ಕೂಡಿಗೆ, ಮೇ ೧೩: ಕಳೆದ ಒಂದು ವಾರದಿಂದ ಬಿದ್ದ ಮಳೆಯಿಂದಾಗಿ ಹಾರಂಗಿ ಮುಖ್ಯ ನಾಲೆಯ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ಬೆಟ್ಟದ ಮಣ್ಣು ಕುಸಿದಿದೆ.
ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮದಲಾಪುರದ ಸಮೀಪದಲ್ಲಿರುವ ಹಾರಂಗಿ ಮುಖ್ಯ ನಾಲೆಯ ಕಟ್ ಆ್ಯಂಡ್ ಕವರ್ ಕಾಮಗಾರಿಯು ನಡೆಯುತ್ತಿದ್ದು, ಕಳೆದ ಒಂದು ವಾರದಿಂದ ಬೀಳುತ್ತಿರುವ ಮಳೆಯಿಂದಾಗಿ ಕಾಮಗಾರಿಯ ಸಮೀಪದ ಬೆಟ್ಟದ ಮಣ್ಣು ಮತ್ತು ಕಲ್ಲುಗಳು ಕಾಮಗಾರಿ ನಡೆಯುವ ಸ್ಥಳಕ್ಕೆ ಬಿದ್ದಿದೆ. ಹಾರಂಗಿ ಕಾರ್ಯಪಾಲಕ ಅಭಿಯಂತರ ಪುಟ್ಟಸ್ವಾಮಿ ಮತ್ತು ಸಹಾಯಕ ಇಂಜಿನಿಯರ್ ಸಿದ್ದರಾಜ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಣ್ಣು ಮತ್ತು ಕಲ್ಲುಗಳನ್ನು ತೆರವುಗೊಳಿಸಿ ನಾಲೆಗೆ ತೊಂದರೆ ಆಗದಂತೆ ಕ್ರಮಕೈಗೊಂಡಿದ್ದಾರೆ.