೇಟರ್ ತುಳಿದಿದ್ದರ ಪರಿಣಾಮ ಮನೆಯಂಗಳದಲ್ಲಿ ಆಟವಾಡುತ್ತಿದ್ದ ೫ ವರ್ಷದ ಮಗುವಿನ ಮೇಲೆ ಕಾರು ಹರಿದು ಮೃತಪಟ್ಟಿದೆ. ಐದು ವರ್ಷ ಮಗು ಆರವ್ ಮೃತಪಟ್ಟಿದ್ದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇಂದು ಬೆಳಿಗ್ಗೆ ೧೦.೩೦ರ ಸುಮಾರಿಗೆ ಈ ದುರಂತ ನಡೆದಿದೆ. ಕಾರಿನ ಡ್ರೆöÊವಿಂಗ್ ಸೀಟ್‌ನಲ್ಲಿ ಕುಳಿತಿದ್ದ ೧೫ ವರ್ಷದ ಬಾಲಕ ಏಕಾಏಕಿ ಎಕ್ಸಿಲೇಟರ್ ತುಳಿದಿದ್ದಾನೆ. ಪರಿಣಾಮ ಕಾರು ರಭಸವಾಗಿ ಮುನ್ನುಗಿದೆ. ಆ ಸಂದರ್ಭ ರಸ್ತೆಯಲ್ಲಿ ಆಡುತ್ತಿದ್ದ ಮಗುವಿಗೆ ಕಾರು ಡಿಕ್ಕಿಯಾಗಿದೆ. ಕಾರು ಗುದ್ದಿದ ರಭಸಕ್ಕೆ ಆರವ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೃತದೇಹವನ್ನು ಮಣಿಪಾಲ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ತಂದೆಯಿAದಲೇ ಮಗಳ ಮೇಲೆ ಅತ್ಯಾಚಾರ

ತುಮಕೂರು, ಮೇ ೧೨: ತುಮಕೂರು ಜಿಲ್ಲೆಯಲ್ಲಿ ಪಾಪಿ ತಂದೆಯಿAದಲೇ ಮಗಳ ಮೇಲೆ ಪೈಶಾಚಿಕ ಕೃತ್ಯ ನಡೆದಿದೆ. ಹೆತ್ತ ಮಗಳ ಮೇಲೆಯೇ ಕಾಮುಕ ತಂದೆ ಆತ್ಯಾಚಾರ ನಡೆಸಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಹಿಪ್ಪೆತೋಪು ಬಡಾವಣೆಯಲ್ಲಿ ನಡೆದಿದೆ. ೧೩ ವರ್ಷದ ಅಪ್ರಾಪ್ತೆ ಮಗಳ ಮೇಲೆ ಆತ್ಯಾಚಾರ ನಡೆಸಿ ತಂದೆ ಪರಾರಿಯಾಗಿದ್ದಾನೆ. ಈ ಹಿಂದೆಯೂ ಒಮ್ಮೆ ಮಗಳ ಮೇಲೆ ಆತ್ಯಾಚಾರಕ್ಕೆ ಯತ್ನಿಸಿದ್ದ ಎನ್ನಲಾಗಿದೆ. ಘಟನೆ ಕುರಿತು ತಾಯಿಯಿಂದ ತಿಪಟೂರು ನಗರ ಠಾಣೆಗೆ ದೂರು ನೀಡಲಾಗಿದೆ. ತಾಯಿಯ ದೂರಿನ ಅನ್ವಯ ಪೊಲೀಸರು ಪೋಕ್ಸೊ ಪ್ರಕರಣ ದಾಖಲಿಸಕೊಂಡಿದ್ದಾರೆ. ತಿಪಟೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಪತ್ತೆಗಾಗಿ ತಿಪಟೂರು ನಗರ ಪೊಲೀಸರಿಂದ ಕಾರ್ಯಾಚರಣೆ ಮುಂದುವರಿದಿದೆ.

