ಮಡಿಕೇರಿ, ಮೇ ೧೩: ವೀರಾಜಪೇಟೆ ವಿಭಾಗದ, ತಿತಿಮತಿ ವಲಯದ ವ್ಯಾಪ್ತಿಗೆ ಒಳಪಡುವ ಬಾಡಗ ಬಾಣಂಗಾಲ ಗ್ರಾಮದ ಎಲಿಕಲ್ ಎಸ್ಟೇಟ್‌ಗೆ (ಬಿಬಿಟಿಸಿ) ಒಳಪಡುವ ಬಾಡಗ ಬಾಣಂಗಾಲ ಕಾಫಿ ಎಸ್ಟೇಟ್ ಹಾಗೂ ಸುತ್ತಮುತ್ತಲಿನ ತೋಟಗಳಲ್ಲಿ ಇರುವ ೩ ಕಾಡಾನೆಗಳನ್ನು ಸೆರೆಹಿಡಿದು ರೇಡಿಯೋ ಕಾಲರ್ ಅಳವಡಿಸುವ ಕಾರ್ಯಾಚರಣೆ ತಾ.೧೪ ರಿಂದ (ಇಂದಿನಿAದ) ಪ್ರಾರಂಭ ವಾಗುತ್ತಿರುವುದರಿಂದ ಗ್ರಾಮಗಳ ಸಾರ್ವಜನಿಕರು, ತೋಟದ ಮಾಲೀಕರು, ಕಾರ್ಮಿಕರು ಹಾಗೂ ಶಾಲಾ ಮಕ್ಕಳು ಜಾಗರೂಕತೆಯಿಂದ ಇದ್ದು, ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಕಾರ್ಯಾಚರಣೆ ಪೂರ್ಣಗೊಳಿಸಲು ಸಹಕಾರ ನೀಡಬೇಕೆಂದು ಅರಣ್ಯ ಇಲಾಖೆ ಪ್ರಕಟಣೆ ಕೋರಿದೆ.