ಸೋಮವಾರಪೇಟೆ, ಮೇ ೧೨: ಕರ್ನಾಟಕ ರಾಜ್ಯ ಸರ್ಕಾರ ಬಸವೇಶ್ವರರನ್ನು ರಾಜ್ಯದ ಸಾಂಸ್ಕೃತಿಕ ನಾಯಕನೆಂದು ಘೋಷಿಸಿದ ನಂತರದ ಮೊದಲ ಬಸವ ಜಯಂತಿ ಕಾರ್ಯಕ್ರಮದಲ್ಲಿ ವಿವಿಧ ಧರ್ಮಗುರುಗಳು, ಸಂಘ-ಸAಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿ ಶ್ರೀ ಬಸವೇಶ್ವರರ ಸ್ಮರಣೆ ಮಾಡಿದರು.

ಮಹಾನ್ ದಾರ್ಶನಿಕ ಬಸವಣ್ಣನವರು ಈ ನಾಡಿನ ಸಾಂಸ್ಕೃತಿಕ ಲೋಕಕ್ಕೆ ಬುನಾದಿ ಹಾಕಿದ ಮಹಾನ್ ಪುರುಷ, ಕೇವಲ ರಾಜ್ಯಕ್ಕೆ ಮಾತ್ರ ಸೀಮಿತವಾಗದೇ ಇಡೀ ರಾಷ್ಟçದ ಸಾಂಸ್ಕೃತಿಕ ನಾಯಕನಾಗಬೇಕು ಎಂದು ಸರ್ವಧರ್ಮ ಗುರುಗಳು ಆಶಯ ವ್ಯಕ್ತಪಡಿಸಿದರು.

ಇಲ್ಲಿನ ವಿವಿಧ ಸಂಘ-ಸAಸ್ಥೆಗಳ ಸಹಯೋಗದೊಂದಿಗೆ ಆಯೋಜನೆ ಗೊಂಡಿದ್ದ ೮೯೧ನೇ ಬಸವ ಜಯಂತಿ ಅಂಗವಾಗಿ ಪಟ್ಟಣದ ಕಕ್ಕೆಹೊಳೆ ಬಳಿಯಲ್ಲಿರುವ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಮಾತನಾಡಿ, ೧೨ನೇ ಶತಮಾನದಲ್ಲಿಯೇ ಬಸವಣ್ಣನವರು ಜಾತಿ, ಮತ, ಭೇದ ತೊಡೆದು ಎಲ್ಲರೂ ಒಂದೇ ಎಂದು ಸಮಾನತೆ ಸಾರಿದ ಮಹಾನ್ ಪುರುಷ. ಅವರ ತತ್ವ ಆದರ್ಶಗಳನ್ನು ಇಂದಿನ ಜನಾಂಗ ಅನುಸರಿಸಿಕೊಂಡರೆ ಉತ್ತಮ ಸಮಾಜ ನಿರ್ಮಾಣವಾಗುತ್ತದೆ ಎಂದರು.

ಹಟ್ಟಿಹೊಳೆ ಚರ್ಚ್ನ ಧರ್ಮ ಗುರುಗಳಾದ ಗಿಲ್ಬರ್ಟ್ ಡಿಸಿಲ್ವ ಮಾತನಾಡಿ, ನಮ್ಮ ಸಂಸ್ಕೃತಿಯ ಮೂಲ ಆಶಯವನ್ನು ಈಡೇರಿಸಿದ ಮಹಾನ್ ವ್ಯಕ್ತಿಯ ಸ್ಮರಣೆ ಮಾಡಬೇಕಾದುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಅವರು ಸಮಾನತೆ ಸಾರಿದ್ದರಿಂದಲೇ ಇಂದು ನಾವೆಲ್ಲಾ ಒಟ್ಟಿಗೆ ಸೇರುವಂತಾಗಿದೆ ಎಂದರು.

ಪಟ್ಟಣದ ಜಲಾಲಿಯಾ ಮಸೀದಿಯ ಧರ್ಮಗುರು ಹಮೀದ್ ಸಖಾಫಿ ಮಾತನಾಡಿ, ೯೦೦ ವರ್ಷಗಳ ಹಿಂದೆಯೇ ಬಸವೇಶ್ವರರು ಸಮಾನತೆಯ ಮೂಲಕ ಸುಭೀಕ್ಷ ಸಮಾಜದ ನಿರ್ಮಾಣಕ್ಕಾಗಿ ಹೋರಾಡಿದವರು.

ಕಂದಾಚಾರ, ಜಾತೀಯತೆ ಸಮಾಜಕ್ಕೆ ಮಾರಕವೆಂದು ತಿಳಿಹೇಳಿದವರು ಎಂದರು. ಅವರು ಬೋಧಿಸಿದ ಸಪ್ತ ತತ್ವಗಳನ್ನು ನಾವುಗಳು ಪಾಲಿಸಿದರೆ ಅಪರಾಧ ಮುಕ್ತ ಸಮಾಜ ನಿರ್ಮಾಣವಾಗುತ್ತದೆ ಎಂದರು.

ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್ ಮಾತನಾಡಿ, ಹಿಂದೆ ರಾಜ್ಯದ ಮುಖ್ಯಮಂತ್ರಿಗಳಾಗಿದ್ದ ಯಡಿಯೂರಪ್ಪನವರು ಬಸವ ಜಯಂತಿಗೆ ಸರ್ಕಾರಿ ರಜೆ ಘೋಷಣೆ ಮಾಡಿ ಸರ್ಕಾರದ ವತಿಯಿಂದಲೇ ಆಚರಿಸುವಂತೆ ಅನುದಾನವನ್ನು ಬಿಡುಗಡೆ ಮಾಡಿದರು. ಅದರಂತೆ ರಾಜ್ಯದೆಲ್ಲೆಡೆ ಇಂದು ಬಸವೇಶ್ವರರ ಸ್ಮರಣೆಯಾಗುತ್ತಿದೆ ಎಂದು ಸ್ಮರಿಸಿದರು. ಬಸವಣ್ಣನವರು ೧೨ನೇ ಶತಮಾನದಲ್ಲಿಯೇ ಅನುಭವ ಮಂಟಪ ಸ್ಥಾಪಿಸಿ ಇಂದಿನ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಡಿಪಾಯ ಹಾಕಿದವರು ಎಂದು ಬಣ್ಣಿಸಿದರು.

ಮುದ್ದಿನಕಟ್ಟೆ ಮಠದ ಶ್ರೀ ಅಭಿನವ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, ಸೋಮವಾರಪೇಟೆ ವಿರಕ್ತ ಮಠದ ಶ್ರೀ ನಿಶ್ಚಲನಿರಂಜನ ದೇಶಿಕೇಂದ್ರ ಸ್ವಾಮೀಜಿ, ಬೆಂಗಳೂರು ಸೋನೆನ ಹಳ್ಳಿ ಬೌದ್ಧ ಗುರುಪೀಠದ ಶ್ರೀ ಮುನಿರಾಜಪ್ಪ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ಈ ಸಂದರ್ಭ ತಹಶೀಲ್ದಾರ್ ನವೀನ್ ಕುಮಾರ್, ಕಾರ್ಯಕ್ರಮದ ಸಂಯೋಜಕ ಎಸ್. ಮಹೇಶ್, ಪಟ್ಟಣ ಪಂಚಾಯಿತಿ ಪ್ರಬಾರ ಮುಖ್ಯಾಧಿಕಾರಿ ರೂಪ ಮಹೇಂದ್ರ, ಆರೋಗ್ಯ ನಿರೀಕ್ಷಕ ಜಾಸೀಂಖಾನ್, ಸೋಮವಾರಪೇಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಎ. ಆದಮ್, ಸದಸ್ಯ ಬಿ.ಎನ್. ಬಸವರಾಜು, ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ದೀಪಕ್, ಕರ್ನಾಟಕ ಪ್ರವಾಸಿ ವಾಹನ ಚಾಲಕರ ಸಂಘದ ಅಧ್ಯಕ್ಷ ರವಿ, ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ವಿಜೇತ, ಸಾಹಿತಿ ಜಲ ಕಾಳಪ್ಪ, ಜೈ ಜವಾನ್ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಈರಪ್ಪ, ನಿವೃತ್ತ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಕೆ. ಮಲ್ಲಪ್ಪ, ಗೌರವಾಧ್ಯಕ್ಷರಾದ ನಿರ್ವಾಣಿ ಶೆಟ್ಟಿ, ಮೋಟಾರು ಕೆಲಸಗಾರರ ಸಂಘದ ಅಧ್ಯಕ್ಷ ಬಾಲಕೃಷ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್, ಬಿ.ಜೆ.ಪಿ. ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಕವಿತಾ ವಿರೂಪಾಕ್ಷ, ವಕ್ಫ್ ಮಂಡಳಿ ಮಾಜಿ ಅಧ್ಯಕ್ಷ ಕೆ.ಎ. ಯಾಕೂಬ್, ಪುಷ್ಪಗಿರಿ ಜೇಸಿ ಸಂಸ್ಥೆ ಅಧ್ಯಕ್ಷ ಎಸ್.ಆರ್. ವಸಂತ, ನಗರ ಬಿಜೆಪಿ ಅಧ್ಯಕ್ಷ ಸೊಮೇಶ್, ಬಹುಜನ ಸಮಾಜವಾದಿ ಪಕ್ಷದ ಜಿಲ್ಲಾ ಪದಾಧಿಕಾರಿ ಜಯಪ್ಪ ಹಾನಗಲ್ಲು, ವಿವಿಧ ಸಂಘ-ಸAಸ್ಥೆಗಳ ಪದಾಧಿಕಾರಿಗಳು ಹಾಜರಿದ್ದರು.