ವಿಶೇಷ ತನಿಖಾ ತಂಡದ ಮೇಲೆ ನಂಬಿಕೆಯಿದೆ : ಸಿಎಂ

ಬೆAಗಳೂರು, ಮೇ ೧೨: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಆರೋಪದ ತನಿಖೆಯನ್ನು ಸಿಬಿಐಗೆ ವರ್ಗಾಯಿಸುವುದನ್ನು ತಳ್ಳಿಹಾಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಕರಣದ ತನಿಖೆ ನಡೆಸುತ್ತಿರುವ ರಾಜ್ಯ ಪೊಲೀಸರ ವಿಶೇಷ ತನಿಖಾ ತಂಡದ ಮೇಲೆ ನಂಬಿಕೆ ಇಟ್ಟಿರುವುದಾಗಿ ಭಾನುವಾರ ಹೇಳಿದ್ದಾರೆ. ಇಂತಹ ಬೇಡಿಕೆ ಇಡುವ ಬಿಜೆಪಿಯನ್ನು ಪ್ರಶ್ನಿಸಿದ ಅವರು, ಪೊಲೀಸರನ್ನು ಏಕೆ ನಂಬುವುದಿಲ್ಲ. ನ್ಯಾಯಯುತ ತನಿಖೆ ನಡೆಸುತ್ತಿರುವ ಎಸ್‌ಐಟಿ ಬಗ್ಗೆ ಜನರ ಮನಸ್ಸಿನಲ್ಲಿ ಗೊಂದಲ ಮೂಡಿಸುವ ಉದ್ದೇಶದಿಂದ ದಾರಿತಪ್ಪಿಸುವ ಹೇಳಿಕೆಗಳನ್ನು ನೀಡುತ್ತಿದ್ದಾರೆ. ನಮ್ಮ ಪೊಲೀಸರು (ಎಸ್‌ಐಟಿ) ತನಿಖೆ ನಡೆಸುತ್ತಿದ್ದಾರೆ, ನಮ್ಮ ಪೊಲೀಸರ ಮೇಲೆ ನಮಗೆ ನಂಬಿಕೆ ಇದೆ. ಅವರು ದಕ್ಷರು ಎಂದು ಅವರು ಕೇಸರಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯು ಒಂದು ಕಾಲದಲ್ಲಿ ಸಿಬಿಐ ಅನ್ನು ಭ್ರಷ್ಟಾಚಾರದ ತನಿಖಾ ದಳ ಎಂದು ಕರೆದಿತ್ತು. ಕಾಂಗ್ರೆಸ್ ಪದೇ ಪದೆ ಬೇಡಿಕೆಯಿಟ್ಟರೂ ಒಂದೇ ಒಂದು ಪ್ರಕರಣವನ್ನು ಕೇಂದ್ರದ ತನಿಖಾ ಸಂಸ್ಥೆಗೆ ಹಸ್ತಾಂತರಿಸಲಿಲ್ಲ. ಸಿಬಿಐ ಮೇಲೆ ನಮಗೆ ನಂಬಿಕೆ ಇಲ್ಲ ಎಂದಲ್ಲ, ಸಿಬಿಐಗೆ ವಹಿಸಬೇಕಾದ ಪ್ರಕರಣಗಳನ್ನು ನೀಡಲಾಗುವುದು ಎಂದರು.

