ಮಡಿಕೇರಿ, ಮೇ ೧೩: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗಸAಸ್ಥೆಯಾಗಿರುವ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ದಿ ರೋಲ್ ಆಪ್ ಐಸಿಟಿ ಇನ್ ಅಗ್ರಿಕಲ್ಚರಲ್ ಮತ್ತು ಅಲೈಡ್ ಸೆಕ್ರ್ಸ್ ವಿಷಯದ ಮೇಲೆ ತಾ. ೧೫ ರಿಂದ ೨೪ ರವರೆಗೆ ತರಬೇತಿ ಕಾರ್ಯಾಗಾರ ನಡೆಯಲಿದೆ.
ಕಾರ್ಯಾಗಾರದಲ್ಲಿ ವಿವಿಧ ಪ್ರತಿಷ್ಠಿತ ಸಂಸ್ಥೆಗಳ ವಿಜ್ಞಾನಿಗಳು ವಿಷಯಾಧಾರಿತ ಉಪನ್ಯಾಸ ನೀಡಲಿದ್ದಾರೆ. ರಾಜ್ಯದ ವಿವಿಧ ಕೃಷಿ, ತೋಟಗಾರಿಕೆ, ಪಶುವೈದ್ಯಕೀಯ ಹಾಗೂ ಮೀನುಗಾರಿಕಾ ವಿಶ್ವವಿದ್ಯಾನಿಲಯದ ಸಂಶೋಧನಾ ವಿದ್ಯಾರ್ಥಿಗಳು, ಪ್ರಾಧ್ಯಾಪಕರು ಮತ್ತು ಕೃಷಿ, ತೋಟಗಾರಿಕೆ, ಪಶುವೈದ್ಯಕೀಯ ಹಾಗೂ ಮೀನುಗಾರಿಕಾ ಇಲಾಖೆಯ ಅಧಿಕಾರಿಗಳು ಖegisಣಡಿಚಿಣioಟಿ ಐiಟಿಞ : hಣಣಠಿs://ಜಿoಡಿms.gಟe/ಅಇಉಏ೫P೬ಜqಎbಞಖಿಟಿUತಿ೮ ಮೂಲಕ ನೋಂದಾಯಿಸಿಕೊAಡು ಈ ತರಬೇತಿ ಕಾರ್ಯಕ್ರಮದಲ್ಲಿ ಪ್ರತಿನಿಧಿಗಳಾಗಿ ಭಾಗವಹಿಸಬಹುದು. ಹೆಚ್ಚಿನ ವಿವರಗಳಿಗೆ ಕಾರ್ಯಕ್ರಮ ಸಂಯೋಜಕರು (ಮೊ.೯೬೨೦೭೬೭೮೧೯) ಅಥವಾ ಅಕಾಡೆಮಿಯ ವೆಬ್ಸೈಟ್ ತಿತಿತಿ.ಞsಣಚಿಛಿಚಿಜemಥಿ.iಟಿ ನ್ನು ವೀಕ್ಷಿಸಬಹುದು ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಎ.ಎಂ. ರಮೇಶ್ ತಿಳಿಸಿದ್ದಾರೆ.