ಸAತ್ರಸ್ತ ಮಹಿಳೆಯರಿಗೆ ಗೂಂಡಾಗಳಿAದ ಬೆದರಿಕೆ: ಪ್ರಧಾನಿ ಮೋದಿ

ಕೋಲ್ಕತ್ತಾ, ಮೇ ೧೨: ತೃಣಮೂಲ ಕಾಂಗ್ರೆಸ್‌ದ್ದು ವೋಟ್ ಬ್ಯಾಂಕ್ ರಾಜಕಾರಣ ಎಂದು ಆರೋಪಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, ರಾಜ್ಯದ ಆಡಳಿತ ಪಕ್ಷದ ಗೂಂಡಾಗಳು ಆರೋಪಿಗಳನ್ನು ರಕ್ಷಿಸಲು ಸಂದೇಶಖಾಲಿಯಲ್ಲಿ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಹೇಳಿದ್ದಾರೆ. ಸಂದೇಶ ಖಾಲಿಯಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರ ವಿರುದ್ಧ ಲೈಂಗಿಕ ಶೋಷಣೆಯ ಆರೋಪಗಳು ಬಹಿರಂಗಗೊAಡ ನಂತರ, ಬಿಜೆಪಿ ಮತ್ತು ಟಿಎಂಸಿ ನಡುವೆ ಕೆಲ ಸಮಯದಿಂದ ಆರೋಪ ಮತ್ತು ಪ್ರತ್ಯಾರೋಪಗಳ ಸುತ್ತು ಜೋರಾಗಿಯೇ ಇದೆ. ಉತ್ತರ ೨೪ ಪರಗಣ ಜಿಲ್ಲೆಯ ಬ್ಯಾರಕ್‌ಪೋರ್‌ನಲ್ಲಿ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, ತೃಣಮೂಲ ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯದಲ್ಲಿ ಹಿಂದೂಗಳು ಎರಡನೇ ದರ್ಜೆಯ ಪ್ರಜೆಗಳಾಗಿದ್ದಾರೆ ಎಂದು ಆರೋಪಿಸಿದರು. ಮೋದಿ ಇರುವವರೆಗೂ ಸಿಎಎ (ಪೌರತ್ವ ತಿದ್ದುಪಡಿ ಕಾಯ್ದೆ) ಜಾರಿಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಅವರು ಪ್ರತಿಪಾದಿಸಿದರು.

ನಿಮ್ಮನ್ನೂ ವಿಚಾರಣೆಗೆ ಕರೆಯಬೇಕಾಗುತ್ತದೆ: ಕುಮಾರಸ್ವಾಮಿಗೆ ಜಿ. ಪರಮೇಶ್ವರ್!

ಬೆಂಗಳೂರು, ಮೇ ೧೨: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಕಿರುಕುಳ ಹಗರಣಕ್ಕೆ ಸಂಬAಧಿಸಿದAತೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರನ್ನೂ ವಿಚಾರಣೆಗೊಳಪಡಿಸಬಹುದು ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದ್ದಾರೆ. ಪ್ರಕರಣದ ವಿಚಾರಣೆಗೆ ಸಂಬAಧಿಸಿದAತೆ ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್ ಅವರು, ರಾಜಕೀಯ ನಾಯಕರು ಸಾರ್ವಜನಿಕ ಹೇಳಿಕೆಗಳನ್ನು ನೀಡುವಾಗ ಅಥವಾ ಪ್ರಕರಣಕ್ಕೆ ಸಂಬAಧಿಸಿದAತೆ ಮಾಹಿತಿಯನ್ನು ಹಂಚಿಕೊಳ್ಳುವಾಗ ಎಚ್ಚರದಿಂದಿರಬೇಕು. ಇದು ಸೂಕ್ಷ್ಮ ವಿಚಾರವಾಗಿದ್ದು, ಜವಾಬ್ದಾರಿ ಅರಿತು ಮಾತನಾಡಬೇಕು. ಹೆಚ್ ಡಿ ಕುಮಾರಸ್ವಾಮಿ ಅವರು ಮಾಜಿ ಸಿಎಂ ಆಗಿದ್ದು, ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಈ ಪ್ರಕರಣದ ಕುರಿತು ಯಾವುದೇ ಹೇಳಿಕೆಗಳನ್ನು ನೀಡುವ ಮೊದಲು ಅಥವಾ ಸಾರ್ವಜನಿಕವಾಗಿ ಯಾವುದೇ ಮಾಹಿತಿಯನ್ನು ಹಂಚಿಕೊಳ್ಳುವ ಮೊದಲು ಜಾಗರೂಕರಾಗಿರಬೇಕು ಮತ್ತು ಇದು ಎಲ್ಲರಿಗೂ ಅನ್ವಯಿಸುತ್ತದೆ ಎಂದರು. ಅಂತೆಯೇ ಮಾತನಾಡುವಾಗ ಈ ಬಗ್ಗೆ ಎಚ್ಚರಿಕೆ ಇರಬೇಕು. ಬಾಯಿಗೆ ಬಂದAತೆ ಹೇಳಿಕೆ ನೀಡಿದರೆ ಕಾನೂನು ಪ್ರಕಾರ ನಿಮ್ಮನ್ನೂ ಕರೆಸಿ ವಿಚಾರಣೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.